2
ಪೌಲನನ್ನು ಇತರ ಅಪೊಸ್ತಲರು ಅಂಗೀಕರಿಸಿದ್ದು
*ಅ. ಕೃ. 15:2ಹದಿನಾಲ್ಕು ವರ್ಷಗಳ ನಂತರ ನಾನು ಬಾರ್ನಬನ ಜೊತೆಯಲ್ಲಿ ತೀತನನ್ನು ಸಹ ಕರೆದುಕೊಂಡು, ಮತ್ತೊಮ್ಮೆ ಯೆರೂಸಲೇಮಿಗೆ ಹೋದೆನು. ದೈವಪ್ರೇರಣೆಗೆ ಅನುಸಾರವಾಗಿ ಹೋಗಿ, 1 ತಿಮೊ. 3:16ಅನ್ಯಜನರಲ್ಲಿ ನಾನು ಸಾರುವ ಸುವಾರ್ತೆಯು ಏನೆಂಬುದನ್ನು ಅಲ್ಲಿದ್ದ ಗಲಾ. 2:6-9ಗಣ್ಯರಿಗೆ ಪ್ರತ್ಯೇಕವಾಗಿ ತಿಳಿಸಿದೆನು. ಏಕೆಂದರೆ ನಾನು §ಮೂಲ: ಓಡುತ್ತಿರುವುದು ಅಥವಾ ಓಡಿದ್ದು. ಸುವಾರ್ತೆಗಾಗಿ ಪಟ್ಟ ಶ್ರಮವಾಗಲಿ, ಈಗ ಪಡುತ್ತಿರುವ ಶ್ರಮವಾಗಲಿ ನಿಷ್ಫಲವಾಗಬಾರದೆಂದು ತಿಳಿಸಿದೆನು. ನನ್ನ ಜೊತೆಯಲ್ಲಿದ್ದ ತೀತನು ಗ್ರೀಕನಾಗಿದ್ದರೂ *ಅ. ಕೃ. 16:3 ಹೋಲಿಸಿಅವನಿಗೆ ಸುನ್ನತಿಯಾಗಬೇಕೆಂದು ಯಾರೂ ಒತ್ತಾಯಮಾಡಲಿಲ್ಲ. ಅ. ಕೃ. 15:24, 2 ಕೊರಿ 11:26ಆದರೆ ರಹಸ್ಯವಾಗಿ ಒಳಗೆ ಬಂದಿದ್ದ ಸುಳ್ಳು ಸಹೋದರರು ನಮ್ಮನ್ನು ಧರ್ಮಶಾಸ್ತ್ರದ ಗಲಾ. 4:3,9; 9:24-25, 2 ಕೊರಿ 11:20, ರೋಮಾ. 8:15ದಾಸತ್ವದಲ್ಲಿ ಸಿಕ್ಕಿಸಬೇಕೆಂದು, ಕ್ರಿಸ್ತ ಯೇಸುವಿನಲ್ಲಿರುವ §ಗಲಾ. 5:1ನಮ್ಮ ಸ್ವಾತಂತ್ರ್ಯವನ್ನು ಗೂಢವಾಗಿ ವಿಚಾರಿಸಲು ಬಂದಿದ್ದರು. ಸುವಾರ್ತೆಯ ಸತ್ಯಾರ್ಥವು ನಿಮ್ಮಲ್ಲಿ ಸ್ಥಿರವಾಗಿರಬೇಕೆಂದು ನಾವು ಅವರ ಅಧೀನಕ್ಕೆ ಒಂದು ಗಳಿಗೆಯೂ ಒಳಪಡಲಿಲ್ಲ.
ಆದರೆ *ವ. 29 ನೋಡಿರಿಗಣ್ಯವ್ಯಕ್ತಿಗಳಾಗಿದ್ದವರಿಂದ ನನಗೇನೂ ದೊರೆಯಲಿಲ್ಲ. ಅವರು ಹಿಂದಿನ ಕಾಲದಲ್ಲಿ ಎಂಥವರಾಗಿದ್ದರೋ ನನಗೆ ಲಕ್ಷ್ಯವಿಲ್ಲ. ಧರ್ಮೋ 10:17, ರೋಮಾ. 2:11ದೇವರಿಗೆ ಮನುಷ್ಯರನ್ನು ಮೆಚ್ಚಿಸಬೇಕಾಗಿಲ್ಲ. ಗಣ್ಯವ್ಯಕ್ತಿಗಳೆಂದು ಎನಿಸಿಕೊಂಡವರು 2 ಕೊರಿ 11:5, 12:11ನನಗೇನನ್ನೂ ತಿಳಿಸಿಕೊಡಲಿಲ್ಲ. ಆದರೆ ಸುನ್ನತಿಯಾದವರಿಗೆ ಸುವಾರ್ತೆಯನ್ನು ಸಾರುವ ಕೆಲಸವು ಹೇಗೆ ಪೇತ್ರನಿಗೆ ಕೊಡಲ್ಪಟ್ಟಿತೋ, §ಗಲಾ. 1:16, ಅ. ಕೃ. 9:15, ಥೆಸ. 2:4, 1 ತಿಮೊ. 1:11ಹಾಗೆಯೇ ಅನ್ಯಜನರಿಗೆ ಅದನ್ನು ಸಾರುವ ಕಾರ್ಯವನ್ನು ನನಗೆ ಕೊಡಲ್ಪಟ್ಟಿತು. ಸುನ್ನತಿಯಾದವರಲ್ಲಿ ಅಪೊಸ್ತಲತನವನ್ನು ನಡೆಸುವುದಕ್ಕೋಸ್ಕರ ಪೇತ್ರನಿಗೆ ವಹಿಸಿಕೊಟ್ಟಂಥ ದೇವರು, ಸುನ್ನತಿಯಿಲ್ಲದವರಲ್ಲಿ ಅದನ್ನು ನಡೆಸುವುದಕ್ಕಾಗಿ ನನಗೆ ವಹಿಸಿದ್ದನು. *ಯೆರೆ 1:18, ಪ್ರಕ 3:12ಸಭೆಯ ಸ್ತಂಭಗಳೆಂದು ಕರೆಸಿಕೊಂಡಿರುವ ಯಾಕೋಬ, ಕೇಫ, ಯೋಹಾನರು ದೇವರು ನನಗೆ ದಯಪಾಲಿಸಿರುವ ವರವನ್ನು ತಿಳಿದುಕೊಂಡು, 2 ಪೇತ್ರ. 3:15ಅನ್ಯೋನ್ಯತೆಯನ್ನು ತೋರಿಸುವುದಕ್ಕಾಗಿ ನನಗೂ ಬಾರ್ನಬನಿಗೂ ಸಹಕಾರ ನೀಡಿ ಬಲಗೈ ಕೊಟ್ಟು, ನೀವು ಅನ್ಯಜನಗಳ ಬಳಿಗೆ ಹೋಗಿರಿ, ನಾವು ಸುನ್ನತಿಯವರ ಬಳಿಗೆ ಹೋಗುತ್ತೇವೆ ಅಂದರು. 10 ಆದರೆ ನೀವು ನಮ್ಮಲ್ಲಿರುವ ಬಡವರನ್ನು ಮರೆಯಬಾರದೆಂಬ ಒಂದೇ ಸಂಗತಿಯನ್ನು ಬೇಡಿಕೊಂಡರು, ಅ. ಕೃ. 24:17ಹಾಗೆ ಮಾಡುವುದರಲ್ಲಿ ನಾನೂ ಆಸಕ್ತನಾಗಿದ್ದೆನು.
ಪೌಲನು ಅಂತಿಯೋಕ್ಯದಲ್ಲಿ ಪೇತ್ರನನ್ನು ಖಂಡಿಸಿದ್ದು
11 §ಅ. ಕೃ. 15:1,35ಕೇಫನು ಅಂತಿಯೋಕ್ಯಕ್ಕೆ ಬಂದಾಗ ಅವನಲ್ಲಿ ತಪ್ಪು ಕಾಣಿಸಿಕೊಂಡದ್ದರಿಂದ ನಾನು ಅವನನ್ನು ಮುಖಾಮುಖಿಯಾಗಿ ಖಂಡಿಸಿದೆನು. 12 ಏಕೆಂದರೆ ಯಾಕೋಬನ ಕಡೆಯಿಂದ ಕೆಲವರು ಬರುವುದಕ್ಕೆ ಮೊದಲು *ಅ. ಕೃ. 11:3, ಲೂಕ 15:2ಅವನು ಅನ್ಯಜನರೊಂದಿಗೆ ಊಟ ಮಾಡುತ್ತಿದ್ದನು. ಅವರು ಬಂದ ಮೇಲೆ ಅ. ಕೃ. 11:2ಸುನ್ನತಿಯವರಾದ ಅವರಿಗೆ ಅವನು ಭಯಪಟ್ಟು, ಅನ್ಯಜನರನ್ನು ಬಿಟ್ಟು ತನ್ನನ್ನು ಪ್ರತ್ಯೇಕಿಸಿಕೊಂಡನು. 13 ಇದಲ್ಲದೆ ಉಳಿದ ಯೆಹೂದ್ಯರೂ ಅವನೊಂದಿಗೆ ಸೇರಿ ಹಾಗೆಯೇ ಕಪಟತನದಿಂದ ವರ್ತಿಸಿದರು. ಹೀಗೆ ಬಾರ್ನಬನೂ ಅವರ ಕಪಟದ ಸೆಳವಿಗೆ ಬಿದ್ದನು. 14 ಅವರು ಸುವಾರ್ತೆಯ ಸತ್ಯಾರ್ಥದ ಪ್ರಕಾರ ಸರಿಯಾಗಿ ನಡೆಯುತ್ತಿಲ್ಲವೆಂಬುದನ್ನು ನಾನು ಕಂಡಾಗ ಎಲ್ಲರ ಮುಂದೆ ಕೇಫನಿಗೆ ಹೇಳಿದ್ದೇನಂದರೆ, “ನೀನು ಯೆಹೂದ್ಯನಾಗಿದ್ದು ವ. 12 ನೋಡಿರಿಯೆಹೂದ್ಯರಂತೆ ನಡೆಯದೆ ಅನ್ಯಜನರಂತೆ ಬದುಕಿ, ಅನ್ಯಜನರಿಗೆ, ನೀವು ಯೆಹೂದ್ಯರಂತೆ ನಡೆದುಕೊಳ್ಳಬೇಕೆಂದು ಒತ್ತಾಯಪಡಿಸಿ ಹೇಳುವುದಾದರೂ ಹೇಗೆ?”
ಯೆಹೂದ್ಯರಂತೆ ಅನ್ಯಜನರು ಸಹ ನಂಬಿಕೆಯಿಂದ ರಕ್ಷಣೆಹೊಂದಿದ್ದಾರೆ
15 ನಾವಂತೂ ಜನ್ಮತ ಯೆಹೂದ್ಯರು “ಪಾಪಿಗಳೆನಿಸಿಕೊಂಡ ಅನ್ಯಜನರಲ್ಲ.” 16 ಯಾವನಾದರೂ §ರೋಮಾ. 9:30ಯೇಸು ಕ್ರಿಸ್ತನ ಮೇಲೆ ನಂಬಿಕೆ ಇಡುವುದರಿಂದಲೇ ಹೊರತು ಧರ್ಮಶಾಸ್ತ್ರದ *ಗಲಾ. 3:11, ಅ. ಕೃ. 13:39ನೇಮನಿಷ್ಠೆಗಳನ್ನು ಅನುಸರಿಸುವುದರಿಂದ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲವೆಂಬುದು ನಮಗೆ ತಿಳಿದಿರುವುದರಿಂದ ನಾವು ಸಹ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಬಿಟ್ಟು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಟ್ಟೆವು. ಏಕೆಂದರೆ ಕೀರ್ತ 143:2, ರೋಮಾ. 3:20ಯಾರೂ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನನುಸರಿಸಿ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲ. 17 ಆದರೆ ನಾವು ಕ್ರಿಸ್ತನ ಮೂಲಕ ನೀತಿವಂತರೆಂಬ ನಿರ್ಣಯ ಹೊಂದುವುದಕ್ಕೆ ಪ್ರಯತ್ನಿಸುತ್ತಿರುವಾಗ, ನಾವೂ ಪಾಪಿಗಳಾಗಿ ತೋರಿಬಂದರೆ ಕ್ರಿಸ್ತನು ಪಾಪಕ್ಕೆ ಸಹಾಯಕನಾಗಿರುವನೋ? ಎಂದಿಗೂ ಇಲ್ಲ. 18 ನಾನು ಕೆಡವಿದ್ದನ್ನೇ ತಿರುಗಿ ಕಟ್ಟಿದರೆ ನನ್ನನ್ನು ನಾನೇ ಅಪರಾಧಿ ಎಂದು ತೋರಿಸಿಕೊಳ್ಳುತ್ತೇನಲ್ಲಾ. 19 ನಾನಂತೂ ದೇವರಿಗಾಗಿ ಜೀವಿಸುವುದಕ್ಕೋಸ್ಕರ ಧರ್ಮಶಾಸ್ತ್ರದ ಮೂಲಕವಾಗಿ ಧರ್ಮಶಾಸ್ತ್ರದ ಪಾಲಿಗೆ ಸತ್ತವನಾಗಿದ್ದೇನೆ. 20 ನಾನು ಸಹ ಗಲಾ. 5:24, 6:14, ರೋಮಾ. 6:6ಕ್ರಿಸ್ತನೊಂದಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ, ಇನ್ನು ಜೀವಿಸುವವನು ನಾನಲ್ಲ, §ಯೋಹಾ 17:23ಕ್ರಿಸ್ತನು ನನ್ನಲ್ಲಿ ಜೀವಿಸುತ್ತಾನೆ. ಈಗ ಶರೀರದಲ್ಲಿರುವ ನಾನು ಜೀವಿಸುವುದು ಹೇಗೆಂದರೆ ದೇವಕುಮಾರನ ಮೇಲಣ ನಂಬಿಕೆಯಿಂದಲೇ. *ರೋಮಾ. 8:37ಆತನು ನನ್ನನ್ನು ಪ್ರೀತಿಸಿ ನನಗಾಗಿ ತನ್ನನ್ನು ಒಪ್ಪಿಸಿಕೊಟ್ಟನು. 21 ನಾನು ದೇವರ ಕೃಪೆಯನ್ನು ತಿರಸ್ಕರಿಸುವುದಿಲ್ಲ. ಗಲಾ. 3:21, ಇಬ್ರಿ. 7:11ಧರ್ಮಶಾಸ್ತ್ರದ ಮೂಲಕ ನೀತಿವಂತರಾಗಬಹುದಾದರೆ ಕ್ರಿಸ್ತನು ಮರಣಕ್ಕೀಡಾದುದು ನಿರರ್ಥಕವೇ ಸರಿ.

*2:1 ಅ. ಕೃ. 15:2

2:2 1 ತಿಮೊ. 3:16

2:2 ಗಲಾ. 2:6-9

§2:2 ಮೂಲ: ಓಡುತ್ತಿರುವುದು ಅಥವಾ ಓಡಿದ್ದು.

*2:3 ಅ. ಕೃ. 16:3 ಹೋಲಿಸಿ

2:4 ಅ. ಕೃ. 15:24, 2 ಕೊರಿ 11:26

2:4 ಗಲಾ. 4:3,9; 9:24-25, 2 ಕೊರಿ 11:20, ರೋಮಾ. 8:15

§2:4 ಗಲಾ. 5:1

*2:6 ವ. 29 ನೋಡಿರಿ

2:6 ಧರ್ಮೋ 10:17, ರೋಮಾ. 2:11

2:6 2 ಕೊರಿ 11:5, 12:11

§2:7 ಗಲಾ. 1:16, ಅ. ಕೃ. 9:15, ಥೆಸ. 2:4, 1 ತಿಮೊ. 1:11

*2:9 ಯೆರೆ 1:18, ಪ್ರಕ 3:12

2:9 2 ಪೇತ್ರ. 3:15

2:10 ಅ. ಕೃ. 24:17

§2:11 ಅ. ಕೃ. 15:1,35

*2:12 ಅ. ಕೃ. 11:3, ಲೂಕ 15:2

2:12 ಅ. ಕೃ. 11:2

2:14 ವ. 12 ನೋಡಿರಿ

§2:16 ರೋಮಾ. 9:30

*2:16 ಗಲಾ. 3:11, ಅ. ಕೃ. 13:39

2:16 ಕೀರ್ತ 143:2, ರೋಮಾ. 3:20

2:20 ಗಲಾ. 5:24, 6:14, ರೋಮಾ. 6:6

§2:20 ಯೋಹಾ 17:23

*2:20 ರೋಮಾ. 8:37

2:21 ಗಲಾ. 3:21, ಇಬ್ರಿ. 7:11