6
1-2 ಆದುದರಿಂದ ಕ್ರಿಸ್ತನ ವಿಷಯವಾದ ಪ್ರಾಥಮಿಕ ಉಪದೇಶವನ್ನು ಬಿಟ್ಟು, *ನಿರ್ಜೀವ ಕ್ರಿಯೆಗಳಿಂದ ಮಾನಸಾಂತರವೂ, ದೇವರಲ್ಲಿ ನಂಬಿಕೆಯೂ, ದೀಕ್ಷಾಸ್ನಾನಗಳ ಬೋಧನೆಯೂ, ಹಸ್ತಾರ್ಪಣೆಯೂ, §ಸತ್ತವರಿಗೆ ಪುನರುತ್ಥಾನವೂ ಮತ್ತು *ನಿತ್ಯವಾದ ನ್ಯಾಯತೀರ್ಪೂ ಉಂಟೆಂಬುದರ ಕುರಿತು ಪದೇಪದೇ ಅಸ್ತಿವಾರವನ್ನೆ ಹಾಕುತಿರದೆ ನಾವು ಪರಿಪಕ್ವತೆಯೆಡೆಗೆ ಸಾಗೋಣ. ದೇವರು ಅನುಮತಿಸುವುದಾದರೆ ನಾವು ಇವುಗಳನ್ನು ಮಾಡುವೆವು. ಒಂದು ಸಾರಿ ಬೆಳಕಿನಲ್ಲಿ ಸೇರಿದವರು ಸ್ವರ್ಗೀಯ §ದಾನವನ್ನು ಅನುಭವಿಸಿದವರು, *ಪವಿತ್ರಾತ್ಮನಲ್ಲಿ ಪಾಲುಗಾರರಾದವರು, ದೇವರ ವಾಕ್ಯದ ಶ್ರೇಷ್ಠತೆಯನ್ನೂ ಮುಂದಣ ಯುಗದ ಶಕ್ತಿಯನ್ನೂ ಅನುಭವಿಸಿದವರು ಅದರಿಂದ ಹಿಂಜಾರಿಹೋದರೆ, ಅವರಲ್ಲಿ ತಿರುಗಿ ಮಾನಸಾಂತರವನ್ನು ಹುಟ್ಟಿಸುವುದು ಅಸಾಧ್ಯ, ಯಾಕೆಂದರೆ ಅವರು ತಾವಾಗಿಯೇ ದೇವರ ಮಗನನ್ನು ಪುನಃ ಶಿಲುಬೆಗೆ ಹಾಕುವವರೂ ಆತನನ್ನು ಬಹಿರಂಗವಾಗಿ ಅವಮಾನಪಡಿಸುವವರೂ ಆಗಿರುತ್ತಾರೆ. ಭೂಮಿಯು ತನ್ನ ಮೇಲೆ ಅನೇಕಾವರ್ತಿ ಸುರಿಯುವ ಮಳೆಯನ್ನು ಹೀರಿಕೊಂಡು, ಅದು ಯಾರ ನಿಮಿತ್ತವಾಗಿ ವ್ಯವಸಾಯ ಮಾಡಲ್ಪಡುತ್ತದೋ, ಅವರಿಗೆ ಅನುಕೂಲವಾದ ಬೆಳೆಯನ್ನು ಕೊಡುತ್ತದೆ, ಅದು ದೇವರ ಆಶೀರ್ವಾದವನ್ನು ಹೊಂದುತ್ತದೆ. §ಆದರೆ ಅದು ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳೆಸಿದರೆ, ಅಯೋಗ್ಯವಾದದ್ದಾಗಿ ಶಾಪಕ್ಕೆ ಗುರಿಯಾಗುತ್ತದೆ. *ಕೊನೆಗದು ಸುಡಲ್ಪಡುತ್ತದೆ. ಪ್ರಿಯರೇ, ಈ ರೀತಿಯಾಗಿ ನಾವು ಮಾತನಾಡಿದರೂ ನಿಮ್ಮ ವಿಷಯವಾಗಿಯೂ ರಕ್ಷಣೆಗೆ ಸಂಬಂಧಿಸಿದವುಗಳಲ್ಲಿಯೂ ನೀವು ಉತ್ತಮರಾಗಿದ್ದೀರೆಂದು ನಂಬಿದ್ದೇವೆ. 10  ನೀವು ದೇವಜನರಿಗೆ ಉಪಚಾರ ಮಾಡಿದ್ದೀರಿ, ಇನ್ನೂ ಮಾಡುತ್ತಾ ಇದ್ದಿರಿ. ಈ ಕೆಲಸವನ್ನು ಮತ್ತು ಇದರಲ್ಲಿ ನೀವು ಆತನ ನಾಮದ ಕಡೆಗೆ ತೋರಿಸಿದ ಪ್ರೀತಿಯನ್ನು ಆತನು ಮರೆಯುವುದಿಲ್ಲ, ಯಾಕೆಂದರೆ ದೇವರು ಅನೀತಿಯುಳ್ಳವನಲ್ಲ. 11 ನಿರೀಕ್ಷೆಯ ಸಂಪೂರ್ಣ ನಿಶ್ಚಯತ್ವವನ್ನು ಹೊಂದುವುದಕ್ಕಾಗಿ ಅಂತ್ಯದವರೆಗೂ ನೀವು ಅದೇ §ಶ್ರದ್ಧೆಯನ್ನು ತೋರಿಸಬೇಕೆಂದು ನಾನು ಬಹಳವಾಗಿ ಅಪೇಕ್ಷಿಸುತ್ತೇವೆ. 12 ನೀವು ಸೋಮಾರಿಗಳಾಗಿರಬೇಕೆಂದು ಅಪೇಕ್ಷಿಸುವುದಿಲ್ಲ, ಬದಲಿಗೆ ನಂಬಿಕೆಯಿಂದಲೂ, ತಾಳ್ಮೆಯಿಂದಲೂ, ವಾಗ್ದಾನಗಳನ್ನು ಬಾಧ್ಯವಾಗಿ *ಹೊಂದುವವರನ್ನು ಅನುಸರಿಸುವವರಾಗಬೇಕೆಂದು ಕೋರುತ್ತೇನೆ.
ದೇವರ ವಾಗ್ದಾನಗಳು ಎಷ್ಟು ಮಾತ್ರಕ್ಕೂ ತಪ್ಪುವುದಿಲ್ಲ
13 ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದಾಗ ತನಗಿಂತಲೂ ಹೆಚ್ಚಿನವರು ಯಾರೂ ಇಲ್ಲದ್ದರಿಂದ ತನ್ನ ಮೇಲೆ ಆಣೆಯಿಟ್ಟು, 14 “ಖಂಡಿತವಾಗಿಯೂ ನಾನು ನಿನ್ನನ್ನು ಆಶೀರ್ವದಿಸುವೆನು. ನಿನ್ನ ಸಂತಾನವನ್ನು ಅಭಿವೃದ್ಧಿಪಡಿಸುವೆನು” ಎಂದು ಹೇಳಿದನಷ್ಟೆ. 15 ಹೀಗೆ ಅಬ್ರಹಾಮನು ತಾಳ್ಮೆಯಿಂದ ಕಾದುಕೊಂಡಿದ್ದು ವಾಗ್ದಾನವನ್ನು ಪಡೆದುಕೊಂಡನು. 16 ಮನುಷ್ಯರು ತಮಗಿಂತಲೂ ಹೆಚ್ಚಿನವನ ಮೇಲೆ ಆಣೆಯಿಡುತ್ತಾರಷ್ಟೆ, §ಆಣೆಯನ್ನು ದೃಢಪಡಿಸಿದ ಮೇಲೆ ವಿವಾದವು ಅಂತ್ಯವಾಗುವುದು. 17 ಹಾಗೆಯೇ ದೇವರು *ತನ್ನ ಸಂಕಲ್ಪವು ಬದಲಾಗಲಾರದ್ದೆಂಬುದನ್ನು, ವಾಗ್ದಾನದ ಬಾಧ್ಯಸ್ಥರಿಗೆ ಬಹು ಸ್ಪಷ್ಟವಾಗಿ ತೋರಿಸಬೇಕೆಂದು ಆಣೆಯಿಟ್ಟು ಸ್ಥಿರಪಡಿಸಿದನು. 18 ದೇವರ ವಾಗ್ದಾನ ಮತ್ತು ಆಣೆ ಇವೆರಡೂ ನಿಶ್ಚಲವಾದ ಆಧಾರಗಳು ಏಕೆಂದರೆ ದೇವರು ಸುಳ್ಳಾಡುವವನಲ್ಲ. ಅದುದರಿಂದ ಆಶ್ರಯವನ್ನು ಹೊಂದಬೇಕೆಂದು ಓಡಿಬಂದು, ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡಿದುಕೊಂಡವರಾದ ನಮಗೆ ಬಲವಾದ ಪ್ರೋತ್ಸಾಹ ಉಂಟಾಯಿತು. 19  §ಆ ನಿರೀಕ್ಷೆಯು ನಮ್ಮ ಪ್ರಾಣಕ್ಕೆ ವಿಶ್ವಾಸಾರ್ಹವಾದದ್ದೂ ಸ್ಥಿರವಾದದ್ದೂ ಆದ *ಲಂಗರವಾಗಿದೆ. ಅದು ಅತಿ ಪರಿಶುದ್ಧ ಸ್ಥಳದ ತೆರೆಯ ಒಳಗಡೆ ಪ್ರವೇಶಿಸುವಂಥದ್ದಾಗಿದೆ. 20 ಅಲ್ಲಿಗೆ ಯೇಸು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿ, §ನಮಗೋಸ್ಕರ ಮುಂಚಿತವಾಗಿಯೇ ಹೋಗಿ ಆ ಸಾನ್ನಿಧ್ಯವನ್ನು ಪ್ರವೇಶಿಸಿದ್ದಾನೆ.
* 6:1-2 6:1-2 ಇಬ್ರಿ. 9:14: 6:1-2 6:1-2 ಅ. ಕೃ. 19:4,5. 6:1-2 6:1-2 ಅ. ಕೃ. 8:17; 19:6: § 6:1-2 6:1-2 ಅ. ಕೃ. 17:31, 32: * 6:1-2 6:1-2 ಅ. ಕೃ. 10:42; 17:31; 2 ಕೊರಿ 5:10: 6:1-2 6:1-2 ಇಬ್ರಿ. 5:12; ಫಿಲಿ. 3:12-14: 6:4 6:4 ಇಬ್ರಿ. 10:32: § 6:4 6:4 ಯೋಹಾ 4:10; ಎಫೆ 2:8: * 6:4 6:4 ಗಲಾ. 3:2, 5: 6:6 6:6 1 ಯೋಹಾ 5:16: 6:6 6:6 ಇಬ್ರಿ. 10:29: § 6:8 6:8 ಯೆಶಾ 5:1-7; ಲೂಕ 13:6-9: * 6:8 6:8 ಮಲಾ. 4:1; ಯೋಹಾ 15:6: 6:10 6:10 ರೋಮಾ. 15:31; 2 ಕೊರಿ 8:4; 9:1, 12; 2 ತಿಮೊ. 1:18; ಪ್ರಕ 2:19: 6:10 6:10 ಜ್ಞಾ. 19:17; ಮತ್ತಾ 10:42; 25:40; ಮಾರ್ಕ 9:41: § 6:11 6:11 ರೋಮಾ. 5:2-5: * 6:12 6:12 ಇಬ್ರಿ. 13:7; ಇಬ್ರಿ. 10:36; 13:7: 6:13 6:13 ಆದಿ 22:16, 17: 6:15 6:15 ರೋಮಾ. 4:13: § 6:16 6:16 ವಿಮೋ 22:11: * 6:17 6:17 ವ. 18; ಕೀರ್ತ 110:4; ಜ್ಞಾ. 19:21: 6:17 6:17 ಇಬ್ರಿ. 11:9: 6:18 6:18 ಇಬ್ರಿ. 12:1,2. § 6:19 6:19 ತೀತ. 1:2: * 6:19 6:19 ಅಂದರೆ ಆಧಾರವಾಗಿರುವುದು. 6:19 6:19 ಇಬ್ರಿ. 9:7; ಯಾಜ 16:15: 6:20 6:20 ಇಬ್ರಿ. 3:1; 5:6, 10; 7:17, 21 § 6:20 6:20 ಇಬ್ರಿ. 4:14; 8:1; 9:24: