6
ಕ್ರೈಸ್ತರು ಕ್ರೈಸ್ತರಲ್ಲದವರ ಮುಂದೆ ವ್ಯಾಜ್ಯವಾಡಿದ್ದನ್ನು ಕುರಿತದ್ದು
1 ನಿಮ್ಮಲ್ಲಿ ಒಬ್ಬನಿಗೆ ಮತ್ತೊಬ್ಬನ ಮೇಲೆ ಏನಾದರೂ ವಿವಾದವಿದ್ದರೆ ನ್ಯಾಯವಿಚಾರಣೆಗೆ *ಮತ್ತಾ 18:17ದೇವಜನರೆದುರು ತೆಗೆದುಕೊಂಡು ಹೋಗದೇ ಅನ್ಯಜನರ ಮುಂದೆ ತೆಗೆದುಕೊಂಡು ಹೋಗುವಿರೋ? 2 †ದಾನಿ. 7:22; ಮತ್ತಾ 19:28ದೇವಜನರು ಲೋಕಕ್ಕೆ ತೀರ್ಪುಮಾಡುವರೆಂಬುದು ನಿಮಗೆ ತಿಳಿಯದೋ? ಲೋಕವು ನಿಮ್ಮಿಂದ ತೀರ್ಪನ್ನು ಹೊಂದಬೇಕಾಗಿರುವಲ್ಲಿ ಅತ್ಯಲ್ಪವಾದ ಸಂಗತಿಗಳನ್ನು ಕುರಿತು ತೀರ್ಪುಮಾಡುವುದಕ್ಕೆ ನೀವು ಅನರ್ಹರಾಗಿದ್ದೀರೋ? 3 ನಾವು ದೇವದೂತರಿಗೂ ತೀರ್ಪುಮಾಡುವೆವೆಂಬುದು ನಿಮಗೆ ತಿಳಿಯದೋ? ಹಾಗಾದರೆ ಇಹಲೋಕ ಜೀವನದ ವಿಷಯಗಳ ಕುರಿತು ನಾವು ಎಷ್ಟೋ ಹೆಚ್ಚಾಗಿ ತೀರ್ಪುಮಾಡಬಹುದಲ್ಲವೇ? 4 ಇಹಲೋಕ ಜೀವನಕ್ಕೆ ಸಂಬಂಧಪಟ್ಟ ವಿಷಯಗಳ ನ್ಯಾಯ ನಿರ್ಣಯಿಸುವುದಕ್ಕೆ ನಿಮ್ಮಲ್ಲಿದ್ದರೆ, ಇಂಥ ವಿಷಯಗಳನ್ನು ತೀರ್ಪು ಮಾಡುವುದಕ್ಕೆ ಸಭೆಯಲ್ಲಿ ಗಣನೆಗೆ ಬಾರದವರನ್ನು ಏಕೆ ನೇಮಿಸಿಕೊಳ್ಳುತ್ತೀರಿ? 5 ನಿಮ್ಮನ್ನು ನಾಚಿಕೆಪಡಿಸುವುದಕ್ಕೆ ಇದನ್ನು ಹೇಳುತ್ತಿದ್ದೇನೆ. ತನ್ನ ಸಹೋದರರ ಮಧ್ಯದಲ್ಲಿ ನ್ಯಾಯವನ್ನು ಬಗೆಹರಿಸಬಲ್ಲವನಾದ ಬುದ್ಧಿವಂತನು ನಿಮ್ಮಲ್ಲಿ ಒಬ್ಬನಾದರೂ ಇಲ್ಲವೋ? 6 ಆದರೆ ಅದಕ್ಕೆ ಬದಲಾಗಿ ಒಬ್ಬ ವಿಶ್ವಾಸಿಯು ಮತ್ತೊಬ್ಬ ವಿಶ್ವಾಸಿಯ ವಿರುದ್ಧ ನ್ಯಾಯಾಲಯಕ್ಕೆ ಹೋಗುವುದು ಅಲ್ಲದೆ ಅದನ್ನು ಅವಿಶ್ವಾಸಿಯ ಮುಂದೆ ತೆಗೆದುಕೊಂಡು ಹೋಗುವುದು ಸರಿಯೋ? 7 ನಿಮ್ಮಲ್ಲಿ ವಿವಾದಗಳಿರುವುದಾದರೆ ನೀವು ಸೋತವರೆಂಬುದಕ್ಕೆ ಇದೇ ಗುರುತಾಗಿದೆ, ಅದಕ್ಕಿಂತ ಅನ್ಯಾಯವನ್ನು ಸಹಿಸುವುದೇ ಮೇಲು; ಮೋಸವನ್ನು ಅದರಿಂದಾದ ‡ಮತ್ತಾ 5:39,40ನಷ್ಟವನ್ನು ಯಾಕೆ ತಾಳಬಾರದು? 8 ಆದರೆ ನೀವು ನಿಮ್ಮ §1 ಥೆಸ. 4:6ಸ್ವಂತ ಸಹೋದರರಿಗೆ ಅನ್ಯಾಯವನ್ನು ಮತ್ತು ಮೋಸವನ್ನು ಮಾಡಿದ್ದೀರಿ. 9 ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲವೆಂಬುದು ನಿಮಗೆ ತಿಳಿಯದೋ? ಸುಳ್ಳನ್ನು ನಂಬಬೇಡಿರಿ. ಜಾರರು, ವಿಗ್ರಹಾರಾಧಕರು, ವ್ಯಭಿಚಾರಿಗಳು, ಪುರುಷಗಾಮಿಗಳು, ಕಳ್ಳರು, 10 ಲೋಭಿಗಳು, ಕುಡುಕರು, ಜಗಳಮಾಡುವವರು, ಸುಲುಕೊಳ್ಳುವವರು *1 ಕೊರಿ 15:50; ಗಲಾ. 5:21; ಎಫೆ 5:5; ಇಬ್ರಿ. 12:14; ಪ್ರಕ 21:8; 22:15ಇವರೊಳಗೆ ಒಬ್ಬರಾದರೂ ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲ. 11 †1 ಕೊರಿ 12:2-3, 22; 5:8; ಕೊಲೊ 3:7; ತೀತ 3:3ನಿಮ್ಮಲ್ಲಿ ಕೆಲವರು ಅಂಥವರಾಗಿದ್ದೀರಿ. ಆದರೆ ನೀವು ‡ಅ. ಕೃ. 22:16; ಇಬ್ರಿ. 10:22; ತೀತ 3:5ಕರ್ತನಾದ ಯೇಸು ಕ್ರಿಸ್ತನ ಹೆಸರಿನಿಂದಲೂ ಮತ್ತು ನಮ್ಮ ದೇವರ ಆತ್ಮದಿಂದಲೂ ತೊಳೆಯಲ್ಪಟ್ಟು, §1 ಕೊರಿ 1:2ಶುದ್ಧೀಕರಿಸಲ್ಪಟ್ಟಿದ್ದೀರಿ, ದೇವರಿಂದ *ರೋಮಾ. 8:30ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದೀರಿ.
ದೇಹದ ಮೂಲಕ ದೇವರನ್ನು ಮಹಿಮೆಪಡಿಸಿರಿ
12 †1 ಕೊರಿ 10:23“ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ನನಗೆ ಹಕ್ಕುವುಂಟು,” ಆದರೆ ಎಲ್ಲವು ಪ್ರಯೋಜನಕರವಲ್ಲ. “ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ನನಗೆ ಹಕ್ಕುವುಂಟು” ಆದರೆ ನಾನು ಯಾವುದಕ್ಕೂ ಅಧೀನನಲ್ಲ. 13 ‡ಮತ್ತಾ 19:5; ಮಾರ್ಕ 10:; ಎಫೆ 5:31“ಭೋಜನ ಪದಾರ್ಥಗಳು ಹೊಟ್ಟೆಗಾಗಿಯೂ ಮತ್ತು ಹೊಟ್ಟೆಯು ಭೋಜನಪದಾರ್ಥಗಳಿಗಾಗಿಯೂ” ಇವೆ. ದೇವರು ಇವೆರಡನ್ನೂ ನಾಶಮಾಡುವನು. ಆದರೆ ದೇಹವು ಜಾರತ್ವಕೋಸ್ಕರ ಇರುವಂಥದಲ್ಲ. §1 ಕೊರಿ 6:15-19ಕರ್ತನಿಗೋಸ್ಕರ ಇರುವುದಾಗಿದೆ. *ಎಫೆ 5:23ಕರ್ತನು ದೇಹಕೋಸ್ಕರ ಒದಗಿಸಿಕೊಡುತ್ತಾನೆ. 14 †ಅ. ಕೃ. 2:24ದೇವರು ಕರ್ತನನ್ನು ತನ್ನ ಶಕ್ತಿಯಿಂದ ಪುನರುತ್ಥಾನಗೊಳಿಸಿದ ಹಾಗೆಯೇ ‡1 ಕೊರಿ 15:22,23; ಯೋಹಾ 6:39, 40ನಮ್ಮನ್ನೂ ತನ್ನ ಶಕ್ತಿಯಿಂದ ಎಬ್ಬಿಸುವನು. 15 §1 ಕೊರಿ 6:13; ಎಫೆ 5:30; 1 ಕೊರಿ 12:27; ರೋಮಾ. 12:5ನಿಮ್ಮ ದೇಹಗಳು ಕ್ರಿಸ್ತನ ಅಂಗಗಳಾಗಿವೆ ಎಂಬುದು ನಿಮಗೆ ತಿಳಿಯದೋ? ಹೀಗಿರಲಾಗಿ ಕ್ರಿಸ್ತನ ಅಂಗಗಳಾಗಿರುವಂಥವುಗಳನ್ನು ತೆಗೆದು ವೇಶ್ಯೆಯ ಅಂಗಗಳೊಡನೆ ಸೇರಿಸುವುದು ಸರಿಯೋ? ಎಂದಿಗೂ ಹಾಗೆ ಮಾಡಬಾರದು 16 ವೇಶ್ಯೆಯೊಂದಿಗೆ ಸೇರಿಕೊಂಡವನು ಅವಳೊಂದಿಗೆ ಒಂದೇ ದೇಹವಾಗಿದ್ದಾನೆಂಬುದು ನಿಮಗೆ ತಿಳಿಯದೋ? *ಆದಿ 2:24; ಮತ್ತಾ 19:5; ಮಾರ್ಕ 10:8; ಎಫೆ 5:31“ಇಬ್ಬರು ಒಂದೇ ಶರೀರವಾಗಿರುವರೆಂದು” ದೇವರವಾಕ್ಯ ಹೇಳುತ್ತದಲ್ಲಾ. 17 ಆದರೆ ಕರ್ತನೊಂದಿಗೆ ಸೇರಿಕೊಂಡವನು †ಎಫೆ 4:4; ಯೋಹಾ 17:21-23ಆತನೊಂದಿಗೆ ಒಂದೇ ಆತ್ಮವಾಗಿದ್ದಾನೆ. 18 ಜಾರತ್ವವನ್ನು ಬಿಟ್ಟು ದೂರ ಓಡಿಹೋಗಿರಿ. “ಮನುಷ್ಯರು ಮಾಡುವ ಇತರ ಪಾಪಕೃತ್ಯಗಳು ದೇಹದ ಹೊರಗಿವೆ”, ಆದರೆ ಜಾರತ್ವ ಮಾಡುವವನು ತನ್ನ ಸ್ವಂತ ದೇಹಕ್ಕೆ ವಿರೋಧವಾಗಿ ಪಾಪ ಮಾಡುತ್ತಾನೆ. 19 ‡ರೋಮಾ. 14:7ನೀವು ನಿಮ್ಮ ಸ್ವಂತ ಸೊತ್ತಲ್ಲವೆಂದು ಮತ್ತು §1 ಕೊರಿ 3:16; ಯೋಹಾ 2:21ದೇವರಿಂದ ದಾನವಾಗಿ ಲಭಿಸಿದ ಪವಿತ್ರಾತ್ಮನು ನಿಮ್ಮೊಳಗೆ ನೆಲೆಗೊಂಡಿರುವುದರಿಂದ ನಿಮ್ಮ ದೇಹವು ದೇವರ ಪವಿತ್ರಾಲಯವಾಗಿದೆಂಬುದು ನಿಮಗೆ ತಿಳಿಯದೋ? 20 *1 ಕೊರಿ 7:23; ಅ. ಕೃ. 20:28ನೀವು ಕ್ರಯಕ್ಕೆ ಕೊಳ್ಳಲ್ಪಟ್ಟವರು ಆದಕಾರಣ †1 ಕೊರಿ 12:4, 11; ರೋಮಾ. 12:6ನಿಮ್ಮ ದೇಹದ ಮೂಲಕ ದೇವರನ್ನು ಮಹಿಮೆಪಡಿಸಿರಿ.
*6:1 ಮತ್ತಾ 18:17
†6:2 ದಾನಿ. 7:22; ಮತ್ತಾ 19:28
‡6:7 ಮತ್ತಾ 5:39,40
§6:8 1 ಥೆಸ. 4:6
*6:10 1 ಕೊರಿ 15:50; ಗಲಾ. 5:21; ಎಫೆ 5:5; ಇಬ್ರಿ. 12:14; ಪ್ರಕ 21:8; 22:15
†6:11 1 ಕೊರಿ 12:2-3, 22; 5:8; ಕೊಲೊ 3:7; ತೀತ 3:3
‡6:11 ಅ. ಕೃ. 22:16; ಇಬ್ರಿ. 10:22; ತೀತ 3:5
§6:11 1 ಕೊರಿ 1:2
*6:11 ರೋಮಾ. 8:30
†6:12 1 ಕೊರಿ 10:23
‡6:13 ಮತ್ತಾ 19:5; ಮಾರ್ಕ 10:; ಎಫೆ 5:31
§6:13 1 ಕೊರಿ 6:15-19
*6:13 ಎಫೆ 5:23
†6:14 ಅ. ಕೃ. 2:24
‡6:14 1 ಕೊರಿ 15:22,23; ಯೋಹಾ 6:39, 40
§6:15 1 ಕೊರಿ 6:13; ಎಫೆ 5:30; 1 ಕೊರಿ 12:27; ರೋಮಾ. 12:5
*6:16 ಆದಿ 2:24; ಮತ್ತಾ 19:5; ಮಾರ್ಕ 10:8; ಎಫೆ 5:31
†6:17 ಎಫೆ 4:4; ಯೋಹಾ 17:21-23
‡6:19 ರೋಮಾ. 14:7
§6:19 1 ಕೊರಿ 3:16; ಯೋಹಾ 2:21
*6:20 1 ಕೊರಿ 7:23; ಅ. ಕೃ. 20:28
†6:20 1 ಕೊರಿ 12:4, 11; ರೋಮಾ. 12:6