7
ಯೇಸು ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿದ್ದು ಲೇವಿವಂಶದ ಯಾಜಕರಿಗಿಂತಲೂ ಶ್ರೇಷ್ಠನು
*ಈ ಮೆಲ್ಕಿಜೆದೇಕನು ಸಾಲೇಮಿನ ಅರಸನೂ ಮಹೋನ್ನತನಾದ ದೇವರ ಯಾಜಕನೂ ಆಗಿದ್ದನು. ಈತನು ರಾಜರನ್ನು ಸಂಹಾರ ಮಾಡಿ ಹಿಂದಿರುಗಿ ಬರುತ್ತಿದ್ದ ಅಬ್ರಹಾಮನನ್ನು ಎದುರುಗೊಂಡು ಅವನನ್ನು ಆಶೀರ್ವದಿಸಿದನು. ಅವನಿಗೆ ಅಬ್ರಹಾಮನು ತಾನು ಜಯಿಸಿಕೊಂಡು ಬಂದಿದ್ದ ಎಲ್ಲಾ ವಸ್ತುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಕೊಟ್ಟನು. “ಮೆಲ್ಕಿಜೆದೇಕ್”, ಎಂಬ ಹೆಸರಿಗೆ ಮೊದಲು “ನೀತಿಯ ರಾಜ” ಎಂದೂ, ಅನಂತರ “ಸಾಲೇಮಿನ ರಾಜ” ಎಂದರೆ “ಸಮಾಧಾನದ ರಾಜ” ಎಂದೂ ಅರ್ಥ. ಅವನಿಗೆ ತಂದೆಯಿಲ್ಲ, ತಾಯಿಯಿಲ್ಲ, ವಂಶಾವಳಿಯೂ ಇಲ್ಲ. §ಹುಟ್ಟು, ಸಾವು ಇಲ್ಲ. ಆತನು ದೇವರ ಕುಮಾರನಿಗೆ ಹೋಲಿಕೆಯಾಗಿದು, *ನಿರಂತರವಾಗಿ ಯಾಜಕನಾಗಿರುವನು. ಈತನು ಎಷ್ಟು ಮಹಾನ್ ಆಗಿದ್ದನೆಂದು ಯೋಚಿಸಿರಿ. ನಮ್ಮ ಮೂಲಪಿತೃವಾದ ಅಬ್ರಹಾಮನು ತಾನು ಯುದ್ಧದಲ್ಲಿ ಗೆದ್ದು ತಂದ ಶ್ರೇಷ್ಠ ವಸ್ತುಗಳಲ್ಲಿ ಹತ್ತರಲ್ಲಿ ಒಂದು ಭಾಗವನ್ನು ಅವನಿಗೆ ಕೊಟ್ಟನಲ್ಲಾ. ನಿಜವಾಗಿಯೂ ಲೇವಿಯ ಕುಲದವರಲ್ಲಿ ಯಾಜಕೋದ್ಯೋಗವನ್ನು ಹೊಂದುವವರು, ಜನರಿಂದ ಅಂದರೆ ಅಬ್ರಹಾಮನ ವಂಶಸ್ಥರಾಗಿರುವ ಸಹೋದರರಿಂದಲೇ ದಶಮ ಭಾಗಗಳನ್ನು ತೆಗೆದುಕೊಳ್ಳುವುದಕ್ಕೆ ಧರ್ಮಶಾಸ್ತ್ರದಲ್ಲಿ ಅಪ್ಪಣೆಯಿದೆ. ಆದರೆ ಮೆಲ್ಕಿಜೆದೇಕನು ಲೇವಿಯ §ವಂಶಾವಳಿಗೆ ಸೇರಿದವನಲ್ಲ, ಆದರೂ ಅಬ್ರಹಾಮನಿಂದ ದಶಮ ಭಾಗಗಳನ್ನು ತೆಗೆದುಕೊಂಡದ್ದಲ್ಲದೆ *ದೇವರಿಂದ ವಾಗ್ದಾನಗಳನ್ನು ಹೊಂದಿದವನನ್ನು ಆಶೀರ್ವದಿಸಿದನು. ಆಶೀರ್ವಾದ ಹೊಂದುವವನಿಗಿಂತ ಆಶೀರ್ವದಿಸುವವನೇ ಹೆಚ್ಚಿನವನು ಎಂಬುದನ್ನು ನಿರಾಕರಿಸುವಂತಿಲ್ಲ. ದಶಮ ಭಾಗವನ್ನು ತೆಗೆದುಕೊಳ್ಳುವ ಯಾಜಕರು ಒಂದಲ್ಲಾ ಒಂದು ದಿನ ಸಾಯುತ್ತಾರೆ. ಆದರೆ ಅಬ್ರಹಾಮನಿಂದ ದಶಮ ಭಾಗವನ್ನು ತೆಗೆದುಕೊಂಡಾತನು ಚಿರಂಜೀವಿಯಾಗಿರುವನು. ಮತ್ತು ದಶಮ ಭಾಗಗಳನ್ನು ತೆಗೆದುಕೊಳ್ಳುವ ಲೇವಿಯು ಕೂಡ ಅಬ್ರಹಾಮನ ಮೂಲಕ ದಶಮ ಭಾಗಗಳನ್ನು ಕೊಟ್ಟ ಹಾಗಾಯಿತು. 10 ಹೇಗೆಂದರೆ, ಮೆಲ್ಕಿಜೆದೇಕನು ಲೇವಿಯ ಮೂಲಪುರುಷನಾದ ಅಬ್ರಹಾಮನನ್ನು ಸಂಧಿಸಿದಾಗ ಲೇವಿಯು ತತ್ವರೂಪವಾಗಿ ಅಬ್ರಹಾಮನ ದೇಹದಲ್ಲಿದ್ದನು.
11 ಇಸ್ರಾಯೇಲರಿಗೆ ಕೊಡಲಾದ ಧರ್ಮಶಾಸ್ತ್ರ ಲೇವಿಯರ ಯಾಜಕತ್ವದ ಮೇಲೆ ಆಧಾರಗೊಂಡಿದೆ. ಲೇವಿಯರ ಈ ಯಾಜಕತ್ವದಿಂದಲೇ ಸಂಪೂರ್ಣ ಸಿದ್ಧಿ ಪ್ರಾಪ್ತವಾಗುತ್ತಿದ್ದಾದರೆ, ಆರೋನನ ಪರಂಪರೆಗೆ ಸೇರದ, ಮೆಲ್ಕಿಜೆದೇಕನ ಪರಂಪರೆಗೆ ಸೇರಿದ ಬೇರೊಬ್ಬ ಯಾಜಕನು ಬರುವುದರ ಅಗತ್ಯವೇನಿತ್ತು? 12 ಯಾಜಕತ್ವವು ಬದಲಾಗುವುದಾದರೆ ಧರ್ಮಶಾಸ್ತ್ರವೂ ಸಹ ಬದಲಾಗುವುದು ಅಗತ್ಯವಾಗಿದೆ. 13 ಆದರೆ §ಇವು ಯಾರ ಕುರಿತಾಗಿ ಹೇಳಲ್ಪಟ್ಟಿವೆಯೋ ಆತನು ಬೇರೊಂದು ಗೋತ್ರಕ್ಕೆ ಸೇರಿದವನು. ಆ ಗೋತ್ರದಿಂದ ಒಬ್ಬನೂ ಯಜ್ಞವೇದಿಯ ಬಳಿ ಸೇವೆಮಾಡಿದ್ದಿಲ್ಲ. 14 *ನಮ್ಮ ಕರ್ತನು ಯೆಹೂದ ಗೋತ್ರದಲ್ಲಿ ಜನಿಸಿಬಂದವನೆಂಬುದು ಸ್ಪಷ್ಟವಾಗಿದೆ. ಈ ಗೋತ್ರಕ್ಕೆ ಸಂಬಂಧಿಸಿದಂತೆ ಮೋಶೆಯು ಯಾಜಕರ ಕುರಿತಾಗಿ ಏನನ್ನೂ ಹೇಳಲಿಲ್ಲ. 15-16 ಈ ಯಾಜಕನು ಶರೀರದ ಸಂಬಂಧಪಟ್ಟಿರುವ ನಿಯಮದ ಪ್ರಕಾರವಾಗಿರದೆ, ಲಯವಾಗದ ಜೀವಶಕ್ತಿಯ ಮೇರೆಗೆ, ಮೆಲ್ಕಿಜೆದೇಕನಂತೆ ಇನ್ನೊಬ್ಬ ಯಾಜಕನು ಎಳುತ್ತಾನೆಂಬುದಾದರೆ ಅದು ಇನ್ನೂ ಹೆಚ್ಚು ಸ್ಪಷ್ಟವಾಗಿ ವ್ಯಕ್ತವಾಗುತ್ತದಲ್ಲಾ. 17 ಆತನ ವಿಷಯದಲ್ಲಿ “ನೀನು ಸದಾಕಾಲಕ್ಕೂ ಮೆಲ್ಕಿಜೆದೇಕನ ತರಹದ ಯಾಜಕನೇ” ಎಂಬುದಾಗಿ ಧರ್ಮಶಾಸ್ತ್ರವು ಸಾಕ್ಷಿಕರಿಸುತ್ತದೆ. 18 ಯಾಕೆಂದರೆ ಮೊದಲಿದ್ದ ಆಜ್ಞೆಯು ದುರ್ಬಲವೂ, ನಿಷ್ಪ್ರಯೋಜಕವೂ ಆಗಿರುವ ಕಾರಣದಿಂದ ಅದು ರದ್ದಾಯಿತು. 19 §ಧರ್ಮಶಾಸ್ತ್ರವು ಯಾವುದನ್ನೂ ಪರಿಪೂರ್ಣ ಮಾಡುವುದಿಲ್ಲ. ಅದಕ್ಕೆ ಬದಲಾಗಿ ದೇವರ ಸಮೀಪಕ್ಕೆ ನಡೆಸಲ್ಪಡುವಂಥ *ಉತ್ತಮವಾದ ಹೊಸ ನಿರೀಕ್ಷೆಯೊಂದು ಕೊಡಲ್ಪಟ್ಟಿದೆ. 20 ಇದು ಪ್ರತಿಜ್ಞೆ ರಹಿತವಾದ್ದದು ಅಲ್ಲ. ಇದಲ್ಲದೆ ಲೇವಿಯರು ಪ್ರತಿಜ್ಞೆಯಿಲ್ಲದೆ ಯಾಜಕರಾದರು. 21 ಆತನಾದರೋ, ಪ್ರತಿಜ್ಞೆಯೊಡನೆ ಯಾಜಕನಾಗಿ ಮಾಡಲ್ಪಟ್ಟನು. ಆದರೆ ದೇವರು ಆತನಿಗೆ
“ ‘ನೀನು ಸದಾಕಾಲವೂ ಯಾಜಕನಾಗಿದ್ದೀ’ ಎಂದು ನಾನು ಪ್ರಮಾಣಮಾಡಿ ನುಡಿದಿದ್ದೇನೆ ಮತ್ತು
ತನ್ನ ಮನಸ್ಸನ್ನು ಬದಲಾಯಿಸುವುದಿಲ್ಲ” ಎಂಬುದಾಗಿ ಹೇಳಿದ್ದಾನೆ.
22 ಯೇಸು ಪ್ರತಿಜ್ಞೆಯೊಡನೆಯೇ §ಎಷ್ಟೋ ಶ್ರೇಷ್ಠವಾದ ಒಡಂಬಡಿಕೆಗೆ ಆಧಾರನಾದನು. 23 ಲೇವಿಯರು ಶಾಶ್ವತವಾಗಿ ಉದ್ಯೋಗನಡಿಸುವುದಕ್ಕೆ ಮರಣವು ಅಡ್ಡಿಯಾಗಿರುವುದರಿಂದ ಅವರಲ್ಲಿ ಅನೇಕರು ಯಾಜಕರಾದರು. 24 *ಆತನಾದರೋ ಸದಾಕಾಲ ಜೀವಿಸುವುದರಿಂದ ಆತನ ಯಾಜಕತ್ವವನ್ನು ಶಾಶ್ವತವಾದ್ದದು. 25 ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವುದಕ್ಕೆ ಶಕ್ತನಾಗಿದ್ದಾನೆ. ಯಾಕೆಂದರೆ ಅವರಿಗೋಸ್ಕರ ವಿಜ್ಞಾಪನೆ ಮಾಡುವುದಕ್ಕೆ ಯಾವಾಗಲೂ ಬದುಕುವವನಾಗಿದ್ದಾನೆ.
26 ಇಂಥವನೇ ನಮಗೆ ಬೇಕಾಗಿರುವ ಮಹಾಯಾಜಕನು, ಈತನು §ಪರಿಶುದ್ಧನೂ, ನಿರ್ದೋಷಿಯೂ, ನಿಷ್ಕಳಂಕನೂ, *ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವವನು, ಆಕಾಶಮಂಡಲಗಳಿಗಿಂತ ಉನ್ನತದಲ್ಲಿರುವವನೂ ಆಗಿರುವನು. 27 ಮೊದಲು ತಮ್ಮ ಪಾಪಪರಿಹಾರಕ್ಕಾಗಿ ಆ ಮೇಲೆ ಜನರ ಪಾಪಪರಿಹಾರಕ್ಕಾಗಿ ಯಜ್ಞ ಸಮರ್ಪಣೆಮಾಡುವ ಲೇವಿ ಮಹಾಯಾಜಕರಂತೆ ಈತನು ಪ್ರತಿದಿನವೂ ಯಜ್ಞಗಳನ್ನು ಸಮರ್ಪಿಸಬೇಕಾದ ಅವಶ್ಯವಿಲ್ಲ. ಏಕೆಂದರೆ ಈತನು ತನ್ನನ್ನು ತಾನೇ ಸಮರ್ಪಿಸಿಕೊಂಡು §ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು. 28 ಧರ್ಮಶಾಸ್ತ್ರವು *ದುರ್ಬಲರಾದ ಮನುಷ್ಯರನ್ನು ಮಹಾಯಾಜಕರನ್ನಾಗಿ ನೇಮಕ ಮಾಡುತ್ತದೆ. ಆದರೆ ಧರ್ಮಶಾಸ್ತ್ರದ ತರುವಾಯ ಪ್ರತಿಜ್ಞೆಯೊಡನೆ ಬಂದ ವಾಕ್ಯವು ಸದಾಕಾಲಕ್ಕೂ ಸರ್ವಸಂಪೂರ್ಣನಾಗಿರುವ ಮಗನನ್ನೇ ಯಾಜಕನನ್ನಾಗಿ ನೇಮಕ ಮಾಡಿದೆ.
* 7:1 ಆದಿ 14:17-20: 7:1 ಆದಿ 33:18; ಕೀರ್ತ 76:2: 7:1 ಅರಣ್ಯ 24:16; ಧರ್ಮೋ 32:8; ಮಾರ್ಕ 5:7: § 7:3 ಅಥವಾ, ಅವನು ಹುಟ್ಟಿದ್ದಾಗಲಿ ಕಾಲವಾಗಿ ಹೋದದ್ದಾಗಲಿ ಬರೆದಿಲ್ಲ. ವ. 6: * 7:3 ಕೀರ್ತ 110:4: 7:4 ಅ. ಕೃ. 7:8,9: 7:5 ಅರಣ್ಯ 18:21,26; 2 ಪೂರ್ವ 31:4,5: § 7:6 ವ. 3: * 7:6 ರೋಮಾ. 4:13: 7:8 ಇಬ್ರಿ. 5:6; 6:20; ಲೂಕ 24:5: 7:11 ಇಬ್ರಿ. 7:18,19; 8:7; ಗಲಾ. 2:21: § 7:13 ಎಂದರೆ ಕೀರ್ತ 110:4: * 7:14 ಯೆಶಾ 11:1; ಮೀಕ 5:2; ಮತ್ತಾ 1:3; ಲೂಕ 3:33; ಪ್ರಕ 5:5: 7:17 ಕೀರ್ತ 110:4; ಇಬ್ರಿ. 5:6; 7:21: 7:18 ರೋಮಾ. 8:3; ಗಲಾ. 4:9: § 7:19 ಇಬ್ರಿ. 9:9; 10:1; ಯಾಜ 16:16; ಅ. ಕೃ. 13:39: * 7:19 ಇಬ್ರಿ. 6:18: 7:19 ವ. 25; ಇಬ್ರಿ. 4:16: 7:21 ವ. 17: § 7:22 ಇಬ್ರಿ. 8:6: * 7:24 ಇಬ್ರಿ. 7:21,28: 7:25 ವ. 19; ಯೋಹಾ 14:6: 7:25 ಇಬ್ರಿ. 9:24; ರೋಮಾ. 8:34: § 7:26 ಕೀರ್ತ 16:10; ಪ್ರಕ 15:4; 16:5: * 7:26 ಇಬ್ರಿ. 4:15: 7:26 ಇಬ್ರಿ. 8:1; 4:14: 7:27 ಇಬ್ರಿ. 5:3: § 7:27 ಇಬ್ರಿ. 9:12,28; 10:10: * 7:28 ಇಬ್ರಿ. 5:2: 7:28 ಇಬ್ರಿ. 2:10; 5:9: