13
1 ನಾನು ನಿಮ್ಮ ಬಳಿಗೆ ಮೂರನೆಯ ಸಾರಿ ಬರುತ್ತಿದ್ದೇನೆ. *ಧರ್ಮೋ 19:15; ಅರಣ್ಯ 35:30“ಯಾವ ದೂರಿದ್ದರೂ ಅದಕ್ಕೆ ಇಬ್ಬರು ಮೂವರು ಸಾಕ್ಷಿಗಳ ಆಧಾರವಿರಬೇಕು,” ಎಂದು ಲಿಖಿತವಾಗಿದೆ. 2 ನಾನು ಎರಡನೆಯ ಸಾರಿ ನಿಮ್ಮಲ್ಲಿದ್ದಾಗ †2 ಕೊರಿ 13:10; 1 ಕೊರಿ 4:21ತಿರುಗಿ ಬಂದರೆ ನಿಮ್ಮನ್ನು ಶಿಕ್ಷಿಸದೆ ಬಿಡುವುದಿಲ್ಲವೆಂದು ಹೇಗೆ ಹೇಳಿದೆನೋ, ಹಾಗೆಯೇ ಈಗಲೂ ನಿಮಗೆ: ‡2 ಕೊರಿ 12:21ಪೂರ್ವ ಪಾಪಕೃತ್ಯಗಳನ್ನು ಇನ್ನೂ ನಡಿಸುವವರಿಗೂ ಮತ್ತು ಮಿಕ್ಕಾದವರೆಲ್ಲರಿಗೂ ಹೇಳುತ್ತೇನೆ. 3 ಕ್ರಿಸ್ತನು ನನ್ನಲ್ಲಿ ಮಾತನಾಡುತ್ತಾನೆಂಬುವುದಕ್ಕೆ ನೀವು ಸಾಕ್ಷಿ ಕೇಳಿದ್ದರಿಂದ ನಾನು ಹೀಗೆ ಹೇಳುತ್ತೇನೆ. ಆತನು ನಿಮ್ಮನ್ನು ಕುರಿತು ದುರ್ಬಲನಾಗಿರದೆ §2 ಕೊರಿ 10:4ಶಕ್ತನೇ ಆಗಿದ್ದಾನೆ. ಬಲವಾದ ಕೆಲಸಗಳನ್ನು ನಿಮ್ಮಲ್ಲಿ ನಡಿಸುವವನಾಗಿದ್ದಾನೆ. 4 *ಫಿಲಿ. 2:7,8; 1 ಪೇತ್ರ 3:18ಆತನು ಬಲಹೀನಾವಸ್ಥೆಯಲ್ಲಿ ಶಿಲುಬೆಗೆ ಹಾಕಲ್ಪಟ್ಟನು ನಿಜ; †ರೋಮಾ. 1:4; 6:4ಆದರೂ ದೇವರ ಬಲದಿಂದ ಜೀವಿಸುವವನಾಗಿದ್ದಾನೆ. ‡2 ಕೊರಿ 12:10ನಾವೂ ಸಹ ಆತನ ಬಲಹೀನಾವಸ್ಥೆಯಲ್ಲಿ ಪಾಲುಗಾರರಾಗಿದ್ದೇವೆ, §ರೋಮಾ. 6:8ಆದರೂ ಆತನೊಂದಿಗೆ ದೇವರ ಬಲದಿಂದ ನಿಮಗಾಗಿ ಬದುಕುವವರಾಗಿದ್ದೇವೆ.
5 ನೀವು ಕ್ರಿಸ್ತ ನಂಬಿಕೆಯಲ್ಲಿ ಇದ್ದೀರೋ ಇಲ್ಲವೋ ಎಂದು ನಿಮ್ಮನ್ನು ನೀವೇ ಪರೀಕ್ಷಿಸಿಕೊಳ್ಳಿರಿ, ನಿಮ್ಮನ್ನು ನೀವೇ ಪರಿಶೋಧಿಸಿಕೊಳ್ಳಿರಿ. *ರೋಮಾ. 8:10; ಗಲಾ. 4:19ಯೇಸು ಕ್ರಿಸ್ತನು ನಿಮ್ಮಲ್ಲಿದ್ದಾನೆಂಬುದು ನಿಮಗೆ ತಿಳಿಯುವುದಿಲ್ಲವೋ? ಆತನು ನಿಮ್ಮಲ್ಲಿಲ್ಲದಿದ್ದರೆ ನೀವು ಆಯೋಗ್ಯರೇ. 6 ನಾವಂತೂ ಆಯೋಗ್ಯರಲ್ಲವೆಂದು ನಿಮಗೆ ಗೊತ್ತಾಗುವುದೆಂಬುದಾಗಿ ನನಗೆ ಭರವಸೆವುಂಟು. 7 ನೀವು ಕೆಟ್ಟದ್ದೇನೂ ಮಾಡಬಾರದೆಂದು ನಾವು ದೇವರನ್ನು ಪ್ರಾರ್ಥಿಸುತ್ತೇವೆ. ಇದರಲ್ಲಿ ನಾವೇ ಆ ಪರೀಕ್ಷೆಗೆ ಒಳ್ಳಗಾದವರೆಂದು ತೋರಿ ಬರಬೇಕೆಂಬುದು ನಮ್ಮ ಉದ್ದೇಶವಲ್ಲ. ನಾವು ಆ ಪರೀಕ್ಷೆಗೆ ಒಳ್ಳಗಾದವರೆನಿಸಿಕೊಂಡರೂ ನೀವು ಒಳ್ಳೆಯದನ್ನು ಮಾಡುವವರಾಗಬೇಕೆಂಬುದೇ ನಮ್ಮ ಉದ್ದೇಶ. 8 ಸತ್ಯಕ್ಕೆ ವಿರೋಧವಾಗಿ ನಾವೇನೂ ಮಾಡಲಾರೆವು, ಸತ್ಯಾಭಿವೃದ್ದಿಗೋಸ್ಕರವೇ ಸಮಸ್ತವನ್ನು ಮಾಡುತ್ತೇವೆ. 9 †1 ಕೊರಿ 4:10; 2 ಕೊರಿ 4:12; 12:5; 9:10ನಾವು ಬಲಹೀನರಾಗಿದ್ದರೂ ನೀವು ಬಲಿಷ್ಠರಾಗಿದ್ದ ಪಕ್ಷಕ್ಕೆ ಸಂತೋಷಪಡುತ್ತೇವೆ; ಇದಲ್ಲದೆ ನೀವು ಪೂರ್ಣ ಕ್ರಮಕ್ಕೆ ಬರಬೇಕೆಂದು ಪ್ರಾರ್ಥಿಸುತ್ತೇವೆ.
10 ಇದಕ್ಕಾಗಿಯೇ ನಾನು ನಿಮ್ಮಲ್ಲಿ ಇಲ್ಲದಿರುವಾಗಲೇ ನಿಮ್ಮನ್ನು ಕೆಡವಿಹಾಕುವುದಕ್ಕಲ್ಲ ಬದಲಾಗಿ ಕಟ್ಟುವುದಕ್ಕಾಗಿಯೇ ಬರೆದಿದ್ದೇನೆ. ‡2 ಕೊರಿ 10:8ಕರ್ತನು ನನಗೆ ಕೊಟ್ಟಿರುವ ಅಧಿಕಾರದ ಪ್ರಯೋಗದಲ್ಲಿ §2 ಕೊರಿ 2:3ನಿಮ್ಮ ಬಳಿಗೆ ಬಂದಾಗ ಕಾಠಿಣ್ಯವನ್ನು ತೋರಿಸುವುದಕ್ಕೆ ಅವಕಾಶವಿರಬಾರದೆಂದು ಇದನ್ನು ಬರೆಯುತ್ತಿದ್ದೇನೆ.
ಕಡೆ ಮಾತುಗಳು
11 ಕಡೆಯದಾಗಿ ಸಹೋದರರೇ, *ನಿಮಗೆ ಕ್ಷೇಮವಾಗಲಿಸಂತೋಷಪಡಿರಿ! ಕ್ರಮಪಡಿಸಿಕೊಳ್ಳಿರಿ. ಧೈರ್ಯವುಳ್ಳವರಾಗಿರಿ, †ರೋಮಾ. 12:16ಏಕ ಮನಸ್ಸುಳ್ಳವರಾಗಿರಿ, ‡ಮಾರ್ಕ 9:50ಸಮಾಧಾನದಿಂದ ಇರಿ; ಆಗ ಪ್ರೀತಿಸ್ವರೂಪನೂ, §ರೋಮಾ. 15:33ಶಾಂತಿದಾಯಕನೂ ಆದ ದೇವರು ನಿಮ್ಮ ಸಂಗಡ ಇರುವನು. 12 *ರೋಮಾ. 16:16ಪವಿತ್ರವಾದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ. 13 †ಫಿಲಿ. 4:22ದೇವಜನರೆಲ್ಲರೂ ನಿಮಗೆ ವಂದನೆ ಹೇಳುತ್ತಾರೆ. 14 ‡ರೋಮಾ. 16:20; 1 ಕೊರಿ 16:23ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯೂ, §ಯೂದ. 21ದೇವರ ಪ್ರೀತಿಯೂ, *ಫಿಲಿ. 2:1ಪವಿತ್ರಾತ್ಮನ ಅನ್ಯೋನ್ಯತೆಯೂ ನಿಮ್ಮೆಲ್ಲರ ಸಂಗಡವಿರಲಿ.
*13:1 ಧರ್ಮೋ 19:15; ಅರಣ್ಯ 35:30
†13:2 2 ಕೊರಿ 13:10; 1 ಕೊರಿ 4:21
‡13:2 2 ಕೊರಿ 12:21
§13:3 2 ಕೊರಿ 10:4
*13:4 ಫಿಲಿ. 2:7,8; 1 ಪೇತ್ರ 3:18
†13:4 ರೋಮಾ. 1:4; 6:4
‡13:4 2 ಕೊರಿ 12:10
§13:4 ರೋಮಾ. 6:8
*13:5 ರೋಮಾ. 8:10; ಗಲಾ. 4:19
†13:9 1 ಕೊರಿ 4:10; 2 ಕೊರಿ 4:12; 12:5; 9:10
‡13:10 2 ಕೊರಿ 10:8
§13:10 2 ಕೊರಿ 2:3
*13:11 ನಿಮಗೆ ಕ್ಷೇಮವಾಗಲಿ
†13:11 ರೋಮಾ. 12:16
‡13:11 ಮಾರ್ಕ 9:50
§13:11 ರೋಮಾ. 15:33
*13:12 ರೋಮಾ. 16:16
†13:13 ಫಿಲಿ. 4:22
‡13:14 ರೋಮಾ. 16:20; 1 ಕೊರಿ 16:23
§13:14 ಯೂದ. 21
*13:14 ಫಿಲಿ. 2:1