3
ಹೊಸ ಒಡಂಬಡಿಕೆಯ ಸೇವಕರು
* 3:1 2 ಕೊರಿ 5:12, 10:12, 12:11ನಮ್ಮನ್ನು ನಾವೇ ಮತ್ತೆ ಹೊಗಳಿಕೊಳ್ಳುವುದಕ್ಕೆ ಪ್ರಾರಂಭಿಸುತ್ತೇವೋ? ಇಲ್ಲವೆ ಕೆಲವರಿಗೆ ಬೇಕಾಗಿರುವ ಪ್ರಕಾರ ನಿಮಗೆ ತೋರಿಸತಕ್ಕ ಯೋಗ್ಯತಾ ಪತ್ರಗಳು ನಮಗೆ ಅಗತ್ಯವೋ? ಅಥವಾ ಅಂಥ ಪತ್ರಗಳನ್ನು ನಿಮ್ಮಿಂದ ಪಡೆದುಕೊಳ್ಳಬೇಕೋ? ಸ್ವತಃ 3:2 1 ಕೊರಿ 9:2“ನೀವೇ ನಮ್ಮ ಯೋಗ್ಯತಾ ಪತ್ರ” ಅದು ನಮ್ಮ ಹೃದಯಗಳಲ್ಲೇ ಬರೆದಿದೆ ಆ ಪತ್ರವನ್ನು ಎಲ್ಲರೂ ಬಲ್ಲರು. ಎಲ್ಲರೂ ಓದುತ್ತಾರೆ. ನೀವು, ನಮ್ಮ ಸೇವೆಯ ಫಲವಾಗಿ, ಕ್ರಿಸ್ತನು ನಮ್ಮ ಕೈಯಿಂದ ಬರೆಸಿಕೊಟ್ಟ ಪತ್ರವಾಗಿದ್ದೀರೆಂಬದು ಪ್ರತ್ಯಕ್ಷಪಡಿಸಿದ್ದೀರಿ. ಅದು ಮಸಿಯಿಂದ ಬರೆದದ್ದಲ್ಲ. ಜೀವವುಳ್ಳ ದೇವರ ಆತ್ಮನಿಂದಲೇ ಬರೆದದ್ದು. 3:3 ವಿಮೋ 24:12, ಧರ್ಮೋ 4:13ಕಲ್ಲಿನ ಹಲಿಗೆಯ ಮೇಲಲ್ಲಾ, § 3:3 ಜ್ಞಾ. 3:3, 7:, ಯೆಹೆ. 11:19, 36:26ಮನುಷ್ಯನ ಹೃದಯಗಳೆಂಬ ಹಲಿಗೆಗಳ ಮೇಲೆ ಬರೆದದ್ದು. ನಮಗೆ ಇಂಥ ಭರವಸೆಯು ಕ್ರಿಸ್ತನ ಮೂಲಕವೇ ದೇವರಲ್ಲಿದೆ. * 3:5 ಎಫೆ 2:8ನಮ್ಮಿಂದಲೇ ಏನಾದರೂ ಉಂಟಾಯಿತೆಂದು ತೀರ್ಮಾನಿಸಿಕೊಳ್ಳುವುದಕ್ಕೆ ನಮಗೆ ನಾವೇ ಯೋಗ್ಯರಲ್ಲ 3:5 1 ಕೊರಿ 5:10ನಮಗಿರುವ ಯೋಗ್ಯತೆಯೂ ದೇವರಿಂದಲೇ ಬಂದದ್ದು. ಆತನು 3:6 ಯೆರೆ 31:31, ಲೂಕ 22:30, 1 ಕೊರಿ 11:25ಹೊಸ ಒಡಂಬಡಿಕೆಗೆ § 3:6 ಎಫೆ 3:7, 2 ಕೊರಿ 4:1, 5:18ಸೇವಕರಾಗಿರುವ ಸಾಮರ್ಥ್ಯವನ್ನು ನಮಗೆ ಅನುಗ್ರಹಿಸಿದ್ದಾನೆ. ಈ ಒಡಂಬಡಿಕೆಯು ಲಿಖಿತರೂಪವಾಗಿರದೆ * 3:6 ಆತ್ಮೀಕವಾದದ್ದುದೇವರಾತ್ಮ ಸಂಬಂಧವಾದದ್ದು ಆಗಿದೆ. ಲಿಖಿತ ರೂಪವಾದ ಒಡಂಬಡಿಕೆಯು ಮರಣವನ್ನುಂಟು ಮಾಡುತ್ತದೆ. 3:6 ಯೋಹಾ 6:63ದೇವರಾತ್ಮ ಸಂಬಂಧವಾದದ್ದು ಜೀವವನ್ನುಂಟುಮಾಡುತ್ತದೆ. 3:7 2 ಕೊರಿ 3:9, ರೋಮಾ. 4:15ಕಲ್ಲಿನ ಮೇಲೆ ಕೊರೆಯಲಾದ ಮೃತ್ಯುಕಾರಕವಾದ ಈ ಶಾಸನ ಅಷ್ಟು ಮಹಿಮೆಯಿಂದ ಕೂಡಿದ್ದಾಗಿತ್ತು. ಆ ಮಹಿಮೆಯಿಂದ ಮೋಶೆಯ ಮುಖವನ್ನು ಆವರಿಸಿದ್ದ ಮಹಿಮೆಯೂ ಕುಂದಿಹೋಗುವಂಥದ್ದಾಗಿದ್ದರೂ ಆ ಮಹಿಮೆಯಿಂದಾಗಿ ಆತನ ಮುಖವನ್ನು ದಿಟ್ಟಿಸಿ ನೋಡಲು ಇಸ್ರಾಯೇಲರಿಗೆ ಆಗಲಿಲ್ಲ. ಹೀಗಿದ್ದ ಮೇಲೆ § 3:8 ಆತ್ಮೀಕವಾದದೇವರಾತ್ಮಸಂಬಂಧವಾದ ಈ ಸೇವೆಯು ಇನ್ನೆಷ್ಟು ಮಹಿಮೆಯಿಂದ ಇರಬೇಕಲ್ಲವೇ? * 3:9 2 ಕೊರಿ 3:7, ಇಬ್ರಿ. 12:18-21ಅಪರಾಧ ನಿರ್ಣಯಕ್ಕೆ ಸಾಧನವಾಗಿರುವ ಸೇವೆಯು ಮಹಿಮೆಹೊಂದಿರಲಾಗಿ, ನೀತಿಗೆ ಸಾಧನವಾಗಿರುವ ಸೇವೆಯು ಇನ್ನೆಷ್ಟೋ ಅಧಿಕ ಮಹಿಮೆಯುಳ್ಳದ್ದಾಗಿ ಇರತ್ತದಲ್ಲವೋ? 10 ಅಧಿಕವಾದ ಮಹಿಮೆಯುಳ್ಳದ್ದು ಬಂದದ್ದರಿಂದ ಮೊದಲಿದ್ದ ಮಹಿಮೆಯು ಅದರ ಎದುರು ಮಹಿಮೆಯಿಲ್ಲದಂತಾಯಿತು. 11 ಅಳಿದು ಹೋಗುವಂಥದ್ದೇ, ಅಷ್ಟು ಪ್ರಭಾವವುಳ್ಳದ್ದಾಗಿದ್ದರೆ ಶಾಶ್ವತವಾಗಿ ಉಳಿಯುವಂಥದ್ದು ಮತ್ತೆಷ್ಟು ಹೆಚ್ಚಾದ ಪ್ರಭಾವವುಳ್ಳದ್ದಾಗಿರಬೇಕಲ್ಲವೋ? 12 ನಮಗೆ ಇಂಥ ಭರವಸೆ ಇರುವುದರಿಂದಲೇ ನಾವು ಇಷ್ಟು ಧೈರ್ಯದಿಂದ ಇದ್ದೇವೆ. 13 ಕುಂದಿಹೋಗುವಂಥ ಮಹಿಮೆಯು ಕುಂದಿಹೋಗುವುದನ್ನು ಇಸ್ರಾಯೇಲರು ಕಾಣದಂತೆ ಮೋಶೆಯು ತನ್ನ ಮುಖಕ್ಕೆ ಮುಸುಕು ಹಾಕಿಕೊಳ್ಳುತ್ತಿದ್ದನು. ನಾವು ಮೋಶೆಯಂತೆ ಮಾಡುವುದಿಲ್ಲ. 14 ಆದರೆ ಆ ಜನರ ಬುದ್ಧಿಗೆ ಮಂಕು ಕವಿದಿತ್ತು. ಈ ದಿನದವರೆಗೂ ಹಳೇ ಒಡಂಬಡಿಕೆಯು 3:14 ಅ. ಕೃ. 13:15, 21ಓದುವಾಗೆಲ್ಲಾ ಅದೇ ಮಂಕಿನ ಮುಸುಕು ಕವಿದಿದೆ. ಅದನ್ನು ಕ್ರಿಸ್ತ ಯೇಸುವಿನ ಮುಖಾಂತರವೇ ತೆರೆಯಲು ಸಾಧ್ಯ. 15 ಈ ದಿನದವರೆಗೂ ಮೋಶೆಯ ಧರ್ಮಶಾಸ್ತ್ರವು ಓದುವಾಗೆಲ್ಲಾ ಮುಸುಕು ಅವರ ಹೃದಯವನ್ನು ಮುಚ್ಚಿರುತ್ತದೆ. 16  3:16 ರೋಮಾ. 11; 23ಅವರ ಹೃದಯವು ಕರ್ತನ ಕಡೆಗೆ ತಿರುಗಿಕೊಂಡಾಗಲೇ ಆ ಮುಸುಕು ತೆಗೆಯಲ್ಪಡುವುದು. 17 ಆ ಕರ್ತನು ದೇವರಾತ್ಮನೇ. § 3:17 ಯೆಶಾ 40:30-31ಕರ್ತನ ಆತ್ಮನು ಇರುವಲ್ಲಿ ಸ್ವಾತಂತ್ರ್ಯವಿರುತ್ತದೆ. 18 ನಾವೆಲ್ಲರೂ ಮುಸುಕು ತೆಗೆದಿರುವ ಮುಖದಿಂದ * 3:18 2 ಕೊರಿ 4:4-6, ಯೋಹಾ 17:24ಕರ್ತನ ಪ್ರಭಾವವನ್ನು 3:18 1 ಕೊರಿ 13:12ದರ್ಪಣದಲ್ಲಿ ಕಾಣಿಸುತ್ತದೋ ಎಂಬಂತೆ ದೃಷ್ಟಿಸುವವರಾಗಿದ್ದು ನಾವೆಲ್ಲರೂ ಕರ್ತನ ದಾನವಾಗಿರುವ ಆತ್ಮದ ಮಹಿಮೆಯಿಂದ ಅಧಿಕ ಮಹಿಮೆಗೆ ಹೋಗುತ್ತಾ, ಆ ಮಹಿಮೆಯ ಸಾರೂಪ್ಯವುಳ್ಳವರೇ ಆಗುತ್ತೇವೆ. ಇದು ಆತ್ಮನಾಗಿರುವ ಕರ್ತನ ಕಾರ್ಯವೇ ಸರಿ.

*3:1 3:1 2 ಕೊರಿ 5:12, 10:12, 12:11

3:2 3:2 1 ಕೊರಿ 9:2

3:3 3:3 ವಿಮೋ 24:12, ಧರ್ಮೋ 4:13

§3:3 3:3 ಜ್ಞಾ. 3:3, 7:, ಯೆಹೆ. 11:19, 36:26

*3:5 3:5 ಎಫೆ 2:8

3:5 3:5 1 ಕೊರಿ 5:10

3:6 3:6 ಯೆರೆ 31:31, ಲೂಕ 22:30, 1 ಕೊರಿ 11:25

§3:6 3:6 ಎಫೆ 3:7, 2 ಕೊರಿ 4:1, 5:18

*3:6 3:6 ಆತ್ಮೀಕವಾದದ್ದು

3:6 3:6 ಯೋಹಾ 6:63

3:7 3:7 2 ಕೊರಿ 3:9, ರೋಮಾ. 4:15

§3:8 3:8 ಆತ್ಮೀಕವಾದ

*3:9 3:9 2 ಕೊರಿ 3:7, ಇಬ್ರಿ. 12:18-21

3:14 3:14 ಅ. ಕೃ. 13:15, 21

3:16 3:16 ರೋಮಾ. 11; 23

§3:17 3:17 ಯೆಶಾ 40:30-31

*3:18 3:18 2 ಕೊರಿ 4:4-6, ಯೋಹಾ 17:24

3:18 3:18 1 ಕೊರಿ 13:12