29
ರಚನೆಗಾರ: ದಾವೀದ.
1 ದೇವಪುತ್ರರೇ,*ದೇವಪುತ್ರರು “ಯಾಜಕರು” ಅಥವಾ “ದೇವದೂತರು” ಎಂಬರ್ಥವನ್ನು ಇದು ಕೊಡುತ್ತದೆ. ಯೆಹೋವನನ್ನು ಸ್ತುತಿಸಿರಿ!
ಆತನ ಮಹಿಮೆಯನ್ನೂ ಶಕ್ತಿಯನ್ನೂ ಸ್ತುತಿಸಿರಿ.
2 ಯೆಹೋವನನ್ನು ಸ್ತುತಿಸುತ್ತಾ ಆತನ ಹೆಸರನ್ನು ಘನಪಡಿಸಿರಿ.
ಪರಿಶುದ್ಧ ವಸ್ತ್ರಗಳನ್ನು ಧರಿಸಿಕೊಂಡು ಆತನನ್ನು ಆರಾಧಿಸಿರಿ.†ಪರಿಶುದ್ಧ … ಆರಾಧಿಸಿರಿ ಅಥವಾ “ನಿಮ್ಮ ಮಹಿಮಾಪೂರಿತವಾದ ಪರಿಶುದ್ಧ ಬಟ್ಟೆಗಳನ್ನು ಧರಿಸಿಕೊಂಡು ಆತನ ಮುಂದೆ ಅಡ್ಡಬೀಳಿರಿ.”
3 ಯೆಹೋವನ ಸ್ವರವು ಸಮುದ್ರದ ಮೇಲೆ ಕೇಳಿ ಬರುವುದು.
ಮಹಾಸಾಗರದ ಮೇಲಿನ ಗುಡುಗಿನಂತೆ ಮಹಿಮಾ ಸ್ವರೂಪನಾದ ದೇವರ ಸ್ವರವು ಕೇಳಿಬರುವುದು.
4 ಯೆಹೋವನ ಸ್ವರವು
ಆತನ ಶಕ್ತಿಯನ್ನೂ ಮಹಿಮೆಯನ್ನೂ ತೋರ್ಪಡಿಸುವುದು.
5 ಯೆಹೋವನ ಸ್ವರವು ದೇವದಾರು ವೃಕ್ಷಗಳನ್ನು ತುಂಡುತುಂಡು ಮಾಡುತ್ತದೆ.
ಯೆಹೋವನು ಲೆಬನೋನಿನ ದೇವದಾರು ವೃಕ್ಷಗಳನ್ನೂ ಮುರಿದುಹಾಕುವನು.
6 ಯೆಹೋವನು ಲೆಬನೋನನ್ನು ನಡುಗಿಸಲು ಅದು ನರ್ತಿಸುತ್ತಿರುವ ಎಳೆಕರುವಿನಂತೆ ಕಾಣುತ್ತದೆ;
ಸಿರ್ಯೋನ್ ಪರ್ವತವು ಕಂಪಿಸುವಾಗ ಕುಣಿದಾಡುವ ಎಳೆ ಹೋರಿಯಂತೆ ಕಾಣುತ್ತದೆ.
7 ಯೆಹೋವನ ಗರ್ಜನಕ್ಕೆ ಮಿಂಚುಗಳು ಥಳಥಳನೆ ಹೊಳೆಯುತ್ತವೆ.
8 ಯೆಹೋವನ ಗರ್ಜನದಿಂದ ಅರಣ್ಯವು ಕಂಪಿಸುವುದು.
ಆತನ ಗರ್ಜನಕ್ಕೆ ಕಾದೇಶ್ ಅರಣ್ಯವು ನಡುಗುವುದು.
9 ಯೆಹೋವನ ಗರ್ಜನಕ್ಕೆ ಜಿಂಕೆಗಳು ಹೆದರಿಕೊಳ್ಳುತ್ತವೆ;
ಕಾಡಿನ ಮರಗಳು ಬರಿದಾಗುತ್ತವೆ;
ಆದರೆ ಆತನ ಆಲಯದಲ್ಲಿ ಜನರು ಆತನ ಮಹಿಮೆಯನ್ನು ಹಾಡಿಕೊಂಡಾಡುವರು.
10 ಜಲಪ್ರಳಯದ ಕಾಲದಲ್ಲೂ ಯೆಹೋವನು ರಾಜನಾಗಿದ್ದನು.
ಯೆಹೋವನು ಸದಾಕಾಲ ರಾಜನಾಗಿರುವನು.
11 ಯೆಹೋವನು ತನ್ನ ಜನರಿಗೆ ಬಲವನ್ನು ದಯಪಾಲಿಸಲಿ.
ಆತನು ತನ್ನ ಜನರಿಗೆ ಶಾಂತಿಯನ್ನು ಸ್ಥಾಪಿಸಲಿ.