25
ಬಿಲ್ದದನು ಯೋಬನಿಗೆ ನೀಡಿದ ಮೂರನೆಯ ಪ್ರತ್ಯುತ್ತರ
1 ಆ ಮೇಲೆ ಶೂಹ್ಯನಾದ ಬಿಲ್ದದನು ಹೀಗೆಂದನು,
2 “ಆತನಲ್ಲಿ ಪ್ರಭುತ್ವವೂ ಭೀಕರತ್ವವೂ ಉಂಟು,
ತನ್ನ ಉನ್ನತ ಲೋಕದಲ್ಲಿ ಸಮಾಧಾನವನ್ನು ಸ್ಥಾಪಿಸಿದವನು ಆತನೇ.
3 ಆತನ ಸೈನ್ಯಗಳಿಗೆ ಲೆಕ್ಕವಿದೆಯೋ?
ಆತನ ತೇಜಸ್ಸು ಯಾರಲ್ಲಿಯೂ ಮೂಡುವುದಿಲ್ಲ?
4 ಮನುಷ್ಯನು ದೇವರ ಎಣಿಕೆಯಲ್ಲಿ ನೀತಿವಂತನಾಗಿರುವುದು ಹೇಗೆ?
ಮಾನವನಾಗಿ ಹುಟ್ಟಿದವನು ಪರಿಶುದ್ಧನಾಗಿರುವುದು ಸಾಧ್ಯವೋ?
5 ನೋಡಿರಿ, ಆತನ ದೃಷ್ಟಿಯಲ್ಲಿ ಚಂದ್ರನಿಗಾದರೂ ಕಳೆಯಿಲ್ಲ,
ನಕ್ಷತ್ರಗಳೂ ಶುದ್ಧವಲ್ಲ.
6 ಹೀಗಿರುವಲ್ಲಿ ನರಹುಳವು ಅಶುದ್ಧವಾದದ್ದು!
ನರಕ್ರಿಮಿಯು ಎಷ್ಟೋ ಅಪವಿತ್ರವಾಗಿದ್ದಾನೆ!”