13
ಯುಗದ ಸಮಾಪ್ತಿಯ ಗುರುತುಗಳು
ಮತ್ತಾ 24; ಲೂಕ 21:5-36
1 ಯೇಸು ದೇವಾಲಯದಿಂದ ಹೊರಗೆ ಹೋಗುತ್ತಿದ್ದಾಗ ಆತನ ಶಿಷ್ಯರಲ್ಲಿ ಒಬ್ಬನು ಆತನಿಗೆ, “ಗುರುವೇ, ನೋಡು, ಎಂಥಾ *ಭಾರಿ, ಅಥವಾ ದೊಡ್ಡ. ಅದ್ಭುತವಾದ ಕಲ್ಲುಗಳು! ಎಂಥಾ ಮಹಾಕಟ್ಟಡಗಳು!” ಎಂದು ಹೇಳಿದನು. 2 ಯೇಸು, “ಈ ದೊಡ್ಡ ಕಟ್ಟಡಗಳನ್ನು ನೋಡುತ್ತೀಯಲ್ಲವೇ? ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯುವುದಿಲ್ಲ; ಎಲ್ಲವೂ ಕೆಡವಲ್ಪಡುವುದು” ಎಂದನು.
3 ಬಳಿಕ ಆತನು †ಆಲಿವ್ ಮರಗಳ ಗುಡ್ಡ. ಎಣ್ಣೆ ಮರಗಳ ಗುಡ್ಡದ ಮೇಲೆ ದೇವಾಲಯಕ್ಕೆ ಎದುರಾಗಿ ಕುಳಿತುಕೊಂಡಿದ್ದಾಗ ಪೇತ್ರ, ಯಾಕೋಬ, ಯೋಹಾನ ಹಾಗೂ ಅಂದ್ರೆಯ, 4 ಇವರು ಪ್ರತ್ಯೇಕವಾಗಿ ಆತನಿಗೆ, “ಇವೆಲ್ಲಾ ಯಾವಾಗ ಆಗುವವು? ಇವೆಲ್ಲವು ನೆರವೇರುವುದಕ್ಕೆ ಸೂಚನೆ ಏನು? ನಮಗೆ ಹೇಳು” ಎಂದು ಆತನನ್ನು ಕೇಳಿದರು. 5 ಯೇಸು ಅವರಿಗೆ ಹೇಳಿದ್ದೇನಂದರೆ, “ಯಾರೂ ನಿಮ್ಮನ್ನು ಮೋಸಗೊಳಿಸದಂತೆ ಎಚ್ಚರಿಕೆಯಾಗಿರಿ. 6 ಅನೇಕರು ಬಂದು ನನ್ನ ಹೆಸರನ್ನು ಹೇಳಿಕೊಂಡು,‡ನಾನೇ ಆತನಾಗಿದ್ದೇನೆ‘ನಾನೇ ಕ್ರಿಸ್ತನು’ ಎಂದು ಹೇಳಿ ಎಷ್ಟೋ ಜನರನ್ನು ಮೋಸಗೊಳಿಸುವರು. 7 ಇದಲ್ಲದೆ ಯುದ್ಧಗಳಾಗುವುದನ್ನೂ, ಯುದ್ಧವಾಗುವ ಹಾಗಿದೆ ಎಂಬ ಸುದ್ದಿಗಳನ್ನೂ ನೀವು ಕೇಳುವಾಗ ಕಳವಳಪಡಬೇಡಿರಿ. ಹಾಗಾಗುವುದು ಅಗತ್ಯ. ಆದರೂ ಇದು ಇನ್ನೂ ಅಂತ್ಯಕಾಲವಲ್ಲ. 8 ಜನಾಂಗಕ್ಕೆ ವಿರೋಧವಾಗಿ ಜನಾಂಗವೂ, ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು. ಮತ್ತು ನಾನಾ ಕಡೆಗಳಲ್ಲಿ ಭೂಕಂಪಗಳೂ, ಬರಗಾಲಗಳೂ, ಉಂಟಾಗುವವು. ಆದರೆ ಇವೆಲ್ಲಾ ಪ್ರಸವ ವೇದನೆಯ ಪ್ರಾರಂಭ ಮಾತ್ರ.
9 “ಆದರೆ ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಜನರು ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಎಳೆದುಕೊಂಡು ಹೋಗುವರು. ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು, ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿಕಾರಿಗಳ ಮತ್ತು ಅರಸುಗಳ ಮುಂದೆ ಅವರಿಗೆ ಸಾಕ್ಷಿಗಳಾಗಿ ನಿಲ್ಲಿಸುವರು, 10 ಆದರೆ ಮೊದಲು ಎಲ್ಲಾ ಜನಾಂಗಗಳಿಗೆ ಸುವಾರ್ತೆಯು ಸಾರಲ್ಪಡಬೇಕು.
11 “ನಿಮ್ಮನ್ನು ಹಿಡಿದುಕೊಂಡು ಹೋಗಿ ಒಪ್ಪಿಸುವಾಗ ಏನು ಹೇಳಬೇಕು ಎಂದು ಮುಂಚಿತವಾಗಿಯೇ ಚಿಂತಿಸಬೇಡಿರಿ, ನೀವು ಏನು ಹೇಳಬೇಕೋ ಅದು ನಿಮಗೆ ಆ ಗಳಿಗೆಯಲ್ಲಿ ಕೊಡಲ್ಪಡುವುದು, ಏಕೆಂದರೆ ಮಾತನಾಡುವವರು ನೀವಲ್ಲ, ಆದರೆ ಪವಿತ್ರಾತ್ಮನೇ ನಿಮ್ಮ ಮೂಲಕವಾಗಿ ಮಾತನಾಡುವನು, 12 ಇದಲ್ಲದೆ ಸಹೋದರನು ಸಹೋದರನನ್ನೂ, ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು. ಮಕ್ಕಳು ಹೆತ್ತವರಿಗೆ ವಿರೋಧವಾಗಿ ಎದ್ದು ಅವರನ್ನು ಕೊಲ್ಲಿಸುವರು, 13 ಮತ್ತು ನನ್ನ ಹೆಸರಿನ ನಿಮಿತ್ತವಾಗಿ ಎಲ್ಲರೂ ನಿಮ್ಮನ್ನು ದ್ವೇಷಿಸುವರು, ಆದರೆ ಕೊನೆಯವರೆಗೂ ತಾಳುವವನೇ ರಕ್ಷಣೆ ಹೊಂದುವನು.”
14 “ಇದಲ್ಲದೆ§ದಾನಿ. 9:27; 12:11:ವಿನಾಶಕಾರಕ ಅಸಹ್ಯ ಮೂರ್ತಿಯು ನಿಲ್ಲಬಾರದ ಸ್ಥಳದಲ್ಲಿ ನಿಂತಿರುವುದನ್ನು ನೀವು ನೋಡುವಾಗ (ಇದನ್ನು ಓದುವವನು ತಿಳಿದುಕೊಳ್ಳಲಿ). ಯೂದಾಯದಲ್ಲಿ ಇರುವವರು ಬೆಟ್ಟಗಳಿಗೆ ಓಡಿಹೋಗಲಿ. 15 ಮಾಳಿಗೆಯ ಮೇಲಿದ್ದವನು ಕೆಳಗೆ ಇಳಿದು ಮನೆಯೊಳಕ್ಕೆ ಹೋಗದಿರಲಿ; ಮನೆಯೊಳಗಿಂದ ಏನನ್ನೂ ತೆಗೆದುಕೊಳ್ಳದಿರಲಿ. 16 ಹೊಲದಲ್ಲಿರುವವನು ತನ್ನ ಹೊದಿಕೆಯನ್ನು ತೆಗೆದುಕೊಳ್ಳುವುದಕ್ಕೆ ಹಿಂದಿರುಗಿ ಹೋಗದಿರಲಿ.
17 “ಆದರೆ ಆ ದಿನಗಳಲ್ಲಿ ಗರ್ಭಿಣಿಯರಿಗೂ, ಹಾಲು ಕುಡಿಸುವ ತಾಯಂದಿರಿಗೂ ಆಗುವ ಕಷ್ಟ ಎಷ್ಟೆಂದು ಹೇಳಲಿ! 18 ಆ ದಿನಗಳು*ದಾನಿ. 12:1:ಸಂಕಟದ ದಿನಗಳಾಗಿರುವುದರಿಂದ ಇದೆಲ್ಲಾ ಚಳಿಗಾಲದಲ್ಲಿ ಆಗಬಾರದೆಂದು ಪ್ರಾರ್ಥನೆ ಮಾಡಿರಿ. 19 ಅಂಥ ಸಂಕಟವು ದೇವರು ಜಗತ್ತನ್ನು ಸೃಷ್ಟಿಸಿದ ದಿನದಿಂದ ಮೊದಲುಗೊಂಡು ಈ ದಿನದವರೆಗೂ ಆಗಲಿಲ್ಲ; ಇನ್ನು ಮುಂದೆ ಆಗುವುದೂ ಇಲ್ಲ. 20 ಕರ್ತನು ಆ ದಿನಗಳನ್ನು ಕಡಿಮೆ ಮಾಡದಿದ್ದರೆ ಒಂದು ನರಪ್ರಾಣಿಯಾದರೂ ಉಳಿಯುವುದಿಲ್ಲ. ಆದರೆ ತಾನು ಆರಿಸಿಕೊಂಡವರಿಗಾಗಿ ಆ ದಿನಗಳನ್ನು ಕಡಿಮೆ ಮಾಡಿದ್ದಾನೆ.
21 “ಆಗ ಯಾರಾದರೂ ನಿಮಗೆ, ಇಗೋ, ಕ್ರಿಸ್ತನು ಇಲ್ಲಿದ್ದಾನೆ! ಅಗೋ, ಆತನು ಅಲ್ಲಿದ್ದಾನೆ! ಎಂದು ಹೇಳಿದರೆ ನಂಬಬೇಡಿರಿ. 22 ಏಕೆಂದರೆ ಸುಳ್ಳು ಕ್ರಿಸ್ತರೂ, ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನು ಮೋಸಗೊಳಿಸುವುದಕ್ಕೋಸ್ಕರ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು. 23 ನೀವಂತೂ ಜಾಗರೂಕರಾಗಿರಿ. ನಾನು ನಿಮಗೆ ಎಲ್ಲವುಗಳನ್ನು ಮುಂದಾಗಿಯೇ” ಹೇಳಿದ್ದೇನೆ.
24 ಇದಲ್ಲದೆ ಆ ದಿನಗಳ ಸಂಕಟವು ತೀರಿದ ನಂತರ;
†ಯೆಶಾ 13:10; 34:4:“ ‘ಸೂರ್ಯನು ಕತ್ತಲಾಗಿ ಹೋಗುವನು.
25 ಚಂದ್ರನು ತನ್ನ ಬೆಳಕು ಕೊಡದೆ ಇರುವನು.
ನಕ್ಷತ್ರಗಳು ಆಕಾಶದಿಂದ ಬೀಳುವವು.
ಮತ್ತು ಪರಲೋಕದಲ್ಲಿ ಶಕ್ತಿಗಳು ಕದಲುವವು.’
26 ಆಗ‡ದಾನಿ. 7:13, 14:ಮನುಷ್ಯಕುಮಾರನು ಮಹಾಬಲದಿಂದಲೂ ಮಹಿಮೆಯಿಂದಲೂ ಮೇಘಗಳಲ್ಲಿ ಬರುವುದನ್ನು ಅವರು ನೋಡುವರು. 27 ಮತ್ತು ಆತನು ತನ್ನ ದೂತರನ್ನು ಕಳುಹಿಸಿ ಭೂಮಿಯ ಕಟ್ಟಕಡೆಯಿಂದ ಆಕಾಶದ ಕಟ್ಟಕಡೆಯವರೆಗೆ ತಾನು ಆರಿಸಿಕೊಂಡವರನ್ನು ನಾಲ್ಕುದಿಕ್ಕುಗಳಿಂದ ಒಟ್ಟುಗೂಡಿಸುವನು.”
ಅಂಜೂರ ಮರದ ಪಾಠ
28 “ಅಂಜೂರ ಮರವನ್ನು ನೋಡಿ ಒಂದು ಪಾಠವನ್ನು ಕಲಿತುಕೊಳ್ಳಿ. ಅದರ ಕೊಂಬೆಗಳಲ್ಲಿ ಇನ್ನೂ ಎಳೆದಾಗಿ ಎಲೆಗಳು ಚಿಗುರುವಾಗ ಬೇಸಿಗೆಯು ಸಮೀಪಿಸಿತು ಎಂದು ಅರಿತುಕೊಳ್ಳುತ್ತಿರಲ್ಲಾ. 29 ಹಾಗೆಯೇ ಇವೆಲ್ಲವೂ ಆಗುವುದನ್ನು ನೀವು ನೋಡುವಾಗ ಬಾಗಿಲ ಹತ್ತಿರದಲ್ಲಿಯೇ ಇದ್ದೆ ಎಂದು ತಿಳಿದುಕೊಳ್ಳಿರಿ. 30 ಇದೆಲ್ಲವೂ ನೆರವೇರುವವರೆಗೂ ಈ ಸಂತತಿಯು ಅಳಿದು ಹೋಗುವುದೇ ಇಲ್ಲವೆಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ. 31 ಆಕಾಶವೂ, ಭೂಮಿಯೂ ಅಳಿದು ಹೋಗುವವು; ಆದರೆ ನನ್ನ ವಾಕ್ಯವು ಅಳಿದು ಹೋಗುವುದೇ ಇಲ್ಲ.”
ಆ ದಿನವೂ ಗಳಿಗೆಯೂ ಯಾರಿಗೂ ತಿಳಿಯದು
32 “ಇದಲ್ಲದೆ ಆ ದಿನದ ಮತ್ತು ಆ ಗಳಿಗೆಯ ವಿಷಯವಾಗಿ ನನ್ನ ತಂದೆಗೆ ಹೊರತು ಮತ್ತಾರಿಗೂ ತಿಳಿಯದು, ಪರಲೋಕದಲ್ಲಿರುವ ದೂತರಿಗಾಗಲಿ, ಮಗನಿಗಾಗಲಿ ತಿಳಿಯದು. 33 ಆ ಕಾಲವು ಯಾವಾಗ ಬರುವುದು ಎಂದು ನಿಮಗೆ ತಿಳಿಯದೆ ಇರುವುದರಿಂದ ನೀವು§ಮಾರ್ಕ 14:38; ಮತ್ತಾ 26:41; ಎಫೆ 6:18:ಎಚ್ಚರವಾಗಿರಿ,*ಕೆಲವು ಪ್ರತಿಗಳಲ್ಲಿ ಜಾಗರೂಕರಾಗಿರಿ, ದೇವರನ್ನು ಪ್ರಾರ್ಥಿಸಿರಿ. ಜಾಗರೂಕರಾಗಿರಿ. 34 ಅದು†ಮತ್ತಾ 25:14; ಲೂಕ 19:12:ಒಬ್ಬ ಮನುಷ್ಯನು ತನ್ನ ಮನೆಯನ್ನು ಬಿಟ್ಟು ದೂರಪ್ರಯಾಣಕ್ಕೆ ಹೋಗುವಾಗ ತನ್ನ ಸೇವಕರಿಗೆ ಮನೇ ಅಧಿಕಾರವನ್ನು ಒಪ್ಪಿಸಿಕೊಟ್ಟು ಪ್ರತಿಯೊಬ್ಬನಿಗೆ ಅವನವನ ಕೆಲಸಗಳನ್ನು ಕೊಟ್ಟು ಬಾಗಿಲು ಕಾಯುವವನಿಗೆ, ನೀನು ಜಾಗರೂಕನಾಗಿರಬೇಕೆಂದು ಆಜ್ಞಾಪಿಸಿದವನ ಹಾಗೆ ಇರುತ್ತದೆ” ಎಂದು ನಾನು ನಿಮಗೆ ಹೇಳುತ್ತಿದ್ದೇನೆ.
35 “ಮನೆ ಯಜಮಾನನು ಸಂಜೆಯಲ್ಲಿಯೋ, ಮಧ್ಯರಾತ್ರಿಯಲ್ಲಿಯೋ, ಕೋಳಿ ಕೂಗುವಾಗಲೋ ಬೆಳಕಾಗುವಾಗಲೋ ಯಾವಾಗ ಬರುತ್ತಾನೋ ನಿಮಗೆ ಗೊತ್ತಿಲ್ಲದ ಕಾರಣ ಎಚ್ಚರವಾಗಿರಿ! 36 ಆತನು ಫಕ್ಕನೆ ಬಂದು ನೀವು ನಿದ್ರೆ ಮಾಡುತ್ತಿರುವುದನ್ನು ಕಂಡಾನು. 37 ನಾನು ನಿಮಗೆ ಹೇಳುತ್ತಿರುವುದನ್ನು ಎಲ್ಲರಿಗೂ ಹೇಳುತ್ತಿದ್ದೇನೆ; ಎಚ್ಚರವಾಗಿರಿ!” ಎಂದನು.
*13:1 ಭಾರಿ, ಅಥವಾ ದೊಡ್ಡ.
†13:3 ಆಲಿವ್ ಮರಗಳ ಗುಡ್ಡ.
‡13:6 ನಾನೇ ಆತನಾಗಿದ್ದೇನೆ
§13:14 ದಾನಿ. 9:27; 12:11:
*13:18 ದಾನಿ. 12:1:
†13:24 ಯೆಶಾ 13:10; 34:4:
‡13:26 ದಾನಿ. 7:13, 14:
§13:33 ಮಾರ್ಕ 14:38; ಮತ್ತಾ 26:41; ಎಫೆ 6:18:
*13:33 ಕೆಲವು ಪ್ರತಿಗಳಲ್ಲಿ ಜಾಗರೂಕರಾಗಿರಿ, ದೇವರನ್ನು ಪ್ರಾರ್ಥಿಸಿರಿ.
†13:34 ಮತ್ತಾ 25:14; ಲೂಕ 19:12: