27
ಬೆಳಗಾಗಲು ಎಲ್ಲಾ ಮುಖ್ಯಯಾಜಕರೂ, ಜನರ ಹಿರಿಯರೂ ಯೇಸುವನ್ನು ಕೊಲ್ಲಿಸಬೇಕೆಂದು ಸಂಚುಮಾಡಿಕೊಂಡು, ಆತನನ್ನು ಕಟ್ಟಿಸಿ ಕರೆದುಕೊಂಡು ಹೋಗಿ ದೇಶಾಧಿಪತಿಯಾದ ಪಿಲಾತನಿಗೆ ಒಪ್ಪಿಸಿದರು.
ಯೂದನು ಪಶ್ಚಾತ್ತಾಪಪಟ್ಟು ಆತ್ಮಹತ್ಯೆ ಮಾಡಿಕೊಂಡದ್ದು
ಆಗ ಆತನನ್ನು ದ್ರೋಹದಿಂದ ಹಿಡಿದುಕೊಟ್ಟಿದ್ದ *ಮತ್ತಾ 26:14-15ಯೂದನು ಯೇಸುವಿಗೆ ಮರಣದಂಡನೆಯ ತೀರ್ಪು ಆಗಿರುವುದನ್ನು ನೋಡಿ, ಪಶ್ಚಾತ್ತಾಪಪಟ್ಟು, ಆ ಮೂವತ್ತು ಬೆಳ್ಳಿ ನಾಣ್ಯಗಳನ್ನು ಮುಖ್ಯಯಾಜಕರಿಗೂ ಹಿರಿಯರಿಗೂ ಹಿಂದಿರುಗಿಸಿದನು. “ನಿರಪರಾಧಿಯನ್ನು ಮರಣಕ್ಕೆ ಒಪ್ಪಿಸಿಕೊಟ್ಟು ನಾನು ಪಾಪ ಮಾಡಿದ್ದೇನೆ” ಅಂದನು. ಅದಕ್ಕವರು, “ಅದು ನಮಗೇನು? ನೀನೇ ನೋಡಿಕೋ” ಅಂದರು. ಆಗ ಅವನು ದೇವಾಲಯದಲ್ಲಿ ಆ ಹಣವನ್ನು ಎಸೆದು ಹೊರಟುಹೋಗಿ ನೇಣು ಹಾಕಿಕೊಂಡು ಸತ್ತನು. ಮುಖ್ಯಯಾಜಕರು ಆ ಹಣವನ್ನು ತೆಗೆದುಕೊಂಡು “ಇದು ಜೀವಹತ್ಯೆಗೆ ಕೊಟ್ಟ ಕ್ರಯವಾದುದರಿಂದ ಇದನ್ನು ಕಾಣಿಕೆ ಪೆಟ್ಟಿಗೆಯಲ್ಲಿ ಹಾಕಬಾರದು” ಎಂದರು. ಬಳಿಕ ಆಲೋಚನೆಮಾಡಿ ಅ. ಕೃ. 1:18,19ಪರದೇಶಿಗಳನ್ನು ಹೂಣಿಡುವುದಕ್ಕೋಸ್ಕರ ಅದರಿಂದ ಕುಂಬಾರನ ಹೊಲವೆಂಬ ಭೂಮಿಯನ್ನು ಕೊಂಡುಕೊಂಡರು. ಈ ಕಾರಣದಿಂದ ಇಂದಿನವರೆಗೂ ಆ ಹೊಲಕ್ಕೆ “ಜೀವಹತ್ಯದರಕ್ತದ ಹೊಲವೆಂದು ಹೊಲವೆಂಬ” ಹೆಸರು ಇದೆ. ಅದೇನೆಂದರೆ, §ಜೆಕ. 11:12,13“ಇಸ್ರಾಯೇಲ್ ಜನರಿಂದ ಅವನಿಗೆ ನಿರ್ಣಯಿಸಿದಂಥ ಕ್ರಯವಾದ ಆ ಮೂವತ್ತು ಬೆಳ್ಳಿ ನಾಣ್ಯಗಳನ್ನು ತೆಗೆದುಕೊಂಡು, ಕರ್ತನು ನನಗೆ ಅಪ್ಪಣೆಮಾಡಿದಂತೆ 10 ಅವರು ಅದನ್ನು ಕುಂಬಾರನ ಹೊಲಕ್ಕಾಗಿ ಕೊಟ್ಟರು.” ಹೀಗೆ ಪ್ರವಾದಿಯಾದ ಯೆರೆಮೀಯನು ಹೇಳಿದ ಮಾತು ನೆರವೇರಿತು.
ಪಿಲಾತನು ಯೇಸುವನ್ನು ಮರಣದಂಡನೆಗೆ ಒಪ್ಪಿಸಿದ್ದು
ಮಾರ್ಕ 15:2-15; ಲೂಕ 23:2,3,13-25; ಯೋಹಾ 18:29-40; 19:16
11 ಯೇಸು ದೇಶಾಧಿಪತಿಯ ಮುಂದೆ ನಿಂತಿರುವಾಗ ದೇಶಾಧಿಪತಿಯು ಆತನನ್ನು, “ನೀನು ಯೆಹೂದ್ಯರ ಅರಸನೋ?” ಎಂದು ಕೇಳಿದನು. ಯೇಸು, “ನೀನೇ ಹೇಳಿದ್ದೀ” ಅಂದನು. 12 ಮತ್ತು ಮುಖ್ಯಯಾಜಕರೂ ಹಿರಿಯರೂ ಆತನ ಮೇಲೆ ದೂರುಹೇಳುತ್ತಿರುವಾಗ ಆತನು ಏನೂ ಉತ್ತರ ಕೊಡಲಿಲ್ಲ, 13 ನಂತರ ಪಿಲಾತನು ಆತನನ್ನು, “ನಿನ್ನ ವಿರುದ್ಧ ಇಷ್ಟು ಸಾಕ್ಷಿ ಹೇಳುತ್ತಿದ್ದಾರೆ, ನಿನಗೆ ಕೇಳಿಸುತ್ತಿಲ್ಲವೋ?” ಎಂದು ಕೇಳಿದನು. 14 ಆತನು ಅವನ ಯಾವ ಮಾತುಗಳಿಗೂ ಉತ್ತರಕೊಡಲಿಲ್ಲ. ಅದನ್ನು ನೋಡಿ ದೇಶಾಧಿಪತಿಯು ತುಂಬಾ ಆಶ್ಚರ್ಯಪಟ್ಟನು. 15 ಆದರೆ ಆ ಹಬ್ಬದಲ್ಲಿ ಜನರು ಅಪೇಕ್ಷಿಸುವ ಸೆರೆಯವನನ್ನು ಅವರಿಗೆ ಬಿಟ್ಟುಕೊಡುವುದು ದೇಶಾಧಿಪತಿಯ ಪದ್ಧತಿಯಾಗಿತ್ತು. 16 ಆ ಕಾಲದಲ್ಲಿ ಬರಬ್ಬನೆಂಬ ಕುಖ್ಯಾತನಾದ ಒಬ್ಬ ಸೆರೆಯವನಿದ್ದನು. 17 ಹೀಗಿರಲಾಗಿ ಅವರು ಸೇರಿಬಂದಿದ್ದ ಸಮಯದಲ್ಲಿ ಪಿಲಾತನು, “ನಿಮಗೆ ಯಾರನ್ನು ಬಿಟ್ಟುಕೊಡಬೇಕೆನ್ನುತ್ತೀರಿ? ಬರಬ್ಬನನ್ನೋ ಅಥವಾ ಕ್ರಿಸ್ತನೆನ್ನಿಸಿಕೊಳ್ಳುವ ಯೇಸುವನ್ನೋ?” ಎಂದು ಅವರನ್ನು ಕೇಳಿದನು. 18 ಏಕೆಂದರೆ ಅವರು ಹೊಟ್ಟೆಕಿಚ್ಚಿನಿಂದಲೇ ಈ ರೀತಿಯಾಗಿ ಮಾಡಿದ್ದಾರೆಂದು ಅವನಿಗೆ ತಿಳಿದಿತ್ತು. 19 ಇದಲ್ಲದೆ ಅವನು ನ್ಯಾಯಾಸನದಲ್ಲಿ ಕುಳಿತಿರುವಾಗ ಅವನ ಹೆಂಡತಿಯು, “ನೀನು ಆ ನೀತಿವಂತನ ಗೊಡವೆಗೆ ಹೋಗಬೇಡ; ಅವನ ದೆಸೆಯಿಂದ ಈ ಹೊತ್ತು ಕನಸಿನಲ್ಲಿ ಬಹಳ ತೊಂದರೆ ಪಟ್ಟೆನು” ಎಂದು ಅವನ ಬಳಿಗೆ ಸಂದೇಶ ಹೇಳಿಕಳುಹಿಸಿದಳು. 20 ಆದರೆ ಮುಖ್ಯಯಾಜಕರೂ ಹಿರಿಯರೂ ಬರಬ್ಬನನ್ನು ಬಿಟ್ಟುಕೊಡಬೇಕೆಂದು ಬೇಡಿಕೊಳ್ಳುವಂತೆಯೂ ಯೇಸುವನ್ನು ಸಾಯಿಸಬೇಕೆಂದು ಕೇಳುವ ಹಾಗೆಯೂ ಜನರನ್ನು ಒಡಂಬಡಿಸಿದ್ದರು. 21 ಅದಕ್ಕೆ ದೇಶಾಧಿಪತಿಯು ಅವರನ್ನು, “ಈ ಇಬ್ಬರಲ್ಲಿ ಯಾರನ್ನು ನಿಮಗೆ ಬಿಟ್ಟುಕೊಡಬೇಕನ್ನುತ್ತೀರಿ?” ಎಂದು ಕೇಳಲು ಅವರು “ಬರಬ್ಬನನ್ನು” ಅಂದರು. 22 ಪಿಲಾತನು ಅವರನ್ನು, “ಹಾಗಾದರೆ ಕ್ರಿಸ್ತನೆನ್ನಿಸಿಕೊಳ್ಳುವ ಯೇಸುವನ್ನು ನಾನೇನು ಮಾಡಲಿ?” ಎಂದು ಕೇಳಲು ಎಲ್ಲರೂ, “ಅವನನ್ನು ಶಿಲುಬೆಗೆ ಹಾಕಿಸು” ಅಂದರು. 23 ಅದಕ್ಕವನು “ಏಕೆ? ಈತನು ಮಾಡಿದ ಅಪರಾಧವೇನು?” ಅಂದನು. ಆದರೆ ಅವರು, “ಅವನನ್ನು ಶಿಲುಬೆಗೆ ಹಾಕಿಸು” ಎಂದು ಬಹಳವಾಗಿ ಆರ್ಭಟಿಸಿದರು. 24 ಆಗ ಪಿಲಾತನು ತನ್ನ ಯತ್ನ ನಡೆಯುವುದಿಲ್ಲ *ಮತ್ತಾ 26:5ಗದ್ದಲ ಮಾತ್ರ ಹೆಚ್ಚಾಗುತ್ತದೆ ಎಂದು ತಿಳಿದು ಧರ್ಮೋ 21:6-8ನೀರನ್ನು ತೆಗೆದುಕೊಂಡು ಜನರ ಮುಂದೆ ಕೈ ತೊಳೆದುಕೊಂಡು, “ಈ ನೀತಿವಂತನನ್ನು ರಕ್ತದಲ್ಲಿಕೊಲ್ಲಿಸುವುದರಲ್ಲಿ ನಾನು ನಿರಪರಾಧಿ, ನೀವೇ ನೋಡಿಕೊಳ್ಳಿರಿ” ಎನ್ನಲು 25 ಜನರೆಲ್ಲಾ, “§ಆತನನ್ನು ಕೊಲ್ಲಿಸಿದ್ದ ಅಪರಾಧವುಆತನ ರಕ್ತವು ನಮ್ಮ ಮತ್ತು ನಮ್ಮ ಮಕ್ಕಳ ಮೇಲೆ ಬರಲಿ” ಅಂದರು. 26 ಆಗ ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡಿಸಿ ಶಿಲುಬೆಗೆ ಹಾಕುವುದಕ್ಕೆ ಒಪ್ಪಿಸಿದನು.
ಯೇಸುವನ್ನು ಅಪಹಾಸ್ಯ ಮಾಡಿ ಶಿಲುಬೆಗೆ ಹಾಕಿದ್ದು
ಮಾರ್ಕ 15:16-41; ಲೂಕ 23:26,33-49; ಯೋಹಾ 19:2-3,16-30
27 ಆ ಮೇಲೆ ದೇಶಾಧಿಪತಿಯ ಸಿಪಾಯಿಗಳು ಯೇಸುವನ್ನು ಅರಮನೆಯೊಳಗೆ ಕರೆದುಕೊಂಡು ಹೋಗಿ ಪಟಾಲವನ್ನೆಲ್ಲಾ ಆತನ ಸುತ್ತಲೂ ಸೇರಿಸಿಕೊಂಡು, 28 ಆತನ ಬಟ್ಟೆಗಳನ್ನು ತೆಗೆದುಹಾಕಿ ಕೆಂಪು ನಿಲುವಂಗಿಯನ್ನು ಹೊದಿಸಿ, 29 ಮುಳ್ಳುಬಳ್ಳಿಯಿಂದ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟ್ಟು ಬಲಗೈಯಲ್ಲಿ ಬೆತ್ತವನ್ನು ಕೊಟ್ಟು, ಆತನ ಮುಂದೆ ಮೊಣಕಾಲೂರಿ, “ಯೆಹೂದ್ಯರ ಅರಸನೇ, ನಿನಗೆ ನಮಸ್ಕಾರ” ಎಂದು ಆತನನ್ನು ಪರಿಹಾಸ್ಯಮಾಡಿ 30 ಮತ್ತು ಆತನ ಮೇಲೆ ಉಗುಳಿ ಆ ಬೆತ್ತವನ್ನು ತೆಗೆದುಕೊಂಡು ಆತನ ತಲೆಯ ಮೇಲೆ ಹೊಡೆದರು. 31 ಹೀಗೆ ಆತನನ್ನು ಪರಿಹಾಸ್ಯಮಾಡಿದ ಮೇಲೆ ಆ ನಿಲುವಂಗಿಯನ್ನು ತೆಗೆದು ಆತನ ಬಟ್ಟೆಗಳನ್ನು ಹೊದಿಸಿ ಆತನನ್ನು ಶಿಲುಬೆಗೆ ಹಾಕುವುದಕ್ಕೆ ತೆಗೆದುಕೊಂಡು ಹೋದರು.
ಗೊಲ್ಗೊಥಾಕ್ಕೆ ಪ್ರಯಾಣ
32 ಅವರು ಹೊರಕ್ಕೆ ಹೋಗುತ್ತಿರುವಾಗ ಕುರೇನೆ ಪಟ್ಟಣದ ಸೀಮೋನನೆಂಬುವನನ್ನು ಕಂಡು ಅವನನ್ನು ಬಲವಂತವಾಗಿ ಆತನ ಶಿಲುಬೆಯನ್ನು ಹೊರುವುದಕ್ಕೆ ಕರೆದುಕೊಂಡರು. 33 ಅವರೆಲ್ಲರೂ ಗೊಲ್ಗೊಥಾ ಅಂದರೆ “ಕಪಾಲಸ್ಥಳ” ಎಂಬ ಸ್ಥಾನಕ್ಕೆ ಬಂದಾಗ 34 *ಕೀರ್ತ 69:21ಆತನಿಗೆ ಕಹಿ ಬೆರಸಿದ ದ್ರಾಕ್ಷಾರಸವನ್ನು ಕುಡಿಯುವುದಕ್ಕೆ ಕೊಟ್ಟರು; ಆತನು ಅದನ್ನು ರುಚಿ ನೋಡಿ ಕುಡಿಯಲಾರದೆ ಇದ್ದನು. 35 ಬಳಿಕ ಅವರು ಆತನನ್ನು ಶಿಲುಬೆಗೆ ಹಾಕಿ ಆತನ ಬಟ್ಟೆಗಳಿಗಾಗಿ ಚೀಟು ಹಾಕಿ ಪಾಲುಮಾಡಿಕೊಂಡರು; 36 ಮತ್ತು ಅಲ್ಲಿ ಕುಳಿತುಕೊಂಡು ಆತನನ್ನು ಕಾಯುತ್ತಾ ಇದ್ದರು. 37 ಇದಲ್ಲದೆ ಆತನ ಮೇಲೆ ಹೊರಿಸಿದ ಅಪರಾಧವನ್ನು ಬರೆದು ಆತನ ತಲೆಯ ಮೇಲ್ಗಡೆ ಹಚ್ಚಿದರು; ಅದೇನೆಂದರೆ, “ಈತನು ಯೇಸು, ಯೆಹೂದ್ಯರ ಅರಸನು” ಎಂಬುದೇ. 38 ಆಗ ಇಬ್ಬರು ಕಳ್ಳರನ್ನು ತಂದು ಒಬ್ಬನನ್ನು ಬಲಗಡೆಯಲ್ಲಿ ಮತ್ತೊಬ್ಬನನ್ನು ಎಡಗಡೆಯಲ್ಲಿ ಆತನ ಸಂಗಡ ಶಿಲುಬೆಗೆ ಹಾಕಿದರು. 39 ಅಲ್ಲಿ ಹಾದುಹೋಗುತ್ತಿರುವವರು ತಲೆ ಅಲ್ಲಾಡಿಸಿ, 40 “ದೇವಾಲಯವನ್ನು ಕೆಡವಿ ಮೂರು ದಿನದಲ್ಲಿ ಕಟ್ಟುವವನೇ, ನಿನ್ನನ್ನು ರಕ್ಷಿಸಿಕೊ; ನೀನು ದೇವರ ಮಗನೇ ಆಗಿದ್ದರೆ ಶಿಲುಬೆಯಿಂದ ಇಳಿದು ಬಾ” ಎಂದು ಆತನನ್ನು ಹಂಗಿಸುತ್ತಿದ್ದರು. 41 ಅದೇ ರೀತಿ ಮುಖ್ಯಯಾಜಕರೂ, ಶಾಸ್ತ್ರಿಗಳೂ, ಹಿರಿಯರೂ, “ಅವನು ಮತ್ತೊಬ್ಬರನ್ನು ರಕ್ಷಿಸಿದನು, ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು. 42 ಅವನು ಇಸ್ರಾಯೇಲಿನ ಅರಸನಲ್ಲವೇ. ಈಗ ಶಿಲುಬೆಯಿಂದ ಇಳಿದು ಬರಲಿ, ಇಳಿದು ಬಂದರೆ ಅವನಲ್ಲಿ ನಂಬಿಕೆಯಿಡುತ್ತೇವೆ ಅಂದರು. 43 ಅವನು ಕೀರ್ತ 22:8ದೇವರಲ್ಲಿ ಭರವಸವಿಟ್ಟಿದ್ದಾನೆ, ದೇವರಿಗೆ ಇಷ್ಟವಿದ್ದರೆ ಈಗ ಅವನನ್ನು ಬಿಡಿಸಲಿ; ‘ತಾನು ದೇವರ ಮಗನಾಗಿದ್ದೇನೆಂದು ಹೇಳಿದನಲ್ಲಾ’ ” ಎಂದು ಅಣಕಿಸಿ ಮಾತನಾಡುತ್ತಿದ್ದರು. 44 ಆತನ ಸಂಗಡ ಶಿಲುಬೆಗೆ ಹಾಕಲ್ಪಟ್ಟ ಕಳ್ಳರು ಸಹ ಆತನನ್ನು ಅದೇ ಪ್ರಕಾರ ನಿಂದಿಸುತ್ತಿದ್ದರು.
ಯೇಸುವಿನ ಮರಣ
45 6 ತಾಸಿನಿಂದ 9 ತಾಸಿನ ತನಕಮಧ್ಯಾಹ್ನ ಹನ್ನೆರಡು ಘಂಟೆಯಿಂದ ಮೂರು ಘಂಟೆಯ ವರೆಗೆ ಆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು. 46 ಸುಮಾರು ಮೂರು ಘಂಟೆಗೆ ಯೇಸು, §ಕೀರ್ತ 22:1“ಏಲೀ, ಏಲೀ, ಲಮಾ ಸಬಕ್ತಾನೀ” ಅಂದರೆ, “ನನ್ನ ದೇವರೇ, ನನ್ನ ದೇವರೇ, ಏಕೆ ನನ್ನನ್ನು ಕೈಬಿಟ್ಟಿದ್ದೀ” ಎಂದು ಮಹಾ ಧ್ವನಿಯಿಂದ ಕೂಗಿದನು. 47 ಅಲ್ಲಿ ನಿಂತಿದ್ದವರಲ್ಲಿ ಕೆಲವರು ಅದನ್ನು ಕೇಳಿ, “ಇವನು ಎಲೀಯನನ್ನು ಕರೆಯುತ್ತಿದ್ದಾನೆ” ಅಂದನು. 48 ಕೂಡಲೆ ಅವರಲ್ಲಿ ಒಬ್ಬನು ಓಡಿಹೋಗಿ ಸ್ಪಂಜನ್ನು ತಂದು ಹುಳಿರಸದಿಂದ ತುಂಬಿಸಿ ಕೋಲಿಗೆ ಸಿಕ್ಕಿಸಿ ಆತನಿಗೆ ಕುಡಿಯುವುದಕ್ಕೆ ಕೊಟ್ಟನು. 49 ಮಿಕ್ಕಾದವರು, “ಬಿಡು, ಎಲೀಯನು ಬಂದು ಅವನನ್ನು ರಕ್ಷಿಸುವನೇನೋ ನೋಡೋಣ” ಅಂದರು*ಕೆಲವು ಪತ್ರಿಕೆಯಲ್ಲಿ, ಮತ್ತೊಬ್ಬನು ಈಟಿಯನ್ನು ತೆಗೆದುಕೊಂಡು ಆತನ ಪಕ್ಕೆಯನ್ನು ತಿವಿದನು; ತಿವಿಯಲೂ ನೀರು ರಕ್ತವು ಹರಿಯಿತು ಎಂದು ಬರೆದಿದೆ; ಯೋಹಾ 19:34. 50 ಅನಂತರ ಯೇಸು ತಿರುಗಿ ಮಹಾ ಧ್ವನಿಯಿಂದ ಕೂಗಿ ಪ್ರಾಣಬಿಟ್ಟನು. 51 ಆಗ ಇಗೋ, ದೇವಾಲಯದ ಪರದೆಯು ಮೇಲಿಂದ ಕೆಳಗಿನವರೆಗೂ ಹರಿದು ಎರಡು ಭಾಗವಾಯಿತು; ಭೂಮಿಯು ನಡುಗಿತು; 52 ಬಂಡೆಗಳು ಸೀಳಿಹೋದವು; ಸಮಾಧಿಗಳು ತೆರೆದವು; ನಿದ್ರೆಹೋಗಿದ್ದಸತ್ತುಹೋಗಿದ್ದ ಅನೇಕ ಭಕ್ತರ ದೇಹಗಳು ಜೀವದಿಂದ ಎದ್ದವು; 53 ಮತ್ತು ಆತನ ಪುನರುತ್ಥಾನವಾದ ಮೇಲೆ ಸಮಾಧಿಗಳೊಳಗಿಂದ ಹೊರಗೆ ಬಂದು ಪರಿಶುದ್ಧ ಪಟ್ಟಣದೊಳಗೆ ಹೋಗಿ ಅನೇಕರಿಗೆ ಕಾಣಿಸಿಕೊಂಡರು. 54 ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ, ನಡೆದ ಸಂಗತಿಗಳನ್ನೂ ನೋಡಿ ಬಹಳ ಹೆದರಿಕೊಂಡು, “ನಿಜವಾಗಿ ಈತನು ದಾನಿ. 3:25ದೇವಕುಮಾರನಾಗಿದ್ದನು” ಅಂದರು. 55 ಇದಲ್ಲದೆ ಅನೇಕ ಸ್ತ್ರೀಯರು ಅಲ್ಲಿ ಇದ್ದು ದೂರದಿಂದ ಇದನ್ನು ನೋಡುತ್ತಿದ್ದರು. ಇವರು ಯೇಸುವಿನ ಸೇವೆಮಾಡುತ್ತಾ ಗಲಿಲಾಯದಿಂದ ಆತನ ಹಿಂದೆ ಬಂದವರಾಗಿದ್ದರು. 56 ಇವರಲ್ಲಿ ಮಗ್ದಲದ ಮರಿಯಳೂ ಯಾಕೋಬ ಯೋಸೆಯರ ತಾಯಿಯಾದ ಮರಿಯಳೂ ಜೆಬೆದಾಯನ ಮಕ್ಕಳ ತಾಯಿಯೂ ಇದ್ದರು.
ಶಿಷ್ಯರು ಯೇಸುವಿನ ದೇಹವನ್ನು ಸಮಾಧಿಯಲ್ಲಿ ಇರಿಸಿದ್ದು
ಮಾರ್ಕ 15:42-47; ಲೂಕ 23:50-56; ಯೋಹಾ 19:38-42
57 ಸಂಜೆಯಾದಾಗ ಅರಿಮಥಾಯ ಊರಿನ ಯೋಸೇಫನೆಂಬ ಒಬ್ಬ ಧನವಂತನು ಅಲ್ಲಿಗೆ ಬಂದನು. ಇವನು ಸಹ ಯೇಸುವಿನ ಶಿಷ್ಯನಾಗಿದ್ದನು. 58 ಇವನು ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹವನ್ನು ತನಗೆ ಕೊಡಿಸಬೇಕೆಂದು ಬೇಡಿಕೊಳ್ಳಲು ಪಿಲಾತನು ಅದನ್ನು ಆತನಿಗೆ ಕೊಡಬೇಕೆಂದು ಅಪ್ಪಣೆಮಾಡಿದನು. 59 ಯೋಸೇಫನು ದೇಹವನ್ನು ತೆಗೆದುಕೊಂಡು ಅದನ್ನು ಶುದ್ಧವಾದ ನಾರುಮಡಿಯಲ್ಲಿ ಸುತ್ತಿ 60 ಬಂಡೆಯಲ್ಲಿ ತೋಡಿದ್ದ ಹೊಸ ಸಮಾಧಿಯಲ್ಲಿ ಇಟ್ಟು ಸಮಾಧಿಯ ಬಾಗಿಲಿಗೆ ದೊಡ್ಡ ಕಲ್ಲನ್ನು ಉರುಳಿಸಿ ಹೊರಟುಹೋದನು. 61 ಮಗ್ದಲದ ಮರಿಯಳೂ ಮತ್ತು ಆ ಇನ್ನೊಬ್ಬ ಮರಿಯಳೂ ಅಲ್ಲಿ ಸಮಾಧಿಗೆ ಎದುರಾಗಿ ಕುಳಿತಿದ್ದರು.
62 ಮರುದಿನ ಅಂದರೆ ಸಿದ್ಧತೆಯ ದಿನ ಕಳೆದ ಮೇಲೆ ಮುಖ್ಯಯಾಜಕರೂ ಫರಿಸಾಯರೂ ಪಿಲಾತನ ಬಳಿಗೆ ಸೇರಿಬಂದು, 63 “ಯಜಮಾನನೇ, ಆ ಮೋಸಗಾರನು ಬದುಕಿದ್ದಾಗ ‘ತಾನು ಮೂರು ದಿನದ ಮೇಲೆ ಜೀವದಿಂದ ಏಳುತ್ತೇನೆ’ ಎಂದು ಹೇಳಿದ್ದು ನಮ್ಮ ನೆನಪಿಗೆ ಬಂದಿತು; 64 ಆದಕಾರಣ ಮೂರನೆಯ ದಿನದ ತನಕ ಸಮಾಧಿಯನ್ನು ಭದ್ರಮಾಡಿ ಕಾಯುವುದಕ್ಕೆ ಅಪ್ಪಣೆಕೊಡಬೇಕು; ಇಲ್ಲದಿದ್ದರೆ ಅವನ ಶಿಷ್ಯರು ಬಂದು ಅವನನ್ನು ಕದ್ದುಕೊಂಡು ಹೋಗಿ ಸತ್ತವನು ಬದುಕಿ ಬಂದಿದ್ದಾನೆ” ಎಂದು ಹೇಳಾರು; ಆಗ ಮೊದಲನೆಯ ವಂಚನೆಗಿಂತ ಕಡೆಯ ವಂಚನೆಯು ಕೆಡುಕಾದೀತು ಅಂದರು. 65 ಪಿಲಾತನು ಅವರಿಗೆ, “ಕಾವಲುಗಾರರನ್ನು ಕರೆದುಕೊಂಡು ಹೋಗಿ ನಿಮಗೆ ತಿಳಿದ ಹಾಗೆ ಭದ್ರಮಾಡಿ ಕಾಯಿರಿ” ಎಂದು ಹೇಳಲು 66 ಅವರು ಹೊರಟು ಕಾವಲುಗಾರರನ್ನು ಇರಿಸಿ ಆ ಕಲ್ಲಿಗೆ ಮುದ್ರೆಹಾಕಿ ಸಮಾಧಿಯನ್ನು ಸುಭದ್ರಮಾಡಿದರು.

*27:3 ಮತ್ತಾ 26:14-15

27:7 ಅ. ಕೃ. 1:18,19

27:8 ರಕ್ತದ ಹೊಲವೆಂದು

§27:9 ಜೆಕ. 11:12,13

*27:24 ಮತ್ತಾ 26:5

27:24 ಧರ್ಮೋ 21:6-8

27:24 ರಕ್ತದಲ್ಲಿ

§27:25 ಆತನನ್ನು ಕೊಲ್ಲಿಸಿದ್ದ ಅಪರಾಧವು

*27:34 ಕೀರ್ತ 69:21

27:43 ಕೀರ್ತ 22:8

27:45 6 ತಾಸಿನಿಂದ 9 ತಾಸಿನ ತನಕ

§27:46 ಕೀರ್ತ 22:1

*27:49 ಕೆಲವು ಪತ್ರಿಕೆಯಲ್ಲಿ, ಮತ್ತೊಬ್ಬನು ಈಟಿಯನ್ನು ತೆಗೆದುಕೊಂಡು ಆತನ ಪಕ್ಕೆಯನ್ನು ತಿವಿದನು; ತಿವಿಯಲೂ ನೀರು ರಕ್ತವು ಹರಿಯಿತು ಎಂದು ಬರೆದಿದೆ; ಯೋಹಾ 19:34

27:52 ಸತ್ತುಹೋಗಿದ್ದ

27:54 ದಾನಿ. 3:25