120
ದೇವಾಲಯಕ್ಕೆ ಹೋಗುವಾಗ ಹಾಡುವ ಗೀತೆ.
1 ನಾನು ಆಪತ್ತಿನಲ್ಲಿದ್ದಾಗ
ಯೆಹೋವನಿಗೆ ಮೊರೆಯಿಟ್ಟೆನು.
ಆತನು ನನಗೆ ಸದುತ್ತರವನ್ನು ದಯಪಾಲಿಸಿದನು.
2 ಯೆಹೋವನೇ, ಸುಳ್ಳಾಡುವವರಿಂದಲೂ
ವಂಚಕರಿಂದಲೂ ನನ್ನನ್ನು ರಕ್ಷಿಸು.
3 ಸುಳ್ಳುಗಾರರೇ, ನಿಮಗೆ ದೇವರಿಂದ ಬರುವ ದಂಡನೆಯನ್ನು ಬಲ್ಲಿರಾ?
ನಿಮಗೆ ಯಾವ ಶಿಕ್ಷೆಯನ್ನು ಒದಗಿಸಬೇಕು?
4 ಯುದ್ಧವೀರನ ತೀಕ್ಷ್ಣವಾದ ಬಾಣದಿಂದಲೂ ಉರಿಯುವ ಕೆಂಡಗಳಿಂದಲೂ ದೇವರು ನಿಮ್ಮನ್ನು ದಂಡಿಸುವನು.
5 ಸುಳ್ಳುಗಾರರಾದ ನಿಮ್ಮ ಸಮೀಪದಲ್ಲಿ ವಾಸಿಸುವುದು
ಮೇಷೆಕಿನಲ್ಲಿಯೂ ಕೇದಾರಿನ ಗುಡಾರಗಳಲ್ಲಿಯೂ*ಮೇಷೆಕಿನಲ್ಲಿಯೂ ಕೇದಾರಿನ ಗುಡಾರಗಳಲ್ಲಿಯೂ ಈ ಸ್ಥಳಗಳ ಜನರು ಪ್ರಖ್ಯಾತ ಹೋರಾಟಗಾರರು. ವಾಸಿಸುವಂತಿರುವುದು.
6 ಶಾಂತಿದ್ವೇಷಕರೊಂದಿಗೆ ನಾನು ಬಹುಕಾಲ ವಾಸಿಸಿದ್ದೇನೆ.
7 ಶಾಂತಿ ನೆಲೆಸಿರಲಿ ಎಂದು ನಾನು ಹೇಳಿದರೂ ಅವರು ಯುದ್ಧವನ್ನೇ ಇಷ್ಟಪಡುತ್ತಾರೆ.