10
ಬಲಿಷ್ಠನಾದ ದೂತನು ಮತ್ತು ಚಿಕ್ಕ ಸುರುಳಿಯು
1 ತರುವಾಯ ಬಲಿಷ್ಠನಾದ ಮತ್ತೊಬ್ಬ ದೇವದೂತನು ಪರಲೋಕದಿಂದ ಇಳಿದುಬರುವುದನ್ನು ಕಂಡೆನು. ಅವನು ಮೇಘವನ್ನು ಧರಿಸಿಕೊಂಡಿದ್ದನು. *ಯೆಹೆ. 1:28:ಅವನ ತಲೆಯ ಮೇಲೆ ಕಾಮನಬಿಲ್ಲು ಇತ್ತು. †ಪ್ರಕ 1:16; ಮತ್ತಾ 17:2:ಅವನ ಮುಖವು ಸೂರ್ಯನೊಪಾದಿಯಲ್ಲಿತ್ತು. ‡ಪ್ರಕ 1:15:ಅವನ ಪಾದಗಳು ಬೆಂಕಿಯ ಕಂಬಗಳಂತಿದ್ದವು. 2 §ಪ್ರಕ 10:8-10:ಅವನ ಕೈಯಲ್ಲಿ ಬಿಚ್ಚಿದ್ದ ಒಂದು ಚಿಕ್ಕ ಸುರುಳಿ ಇತ್ತು. ಅವನು ಬಲಗಾಲನ್ನು ಸಮುದ್ರದ ಮೇಲೆಯೂ ಎಡಗಾಲನ್ನು ಭೂಮಿಯ ಮೇಲೆಯೂ ಇಟ್ಟು, 3 *ಯೋವೇ. 3:16; ಆಮೋ. 1:2:ಸಿಂಹವು ಘರ್ಜಿಸುವ ಪ್ರಕಾರ ಮಹಾಶಬ್ದದಿಂದ ಕೂಗಿದನು. ಕೂಗಿದಾಗ ಏಳು ಗುಡುಗುಗಳು ಒಂದೊಂದಾಗಿ ಧ್ವನಿಕೊಟ್ಟವು. 4 ಆ ಏಳು ಗುಡುಗುಗಳು ನುಡಿದಾಗ ನಾನು ಬರೆಯಬೇಕೆಂದಿದ್ದೆನು. ಆದರೆ, “ಆ ಏಳು ಗುಡುಗುಗಳು ನುಡಿದಿದ್ದನ್ನು ನೀನು ಬರೆಯದೆ †ಮೂಲ: ಅವುಗಳಿಗೆ ಮುದ್ರೆಹಾಕು; ದಾನಿ. 8:26; 12:4, 9; ಪ್ರಕ 22:10:ಗುಪ್ತವಾಗಿಡು” ಎಂದು ಹೇಳುವ ದೈವವಾಣಿಯನ್ನು ಕೇಳಿದೆನು.
5 ಅನಂತರ ಸಮುದ್ರದ ಮೇಲೆಯೂ, ಭೂಮಿಯ ಮೇಲೆಯೂ ನಿಂತಿರುವವನಾಗಿ ನನಗೆ ಕಾಣಿಸಿದ ದೇವದೂತನು ‡ಆದಿ 14:22:ತನ್ನ ಬಲಗೈಯನ್ನು ಪರಲೋಕದ ಕಡೆಗೆ ಎತ್ತಿ, 6 §ಪ್ರಕ 4:11:ಪರಲೋಕವನ್ನೂ ಅದರಲ್ಲಿರುವ ಸಮಸ್ತವನ್ನೂ, ಭೂಮಿಯನ್ನೂ ಅದರಲ್ಲಿರುವ ಸಮಸ್ತವನ್ನೂ, ಸಮುದ್ರವನ್ನೂ ಅದರಲ್ಲಿರುವ ಸಮಸ್ತವನ್ನೂ ಸೃಷ್ಟಿಸಿ, *ಪ್ರಕ 4:9:ಯುಗಯುಗಾಂತರಗಳಲ್ಲಿಯೂ ಜೀವಿಸುವಾತನ ಮೇಲೆ †ದಾನಿ. 12:7:ಆಣೆಯಿಟ್ಟು, ‡ಪ್ರಕ 12:12; 16:17; 21:6; ದಾನಿ. 12:7:“ಇನ್ನು ತಡಮಾಡದೆ, 7 §ಪ್ರಕ 11:15:ಏಳನೆಯ ದೇವದೂತನು ಶಬ್ದಮಾಡುವ ದಿನಗಳಲ್ಲಿ ಅಂದರೆ ಅವನು ತುತ್ತೂರಿಯನ್ನು ಊದುವುದಕ್ಕಿರುವ ಸಮಯದಲ್ಲಿ ದೇವರು ಇದುವರೆಗೆ ಗುಪ್ತವಾಗಿಟ್ಟಿದ್ದ ದೇವರ ಮರ್ಮವನ್ನು *ಆಮೋ. 3:7:ತನ್ನ ದಾಸರಾದ ಪ್ರವಾದಿಗಳಿಗೆ ತಿಳಿಸಿದ್ದ ಪ್ರಕಾರ ನೆರವೇರುವುದು” ಎಂದು ಹೇಳಿದನು.
8 ಅನಂತರ ಪರಲೋಕದಿಂದ ನನಗೆ ಕೇಳಿಸಿದ್ದ ಶಬ್ದವು ಮತ್ತೊಮ್ಮೆ ನನ್ನೊಂದಿಗೆ ಮಾತನಾಡಿ, “ನೀನು ಹೋಗಿ ಸಮುದ್ರದ ಮೇಲೆಯೂ ಭೂಮಿಯ ಮೇಲೆಯೂ ನಿಂತುಕೊಂಡಿರುವ ದೂತನ ಕೈಯಲ್ಲಿರುವ ಆ ಬಿಚ್ಚಿದ ಸುರುಳಿಯನ್ನು ತೆಗೆದುಕೊ” ಎಂದು ಹೇಳಿತು.
9 ನಾನು ಆ ದೂತನ ಬಳಿಗೆ ಹೋಗಿ, “ಆ ಚಿಕ್ಕ ಸುರುಳಿಯನ್ನು ನನಗೆ ಕೊಡು ಎಂದು ಕೇಳಲು ಅವನು ನನಗೆ, †ಯೆಹೆ. 2:4, 3:3; ಯೆರೆ 15:16:ನೀನು ಅದನ್ನು ತೆಗೆದುಕೊಂಡು ತಿಂದು ಬಿಡು, ಅದು ನಿನ್ನ ಹೊಟ್ಟೆಯನ್ನು ಕಹಿಯಾಗುವಂತೆ ಮಾಡುವುದು, ಆದರೆ ನಿನ್ನ ಬಾಯಿ ಜೇನಿನಂತೆ ಸಿಹಿಯಾಗಿರುವುದು” ಎಂದು ಹೇಳಿದನು. 10 ಆಗ ನಾನು ಆ ಚಿಕ್ಕ ಸುರುಳಿಯನ್ನು ಆ ದೂತನ ಕೈಯಿಂದ ತೆಗೆದುಕೊಂಡು ತಿಂದುಬಿಟ್ಟೆನು. ಅದು ನನ್ನ ಬಾಯಲ್ಲಿ ಜೇನಿನಂತೆ ಸಿಹಿಯಾಗಿತ್ತು, ಅದನ್ನು ತಿಂದ ನಂತರ ನನ್ನ ಹೊಟ್ಟೆಯು ಕಹಿಯಾಯಿತು. 11 ಅನಂತರ ಆ ದೂತನು ನನಗೆ, “ನೀನು ಇನ್ನೂ ಅನೇಕ ಪ್ರಜೆ, ಜನ, ಭಾಷೆಗಳನ್ನೂ, ಅರಸರನ್ನೂ ಕುರಿತು ಪ್ರವಾದನೆ ಹೇಳಬೇಕು” ಎಂದು ಆಜ್ಞಾಪಿಸಿದನು.
*10:1 ಯೆಹೆ. 1:28:
†10:1 ಪ್ರಕ 1:16; ಮತ್ತಾ 17:2:
‡10:1 ಪ್ರಕ 1:15:
§10:2 ಪ್ರಕ 10:8-10:
*10:3 ಯೋವೇ. 3:16; ಆಮೋ. 1:2:
†10:4 ಮೂಲ: ಅವುಗಳಿಗೆ ಮುದ್ರೆಹಾಕು; ದಾನಿ. 8:26; 12:4, 9; ಪ್ರಕ 22:10:
‡10:5 ಆದಿ 14:22:
§10:6 ಪ್ರಕ 4:11:
*10:6 ಪ್ರಕ 4:9:
†10:6 ದಾನಿ. 12:7:
‡10:6 ಪ್ರಕ 12:12; 16:17; 21:6; ದಾನಿ. 12:7:
§10:7 ಪ್ರಕ 11:15:
*10:7 ಆಮೋ. 3:7:
†10:9 ಯೆಹೆ. 2:4, 3:3; ಯೆರೆ 15:16: