137
ಸೆರೆಯವರ ಪ್ರಲಾಪ
2ಪೂರ್ವ 36
ನಾವು ಬಾಬೆಲ್ ದೇಶದ ನದಿಗಳ ಬಳಿಯಲ್ಲಿ ಕುಳಿತುಕೊಂಡು,
ಚೀಯೋನನ್ನು ನೆನಪುಮಾಡಿಕೊಂಡು ಅತ್ತೆವು.
ಆ ದೇಶದ ನೀರವಂಜಿ ಮರಗಳಿಗೆ ನಮ್ಮ ಕಿನ್ನರಿಗಳನ್ನು ತೂಗುಹಾಕಿದೆವು.
ನಮ್ಮನ್ನು ಸೆರೆಹಿಡಿದು ಪೀಡಿಸುತ್ತಿದ್ದವರು ನಮಗೆ,
“ಚೀಯೋನಿನ ಗೀತೆಗಳಲ್ಲಿ ಒಂದನ್ನು ನಮ್ಮ ವಿನೋದಕ್ಕಾಗಿ ಹಾಡಿರಿ” ಎಂದು ಹೇಳುತ್ತಿದ್ದರು.
ನಾವು ಪರದೇಶದಲ್ಲಿ ಯೆಹೋವನ ಗೀತೆಗಳನ್ನು ಹಾಡುವುದು ಹೇಗೆ?
ಯೆರೂಸಲೇಮೇ, ನಾನು ನಿನ್ನನ್ನು ಮರೆತುಬಿಟ್ಟರೆ
* 137:5 ಅಥವಾ ನಾನು ಕಿನ್ನರಿಯನ್ನು ಇನ್ನೆಂದಿಗೂ ನನ್ನ ಬಲಗೈಯಿಂದ ಬಾರಿಸಲು ಆಗುವುದಿಲ್ಲ.ನನ್ನ ಬಲಗೈಯು ತನ್ನ ಕೌಶಲ್ಯವನ್ನು ಮರೆತು ಹೋಗಲಿ.
ಯೆರೂಸಲೇಮೇ, ನಾನು ನಿನ್ನನ್ನು ನೆನಪು ಮಾಡಿಕೊಳ್ಳದಿದ್ದರೆ,
ಎಲ್ಲಾದಕ್ಕಿಂತ ಹೆಚ್ಚಾಗಿ ನಾನು ನಿನ್ನಲ್ಲಿ ಆನಂದಿಸದಿದ್ದರೆ,
137:6 ಅಥವಾ ನಾನು ಇನ್ನೆಂದಿಗೂ ಹಾಡಲು ಆಗುವುದಿಲ್ಲ.ನನ್ನ ನಾಲಿಗೆಯು ಸೇದಿಹೋಗಲಿ.
ಯೆಹೋವನೇ, ಎದೋಮ್ಯರ ಹಾನಿಗಾಗಿ,
ಯೆರೂಸಲೇಮಿನ ನಾಶನದ ದಿನವನ್ನು ನೆನಪುಮಾಡಿಕೋ.
ಅವರು, “ಅದನ್ನು ಹಾಳುಮಾಡಿರಿ, ಅಸ್ತಿವಾರ ಸಹಿತ ಹಾಳುಮಾಡಿರಿ” ಎಂದು ಹೇಳಿದರಲ್ಲಾ.
ಹಾಳಾಗುವುದಕ್ಕಿರುವ ಬಾಬೆಲ್ ಪಟ್ಟಣವೇ,
ನೀನು ನನಗೆ ಮಾಡಿದ್ದಕ್ಕೆ ಮುಯ್ಯಿ ತೀರಿಸುವವನು ಧನ್ಯನು.
ನಿನ್ನ ಮಕ್ಕಳನ್ನು ಹಿಡಿದು ಬಂಡೆಗೆ ಅಪ್ಪಳಿಸುವವನು ಭಾಗ್ಯಹೊಂದಲಿ.

*137:5 137:5 ಅಥವಾ ನಾನು ಕಿನ್ನರಿಯನ್ನು ಇನ್ನೆಂದಿಗೂ ನನ್ನ ಬಲಗೈಯಿಂದ ಬಾರಿಸಲು ಆಗುವುದಿಲ್ಲ.

137:6 137:6 ಅಥವಾ ನಾನು ಇನ್ನೆಂದಿಗೂ ಹಾಡಲು ಆಗುವುದಿಲ್ಲ.