97
ಸಾರ್ವಭೌಮನಾದ ಯೆಹೋವನನ್ನು ಸ್ತುತಿಸುವುದು
ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ;
ಭೂಲೋಕವು ಸಂತೋಷಿಸಲಿ;
ಸಮುದ್ರದ ತೀರಪ್ರದೇಶಗಳೆಲ್ಲಾ ಹರ್ಷಿಸಲಿ.
ಮೋಡಗಳೂ, ಕಾರ್ಗತ್ತಲೆಯೂ ಆತನ ಸುತ್ತಲೂ ಇರುತ್ತವೆ;
ಯೆಹೋವನು ನೀತಿ ಮತ್ತು ನ್ಯಾಯಗಳಿಂದ ಆಳುತ್ತಾನೆ*ಯೆಹೋವನು ನೀತಿ ಮತ್ತು ನ್ಯಾಯಗಳಿಂದ ಆಳುತ್ತಾನೆ ಮೂಲತಃ ನೀತಿ ಮತ್ತು ನ್ಯಾಯಗಳು ಆತನ ಸಿಂಹಾಸನದ ಅಸ್ತಿವಾರ..
ಬೆಂಕಿಯು ಆತನ ಮುಂದೆ ಹೋಗಿ,
ಸುತ್ತಲೂ ಆವರಿಸಿ ಆತನ ವೈರಿಗಳನ್ನು ದಹಿಸಿಬಿಡುತ್ತದೆ.
ಆತನ ಮಿಂಚುಗಳು ಲೋಕವನ್ನು ಬೆಳಗಿಸಿದವು;
ಭೂಮಿಯು ಅದನ್ನು ಕಂಡು ನಡುಗಿತು.
ಸಾರ್ವಭೌಮನಾದ ಯೆಹೋವನ ಎದುರಿನಲ್ಲಿ
ಪರ್ವತಗಳು ಮೇಣದಂತೆ ಕರಗಿಹೋದವು.
ಗಗನಮಂಡಲವು ಆತನ ನೀತಿಯನ್ನು ಪ್ರಸಿದ್ಧಪಡಿಸಿತು;
ಎಲ್ಲಾ ಜನರು ಆತನ ಮಹಿಮೆಯನ್ನು ಕಂಡರು.
ವಿಗ್ರಹಗಳಲ್ಲಿ ಹಿಗ್ಗುವವರೂ,
ಮೂರ್ತಿಪೂಜಕರೆಲ್ಲರೂ ನಾಚಿಕೆಗೆ ಒಳಪಡುವರು;
ಅಥವಾ ದೇವರುಗಳೆಂದು ಕರೆಯಲ್ಪಡುವವರೇ, ನೀವೆಲ್ಲರೂ ಆತನಿಗೆ ಅಡ್ಡಬೀಳುತ್ತಾರೆ.ದೇವರುಗಳೆಂದು ಕರೆಯಲ್ಪಡುವವರೇ, ನೀವೆಲ್ಲರೂ ಆತನಿಗೆ ಅಡ್ಡಬೀಳಿರಿ.
ಯೆಹೋವನೇ, ನೀನು ನ್ಯಾಯಸ್ಥಾಪಿಸಿದ ವಾರ್ತೆಯನ್ನು ಕೇಳಿ
ಚೀಯೋನ್ ಪಟ್ಟಣವು ಹರ್ಷಿಸಿತು;
ಯೆಹೂದ ಪ್ರಾಂತ್ಯದ ಊರುಗಳು ಸಂತೋಷಿಸಿದವು.
ಯೆಹೋವನೇ, ನೀನು ಭೂಲೋಕದ ಸರ್ವಾಧಿಕಾರಿ;
ಎಲ್ಲಾ ದೇವರುಗಳಲ್ಲಿ ಮಹೋನ್ನತನು ನೀನೇ.
10 ಅಥವಾ ಯೆಹೋವನನ್ನು ಪ್ರೀತಿಸುವವರೇ, ಕೆಟ್ಟತನವನ್ನು ಹಗೆಮಾಡಿರಿ.ಕೆಟ್ಟತನವನ್ನು ಹಗೆಮಾಡುವವರನ್ನು, ಯೆಹೋವನನ್ನು ಪ್ರೀತಿಸುತ್ತಾನೆ.
ಆತನು ತನ್ನ ಭಕ್ತರ ಪ್ರಾಣಗಳನ್ನು ಕಾಯುವವನಾಗಿ,
ದುಷ್ಟರ ಕೈಯೊಳಗಿಂದ ಅವರನ್ನು ಬಿಡಿಸುವನು.
11 ನೀತಿವಂತರಿಗೋಸ್ಕರ ಬೆಳಕು ಪ್ರಕಾಶಿಸುವುದು§ಪ್ರಕಾಶಿಸುವುದು ಅಥವಾ ಬಿತ್ತಲ್ಪಟ್ಟಿದೆ.,
ಯಥಾರ್ಥಹೃದಯವುಳ್ಳವರಿಗೆ ಸಂತೋಷವೂ ಕೊಡಲ್ಪಟ್ಟಿವೆ.
12 ನೀತಿವಂತರೇ, ಯೆಹೋವನಲ್ಲಿ ಆನಂದಿಸಿರಿ;
ಆತನ ಪರಿಶುದ್ಧನಾಮವನ್ನು ಕೊಂಡಾಡಿರಿ.*ಆತನ ಪರಿಶುದ್ಧನಾಮವನ್ನು ಕೊಂಡಾಡಿರಿ. ಅಥವಾ ಆತನ ಪರಿಶುದ್ಧ ಸ್ಮರಣೆಗಾಗಿ ಕೊಂಡಾಡಿರಿ.

*97:2 ಯೆಹೋವನು ನೀತಿ ಮತ್ತು ನ್ಯಾಯಗಳಿಂದ ಆಳುತ್ತಾನೆ ಮೂಲತಃ ನೀತಿ ಮತ್ತು ನ್ಯಾಯಗಳು ಆತನ ಸಿಂಹಾಸನದ ಅಸ್ತಿವಾರ.

97:7 ಅಥವಾ ದೇವರುಗಳೆಂದು ಕರೆಯಲ್ಪಡುವವರೇ, ನೀವೆಲ್ಲರೂ ಆತನಿಗೆ ಅಡ್ಡಬೀಳುತ್ತಾರೆ.

97:10 ಅಥವಾ ಯೆಹೋವನನ್ನು ಪ್ರೀತಿಸುವವರೇ, ಕೆಟ್ಟತನವನ್ನು ಹಗೆಮಾಡಿರಿ.

§97:11 ಪ್ರಕಾಶಿಸುವುದು ಅಥವಾ ಬಿತ್ತಲ್ಪಟ್ಟಿದೆ.

*97:12 ಆತನ ಪರಿಶುದ್ಧನಾಮವನ್ನು ಕೊಂಡಾಡಿರಿ. ಅಥವಾ ಆತನ ಪರಿಶುದ್ಧ ಸ್ಮರಣೆಗಾಗಿ ಕೊಂಡಾಡಿರಿ.