138
ರಕ್ಷಣಾ ಕರ್ತನ ಸ್ತುತಿ
ದಾವೀದನ ಕೀರ್ತನೆ.
ಕೀರ್ತ 102:13-23
ಯೆಹೋವನೇ, ಪೂರ್ಣಮನಸ್ಸಿನಿಂದ ನಿನ್ನನ್ನು ಕೊಂಡಾಡುವೆನು;
ದೇವರುಗಳ ಎದುರಿನಲ್ಲಿ ನಿನ್ನನ್ನು ಕೀರ್ತಿಸುವೆನು.
ನಿನ್ನ ಪರಿಶುದ್ಧ ಆಲಯದ ಕಡೆಗೆ ಅಡ್ಡಬೀಳುತ್ತೇನೆ;
ನಿನ್ನ ಕೃಪೆ, ಸತ್ಯತೆ ಇವುಗಳಿಗೋಸ್ಕರ ನಿನ್ನ ನಾಮವನ್ನು ಕೊಂಡಾಡುತ್ತೇನೆ.
*ಅಥವಾ ನಿನ್ನ ವಾಕ್ಯವನ್ನು ನಿನ್ನ ಎಲ್ಲಾ ನಾಮಕ್ಕಿಂತಲೂ ಮಿಗಿಲಾಗಿ ಘನಪಡಿಸಿದ್ದೀ. ನಿನ್ನ ನಾಮದ ಮತ್ತು ಆಜ್ಞೆಯ ಘನಪಡಿಸಿ ತೋರಿಸಿದ್ದೀ.
ನಾನು ಮೊರೆಯಿಟ್ಟಾಗ ಸದುತ್ತರವನ್ನು ದಯಪಾಲಿಸಿದಿ;
ನನ್ನ ಆತ್ಮಕ್ಕೆ ಬಲಕೊಟ್ಟು ನನ್ನನ್ನು ಧೈರ್ಯಪಡಿಸಿದ್ದೀ.
ಯೆಹೋವನೇ, ಭೂರಾಜರೆಲ್ಲರು ನೀನು ನುಡಿದ ನುಡಿಗಳನ್ನು ಕೇಳಿ
ನಿನ್ನನ್ನು ಸ್ತುತಿಸುವರು.
ಅವರು ಯೆಹೋವನ ಮಾರ್ಗಗಳನ್ನು ಹಾಡಿಹರಸುವರು;
ಯೆಹೋವನ ಪ್ರಭಾವವು ದೊಡ್ಡದಾಗಿದೆಯಲ್ಲಾ.
ಯೆಹೋವನು ಮಹೋನ್ನತನು;
ಆದರೂ ದೀನರನ್ನು ಲಕ್ಷಿಸುತ್ತಾನೆ;
ಗರ್ವಿಷ್ಠರನ್ನು ದೂರದಿಂದಲೇ ಗುರುತು ಹಿಡಿಯುತ್ತಾನೆ.
ನಾನು ಇಕ್ಕಟ್ಟಿನ ದಾರಿಯಲ್ಲಿ ನಡೆಯುವಾಗ,
ಅಥವಾ ನನ್ನನ್ನು ಕಾಪಾಡುವಿ.ನನ್ನನ್ನು ಚೈತನ್ಯಗೊಳ್ಳಿಸುವಿ,
ನನ್ನ ಶತ್ರುಗಳ ಕೋಪಕ್ಕೆ ವಿರುದ್ಧವಾಗಿ ನಿನ್ನ ಕೈ ಚಾಚುವಿ,
ನಿನ್ನ ಬಲಗೈ ನನ್ನನ್ನು ರಕ್ಷಿಸುವುದು.
ಯೆಹೋವನು ನನ್ನ ಕಾರ್ಯವನ್ನು ಸಿದ್ಧಿಗೆ ತರುವನು.
ಯೆಹೋವನೇ, ನಿನ್ನ ಪ್ರೀತಿಯು ಶಾಶ್ವತವಾದದ್ದು,
ನೀನು ಕೈಹಾಕಿದ ಕೆಲಸವನ್ನು ನೆರವೇರಿಸದೆ ಬಿಡಬೇಡ.

*138:2 ಅಥವಾ ನಿನ್ನ ವಾಕ್ಯವನ್ನು ನಿನ್ನ ಎಲ್ಲಾ ನಾಮಕ್ಕಿಂತಲೂ ಮಿಗಿಲಾಗಿ ಘನಪಡಿಸಿದ್ದೀ.

138:7 ಅಥವಾ ನನ್ನನ್ನು ಕಾಪಾಡುವಿ.