113
ಯೆಹೋವನನ್ನು ಸ್ತುತಿಸುವುದು
ಯೆಹೋವನಿಗೆ ಸ್ತೋತ್ರ!
ಯೆಹೋವನ ಸೇವಕರೇ, ಸ್ತೋತ್ರಮಾಡಿರಿ;
ಯೆಹೋವನ ನಾಮವನ್ನು ಸ್ತುತಿಸಿರಿ.
ಈಗಿನಿಂದ ಯುಗಯುಗಕ್ಕೂ,
ಯೆಹೋವನ ನಾಮವು ಕೀರ್ತಿಸಲ್ಪಡಲಿ.
ಯೆಹೋವನ ನಾಮವು ಪೂರ್ವದಿಂದ,
ಪಶ್ಚಿಮದವರೆಗೂ ಸ್ತುತಿಹೊಂದಲಿ.
ಯೆಹೋವನು ಎಲ್ಲಾ ಜನಾಂಗಗಳಲ್ಲಿ ಮಹೋನ್ನತನು;
ಆತನ ಪ್ರಭಾವವು ಮೇಲಣ ಲೋಕಕ್ಕಿಂತಲೂ ಉನ್ನತವಾಗಿದೆ.
ನಮ್ಮ ಯೆಹೋವ ದೇವರಿಗೆ ಸಮಾನರು ಯಾರು?
ಆತನು ಉನ್ನತಲೋಕದಲ್ಲಿ ಆಸನಾರೂಢನಾಗಿ,
ಆಕಾಶವನ್ನೂ, ಭೂಮಿಯನ್ನೂ ನೋಡಲಿಕ್ಕೆ ಬಾಗುತ್ತಾನೆ.
ಆತನು ದೀನರನ್ನು ಧೂಳಿನಿಂದ ಎಬ್ಬಿಸಿ,
ಬಡವರನ್ನು ತಿಪ್ಪೆಯಿಂದ ಎತ್ತುತ್ತಾನೆ.
ಪ್ರಭುಗಳ ಜೊತೆಯಲ್ಲಿ,
ಅಂದರೆ ಅವರ ಜನಾಧಿಪತಿಗಳೊಡನೆ ಅವರನ್ನು ಕುಳ್ಳಿರಿಸುತ್ತಾನೆ.
ಬಂಜೆಯು ಮಕ್ಕಳೊಂದಿಗೆ,
ಸಂತೋಷದಿಂದ ಮನೆಯಲ್ಲಿ ವಾಸಿಸುವ ಹಾಗೆ ಮಾಡುತ್ತಾನೆ.
ಯೆಹೋವನಿಗೆ ಸ್ತೋತ್ರ!