9
ಅಪೊಸ್ತಲರ ಅಧಿಕಾರ
ನಾನು ಸ್ವತಂತ್ರನಲ್ಲವೋ? ನಾನು *ಅಪೊಸ್ತಲನಲ್ಲವೋ? ನಮ್ಮ ಕರ್ತನಾದ ಯೇಸುವನ್ನು ನಾನು ಕಂಡವನಲ್ಲವೇ? ನಾನು ಕರ್ತನಲ್ಲಿ ಮಾಡಿದ ಸೇವೆಯ ಪ್ರತಿಫಲವು ನೀವೇ ಅಲ್ಲವೇ? ಇತರರಿಗೆ ನಾನು ಅಪೊಸ್ತಲನಲ್ಲದಿದ್ದರೂ ನಿಮಗಾದರೋ ಅಪೊಸ್ತಲನಾಗಿದ್ದೇನೆ. ನಾನು ಕರ್ತನ ಅಪೊಸ್ತಲನಾಗಿದ್ದೇನೆಂಬುದಕ್ಕೆ ನೀವೇ ನನ್ನ ಮುದ್ರೆಯಾಗಿದ್ದಿರಿ. ನನ್ನನ್ನು ವಿಮರ್ಶಿಸುವವರಿಗೆ ನನ್ನ ಪ್ರತ್ಯುತ್ತರವೇನೆಂದರೆ, ಅನ್ನ, ಪಾನಗಳಿಗೆ ನಮಗೆ ಹಕ್ಕಿಲ್ಲವೇ? ಕ್ರೈಸ್ತವಿಶ್ವಾಸಿಯಾದ ಹೆಂಡತಿಯನ್ನು ಕರೆದುಕೊಂಡು ಸಂಚರಿಸುವುದಕ್ಕೆ ಮಿಕ್ಕಾದ ಅಪೊಸ್ತಲರಂತೆಯೂ, ಕರ್ತನ §ಸಹೋದರರಂತೆಯ, ಮತ್ತು *ಕೇಫನಂತೆಯೂ ನಮಗೆ ಹಕ್ಕಿಲ್ಲವೇ? ಅಥವಾ, ದುಡಿಯದೆ ಜೀವಿಸುವುದಕ್ಕೆ ನನಗೂ ಬಾರ್ನಬನಿಗೂ ಹಕ್ಕಿಲ್ಲವೇ? ಯಾವ ಸಿಪಾಯಿಯಾದರೂ ಸ್ವಂತ ಖರ್ಚಿನಿಂದ ಸೇವೆ ಮಾಡುವುದುಂಟೋ? ದ್ರಾಕ್ಷಾತೋಟವನ್ನು ಮಾಡಿದವನು ಅದರ ಫಲವನ್ನು ತಿನ್ನದೇ ಇರುವುದುಂಟೋ? ತನ್ನ ಹಿಂಡನ್ನು ಸಾಕುವವನು ಅವುಗಳ ಹಾಲನ್ನು ಕುಡಿಯದೆ ಜೀವಿಸುವುದುಂಟೋ? ನಾನು ಹೇಳಿದ್ದು ಬರೀ ಲೋಕವಾಡಿಕೆಯ ಮಾತೋ? ಧರ್ಮಶಾಸ್ತ್ರವೂ ಇದನ್ನು ಹೇಳುವುದಿಲ್ಲವೋ? §“ಕಣತುಳಿಯುವ ಎತ್ತಿನ ಬಾಯನ್ನು ಕಟ್ಟಬಾರದೆಂದು” ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿದೆ. ದೇವರು ಚಿಂತಿಸುವುದು ಎತ್ತುಗಳಿಗಾಗಿಯೋ? 10 ಖಂಡಿತವಾಗಿ ನಮಗೋಸ್ಕರವಾಗಿಯೇ ಆತನು ಹೇಳುತ್ತಾನಲ್ಲವೇ? ಹೌದು, *ನಮಗೋಸ್ಕರ ಬರೆಯಲ್ಪಟ್ಟಿದೆ. ಉಳುವವನು ಬೆಳೆಯಲ್ಲಿ ತನಗೆ ಪಾಲು ದೊರಕುವ ನಿರೀಕ್ಷೆಯಿಂದ ಉಳಬೇಕು, ಹಾಗೂ ಒಕ್ಕುವವನು ತನಗೆ ಸುಗ್ಗಿಯಲ್ಲಿ ಪಾಲು ದೊರಕುವುದೆಂದು ನಿರೀಕ್ಷೆಯಲ್ಲಿ ಒಕ್ಕಬೇಕು. 11  ನಾವು ನಿಮ್ಮಲ್ಲಿ ಆತ್ಮೀಕವಾದ ಬೀಜವನ್ನು ಬಿತ್ತಿದ ಮೇಲೆ ನಿಮ್ಮಿಂದ ಭೌತಿಕವಾದ ಪೈರನ್ನು ಕೊಯ್ಯುವುದು ದೊಡ್ಡ ವಿಷಯವೋ? 12 ಈ ಅಧಿಕಾರ ಇತರರಿಗೆ ನಿಮ್ಮ ಮೇಲೆ ಇದ್ದರೆ ನಮಗೆ ಎಷ್ಟೋ ಹೆಚ್ಚಾಗಿ ಇರಬೇಕಲ್ಲಾ? ಆದರೂ ನಾವು ಆ ಅಧಿಕಾರವನ್ನು ಚಲಾಯಿಸಲಿಲ್ಲ, ಕ್ರಿಸ್ತನ ಸುವಾರ್ತೆಗೆ ಅಡ್ಡಿಮಾಡಬಾರದೆಂದು ಎಲ್ಲವನ್ನು ಸಹಿಸಿಕೊಂಡೆವು. 13  §ದೇವಾಲಯದಲ್ಲಿ ಸೇವೆ ಸಲ್ಲಿಸುವವರು ದೇವಾಲಯದಿಂದ ತಮ್ಮ ಬದುಕನ್ನು ಸಾಗಿಸಬೇಕೆಂದೂ ಮತ್ತು ಯಜ್ಞವೇದಿಯ ಬಳಿ ಸೇವೆಮಾಡುವವರು ಆ ವೇದಿಗೆ ಬರುವ ಪದಾರ್ಥಗಳಲ್ಲಿ ಪಾಲುಹೊಂದುತ್ತಾರೆಂಬುದೂ ನಿಮಗೆ ತಿಳಿಯದೋ? 14 ಅದೇ ರೀತಿಯಾಗಿ ಕರ್ತನು ಸಹ *ಸುವಾರ್ತೆಯನ್ನು ಸಾರುವವರು ಸುವಾರ್ತೆಯಿಂದಲೇ ತಮ್ಮ ಜೀವನಮಾಡಬೇಕೆಂದು ಆಜ್ಞಾಪಿಸಿದ್ದಾನೆ.
15  ನಾನಂತೂ ಇವುಗಳಲ್ಲಿ ಒಂದನ್ನೂ ಪಾಲಿಸಲಿಲ್ಲ. ನನಗೆ ಏನಾದರೂ ಸಿಕ್ಕಬೇಕೆಂಬ ಉದ್ದೇಶದಿಂದ ನಾನು ಇದನ್ನು ಬರೆಯುತ್ತಿಲ್ಲ. ಯಾರಾದರೂ ಈ ಹೊಗಳಿಕೆಯನ್ನು ವ್ಯರ್ಥಮಾಡುವುದಕ್ಕಿಂತ ಸಾಯುವುದೇ ನನಗೆ ಲೇಸು. 16 ನಾನು ಸುವಾರ್ತೆಯನ್ನು ಸಾರಿದರೂ ಹೊಗಳಿಕೊಳ್ಳುವುದಕ್ಕೆ ನನಗೇನೂ ಆಸ್ಪದವಿಲ್ಲ; ಸಾರಲೇ ಬೇಕೆಂಬ ನಿರ್ಬಂಧ ನನ್ನ ಮೇಲಿದೆ, ನಾನು ಸುವಾರ್ತೆಯನ್ನು ಸಾರದಿದ್ದರೆ ನನ್ನ ಗತಿಯನ್ನು ಏನೆಂದು ಹೇಳಲಿ! 17 ನಾನು ಸ್ವಂತ ಇಷ್ಟದಿಂದ ಈ ಕೆಲಸವನ್ನು ಮಾಡಿದರೆ ನನಗೆ ಪ್ರತಿಫಲ ದೊರೆಯುವುದು; ಇಲ್ಲದಿದ್ದರೂ ಈ §ಕರ್ತವ್ಯ ನನ್ನ ವಶಕ್ಕೆ ಒಪ್ಪಿಸಿಕೊಡಲ್ಪಟ್ಟಿದೆ. 18 ಹಾಗಾದರೆ ನನಗೆ ಸಿಗುವ ಬಹುಮಾನವೇನು? ನಾನು *ಸುವಾರ್ತೆಯನ್ನು ಸಾರುವಾಗ ಅದರಿಂದ ದೊರೆಯುವ ಪ್ರತಿಫಲವನ್ನು ಪಡೆಯದೇ ಅದನ್ನು ಉಚಿತವಾಗಿ ಸಾರುವುದೇ ನನಗೆ ದೊರೆಯುವ ಪ್ರತಿಫಲವಾಗಿದೆ.
19 ನಾನು ಎಲ್ಲಾ ವಿಷಯಗಳಲ್ಲಿ ಸ್ವತಂತ್ರನಾಗಿದ್ದರೂ ಹೆಚ್ಚು ಜನರನ್ನು ಸಂಪಾದಿಸಿಕೊಳ್ಳಬೇಕೆಂದು §ನಾನು ಎಲ್ಲರಿಗೂ ದಾಸನಾದೆನು. 20 ಯೆಹೂದ್ಯರನ್ನು ಸಂಪಾದಿಸಿಕೊಳ್ಳುವುದಕ್ಕೆ *ಯೆಹೂದ್ಯರಿಗೆ ಯೆಹೂದ್ಯನಂತಾದೆನು. ನಾನು ಧರ್ಮಶಾಸ್ತ್ರಕ್ಕೆ ಅಧೀನನಲ್ಲದವನಾದರೂ, ಧರ್ಮಶಾಸ್ತ್ರಕ್ಕೆ ಅಧೀನರಾದವರನ್ನು ಸಂಪಾದಿಸಿಕೊಳ್ಳುವುದಕ್ಕಾಗಿ ಅವರಿಗೋಸ್ಕರ ಧರ್ಮಶಾಸ್ತ್ರಕ್ಕೆ ಅಧೀನನಂತಾದೆನು. 21 ನಾನು ದೇವರ ಧರ್ಮಶಾಸ್ತ್ರ ಇಲ್ಲದವನಲ್ಲ, ಕ್ರಿಸ್ತನ ನಿಯಮಕ್ಕೊಳಗಾದವನೇ; ಆದರೂ ಧರ್ಮಶಾಸ್ತ್ರಕ್ಕೆ ಹೊರತಾದವರನ್ನು ಸಂಪಾದಿಸಿಕೊಳ್ಳುವುದಕ್ಕಾಗಿ ಧರ್ಮಶಾಸ್ತ್ರ ಬಾಹಿರನಂತಾದೆನು. 22  ಬಲವಿಲ್ಲದವರನ್ನು ಸಂಪಾದಿಸುವುದಕ್ಕಾಗಿ ನಾನೂ ಬಲವಿಲ್ಲದವನಾದೆನು. ಯಾವ ವಿಧದಲ್ಲಿಯಾದರೂ ಕೆಲವರನ್ನು ರಕ್ಷಿಸಬೇಕೆಂದು §ಎಲ್ಲರಿಗೂ ಎಲ್ಲರಂತಾದೆನು. 23 ಇದೆಲ್ಲವನ್ನು ಸುವಾರ್ತೆಗೋಸ್ಕರವೇ ಮಾಡಿ, ನಾನು ಇತರರ ಸಂಗಡ ಸುವಾರ್ತೆಯ ಆಶೀರ್ವಾದದಲ್ಲಿ ಪಾಲುಗಾರನಾಗಬೇಕೆಂದು ಇದನ್ನು ಮಾಡುತ್ತಿದ್ದೇನೆ.
24 ಕ್ರೀಡಾಂಗಣದಲ್ಲಿ ಅನೇಕರು ಓಟದ ಸ್ಪರ್ಧೆಯಲ್ಲಿ ಭಾಗವಹಿಸುತ್ತಾರೆ, ಆದರೂ ಒಬ್ಬನು ಮಾತ್ರ ಜಯಮಾಲೆಯನ್ನು ಪಡೆಯುತ್ತಾನೆ ಎಂಬುದು ನಿಮಗೆ ತಿಳಿಯದೋ? ಅವರಂತೆ *ನೀವೂ ಸಹ ಬಹುಮಾನವನ್ನು ಗೆಲ್ಲಬೇಕೆಂದು ಓಡಿರಿ. 25 ಪ್ರತಿಯೊಬ್ಬ ಕ್ರೀಡಾಪಟುವು ತನ್ನ ತರಬೇತಿಯ ಎಲ್ಲಾ ವಿಷಯಗಳಲ್ಲಿ ಶಮೆದಮೆಯುಳ್ಳವನಾಗಿರುತ್ತಾನೆ. ಅವರು ಬಾಡಿ ಹೋಗುವ ಜಯಮಾಲೆಯನ್ನು ಹೊಂದುವುದಕ್ಕೆ ಸಾಧನೆ ಮಾಡುತ್ತಾರೆ; ನಾವಾದರೋ ಬಾಡಿಹೋಗದ ಜಯಮಾಲೆಯನ್ನು ಹೊಂದುವುದಕ್ಕೆ ಸಾಧನೆ ಮಾಡುವವರಾಗಿದ್ದೇವೆ. 26 ಆದ್ದರಿಂದ ನಾನು ಸಹ ಗೊತ್ತುಗುರಿಯಿಲ್ಲದವನಂತೆ ಓಡುವುದಿಲ್ಲ; ಗಾಳಿಯೊಂದಿಗೆ ಗುದ್ದಾಡುವವನಂತೆ ಹೋರಾಡುವುದಿಲ್ಲ. 27 ಇತರರಿಗೆ ಬೋಧಿಸಿದ ಮೇಲೆ ನಾನೇ ಅಯೋಗ್ಯನಾಗದಂತೆ, ನನ್ನ ದೇಹವನ್ನು ದಂಡಿಸಿ §ಸ್ವಾಧಿನದಲ್ಲಿಟ್ಟುಕೊಳ್ಳುತ್ತೇನೆ.
* 9:1 9:1 ಅ. ಕೃ. 14:14; 2 ಕೊರಿ 12:12; 1 ಥೆಸ. 2:6; 1 ತಿಮೊ. 2:7 9:1 9:1 1 ಕೊರಿ 15:8; ಅ. ಕೃ. 9:17; 18:9; 22:18; 23:11 9:1 9:1 1 ಕೊರಿ 3:6 § 9:5 9:5 ಮತ್ತಾ 12:46; 13:55; ಮಾರ್ಕ 6:3; ಯೋಹಾ 7:3,5,10; ಅ. ಕೃ. 1:14; ಗಲಾ. 1:19 * 9:5 9:5 ಮತ್ತಾ 8:14 9:7 9:7 1 ತಿಮೊ. 1:18; 2 ತಿಮೊ. 2:3,4. 9:7 9:7 1 ಕೊರಿ 3:6-8; ಧರ್ಮೋ 20:6; ಜ್ಞಾ. 27:18 § 9:9 9:9 ಧರ್ಮೋ 25:4; 1 ತಿಮೊ. 5:18 * 9:10 9:10 ರೋಮಾ. 3:24 9:11 9:11 ರೋಮಾ. 15:27; ಗಲಾ. 6:6 9:12 9:12 1 ಕೊರಿ 9:15,18; ಅ. ಕೃ. 20:33,34 § 9:13 9:13 ಯಾಜ 6:16,26; ಅರಣ್ಯ 5:9,10; ಧರ್ಮೋ 18:1 * 9:14 9:14 1 ಕೊರಿ 9:4; ಮತ್ತಾ 10:10; ಲೂಕ 10:7 9:15 9:15 ಅ. ಕೃ. 18:3 9:16 9:16 ಅ. ಕೃ. 4:20; ರೋಮಾ. 1:14 § 9:17 9:17 1 ಕೊರಿ 4:1; ಗಲಾ. 2:7 * 9:18 9:18 2 ಕೊರಿ 11:7; 12:13 9:19 9:19 ವ. 1-23 9:19 9:19 ಮತ್ತಾ 18:15; 1 ಪೇತ್ರ 3:1 § 9:19 9:19 2 ಕೊರಿ 4:5 * 9:20 9:20 ಅ. ಕೃ. 16:3; 18:18; 21:23-26 9:21 9:21 ರೋಮಾ. 14:1-23 9:22 9:22 2 ಕೊರಿ 11:29 § 9:22 9:22 1 ಕೊರಿ 10:33 * 9:24 9:24 ಗಲಾ. 2:2; 5:7; ಫಿಲಿ. 2:16; ಇಬ್ರಿ. 12:1 9:25 9:25 ಯಾಕೋಬ 1:12 9:27 9:27 ಇಬ್ರಿ. 6:8 § 9:27 9:27 ರೋಮಾ. 6:19