6
ಸತ್ತು ಜೀವಿತನಾಗಿ ಎದ್ದ ಕ್ರಿಸ್ತನಲ್ಲಿ ಐಕ್ಯವಾದವರು
ಹಾಗಾದರೆ ಏನು ಹೇಳೋಣ? ದೇವರ ಕೃಪೆಯು ಹೆಚ್ಚಾಗಲಿ ಎಂದು ನಾವು ಇನ್ನೂ ಪಾಪವನ್ನು ಮಾಡುತ್ತಲೇ ಇರಬೇಕೋ? ಹಾಗೆ ಎಂದಿಗೂ ಹಾಗಾಗಬಾರದು. *ರೋಮಾ. 3:8; 6:11; 7:4,6; ಗಲಾ. 2:19; ಕೊಲೊ 2:20; 3:3; 1 ಪೇತ್ರ 2:24ಪಾಪದ ಪಾಲಿಗೆ ಸತ್ತವರಾದ ನಾವು ಇನ್ನು ಅದರಲ್ಲೇ ಬದುಕುವುದು ಹೇಗೆ? ಗಲಾ. 3:27ಕ್ರಿಸ್ತ ಯೇಸುವಿನೊಂದಿಗೆ ಸೇರುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡವರಾದ ನಾವೆಲ್ಲರೂ ಆತನ ಮರಣದಲ್ಲಿ ಪಾಲುಗಾರರಾಗುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡೆವೆಂದು ನಿಮಗೆ ತಿಳಿಯದೋ? ಹೀಗಿರಲಾಗಿ ನಾವು ದೀಕ್ಷಾಸ್ನಾನ ಮಾಡಿಸಿಕೊಂಡಾಗ ಆತನ ಮರಣದಲ್ಲಿ ಪಾಲುಗಾರರಾಗಿ ಕೊಲೊ 2:12ಆತನೊಂದಿಗೆ ಹೂಣಲ್ಪಟ್ಟೆವು. ಆದ್ದರಿಂದ ಕ್ರಿಸ್ತನು ಸತ್ತು ತಂದೆಯ ಮಹಿಮೆಯಿಂದ §ರೋಮಾ. 6:9; 8:11; ಅ. ಕೃ. 2:24ಜೀವಿತನಾಗಿ ಎಬ್ಬಿಸಲ್ಪಟ್ಟಂತೆಯೇ ನಾವು ಕೂಡ ಜೀವದಿಂದೆದ್ದು *2 ಕೊರಿ 5:17; ಗಲಾ. 15; ಎಫೆ 4:23,24; ಕೊಲೊ 3:10ನೂತನ ಜೀವದಲ್ಲಿ ನಡೆದುಕೊಳ್ಳಬೇಕು. ಹೇಗೆಂದರೆ ನಾವು ಆತನ ಮರಣಕ್ಕೆ ಫಿಲಿ. 3:10,11ಸದೃಶ್ಯವಾದ ಮರಣವನ್ನು ಹೊಂದಿ ಆತನಲ್ಲಿ ಐಕ್ಯವಾಗಿದ್ದರೆ ಆತನ ಪುನರುತ್ಥಾನಕ್ಕೆ ಸದೃಶವಾದ ಪುನರುತ್ಥಾನವನ್ನೂ ಹೊಂದಿ ಆತನಲ್ಲಿ ಐಕ್ಯವಾಗುವೆವು. ನಮಗೆ ತಿಳಿದಿರುವಂತೆ, ನಮ್ಮ ಎಫೆ 4:22; ಕೊಲೊ 3:9ಪಾಪಾಧೀನಸ್ವಭಾವವು ನಾಶವಾಗಿ, ನಾವು ಇನ್ನೂ ಪಾಪದ ವಶದಲ್ಲಿರದಂತೆ ನಮ್ಮ ಪೂರ್ವಸ್ವಭಾವವು §ಗಲಾ. 2:20; 5:24; 6:14ಕ್ರಿಸ್ತನ ಕೂಡ ಶಿಲುಬೆಗೆ ಹಾಕಲ್ಪಟ್ಟಿದೆ. *ರೋಮಾ. 6:18ಸತ್ತವನು ಪಾಪದ ವಶದಿಂದ ಬಿಡುಗಡೆ ಹೊಂದಿದ್ದಾನೆ. ಇದಲ್ಲದೆ 2 ತಿಮೊ. 2:11; 2 ಕೊರಿ 4:10; 13:4ನಾವು ಕ್ರಿಸ್ತನೊಡನೆ ಸತ್ತ ಪಕ್ಷದಲ್ಲಿ ಆತನೊಡನೆ ಜೀವಿಸುವೆವೆಂದು ನಂಬುತ್ತೇವೆ. ನಮಗೆ ತಿಳಿದಿರುವಂತೆ, ಕ್ರಿಸ್ತನು ಸತ್ತ ಮೇಲೆ ಜೀವಿತನಾಗಿ ಎದ್ದು ಬಂದದ್ದರಿಂದ ಅ. ಕೃ. 13:34; ಪ್ರಕ 1:18ಆತನು ಇನ್ನು ಮುಂದೆ ಸಾಯತಕ್ಕವನಲ್ಲ, ಮರಣವು ಆತನ ಮೇಲೆ ಆಳ್ವಿಕೆ ನಡಿಸುವುದಿಲ್ಲ. 10 §ಇಬ್ರಿ. 7:27ಆತನು ಸತ್ತದ್ದು ಒಂದೇ ಸಾರಿ ಅದು ಪಾಪದ ಪಾಲಿಗೆ; ಆತನು ಜೀವಿಸುವುದು ದೇವರಿಗಾಗಿಯೇ, 11 ಅದೇ ಪ್ರಕಾರ ನೀವು ಸಹ ನಿಮ್ಮನ್ನು ಕ್ರಿಸ್ತ ಯೇಸುವಿನ ಐಕ್ಯದಿಂದ *ರೋಮಾ. 6:2ಪಾಪದ ಪಾಲಿಗೆ ಸತ್ತವರೂ, ದೇವರಿಗಾಗಿ ಜೀವಿಸುವವರೂ ಎಂದು ಎಣಿಸಿಕೊಳ್ಳಿರಿ.
ನಂಬಿದವರು ಪಾಪದ ದಾಸತ್ವದಿಂದ ಬಿಡುಗಡೆಯಾಗಿ ದೇವರಿಗೆ ದಾಸರಾಗುವರು
12 ಹೀಗಿರುವುದರಿಂದ ಸಾವಿಗೆ ಒಳಗಾಗುವ ಈ ನಿಮ್ಮ ದೇಹದ ಮೇಲೆ ಪಾಪವನ್ನು ಆಳಗೊಡಿಸಿ ನೀವು ದೇಹದ ದುರಾಶೆಗಳಿಗೆ ಒಳಪಡಬೇಡಿರಿ. 13 ಇದು ಮಾತ್ರವಲ್ಲದೆ ನೀವು ನಿಮ್ಮ ದೇಹದ ಅಂಗಗಳನ್ನು ಪಾಪಕ್ಕೆ ಒಪ್ಪಿಸುವವರಾಗಿದ್ದು, ಅವುಗಳನ್ನು ದುಷ್ಟತ್ವವನ್ನು ನಡಿಸುವ ಸಾಧನಗಳಾಗಿ ಮಾಡಬೇಡಿರಿ; ನೀವು ಸತ್ತವರೊಳಗಿಂದ ಜೀವಿತರಾಗಿರಲಾಗಿ ರೋಮಾ. 12:1ನಿಮ್ಮನ್ನು ದೇವರಿಗೆ ಒಪ್ಪಿಸಿಕೊಟ್ಟು, ನಿಮ್ಮ ದೇಹದ ಅಂಗಗಳನ್ನು ನೀತಿಯ ಆಯುಧಗಳನ್ನಾಗಿ ಆತನಿಗೆ ಸಮರ್ಪಿಸಿರಿ. 14 ಯಾಕೆಂದರೆ ರೋಮಾ. 8:2; 12ಪಾಪವು ನಿಮ್ಮ ಮೇಲೆ ಅಧಿಕಾರ ನಡೆಸದು; ನೀವು §ನೇಮಗಳಿಗೆಧರ್ಮಶಾಸ್ತ್ರಕ್ಕೆ ಅಧೀನರಲ್ಲ, ಕೃಪೆಗೆ ಅಧೀನರಾಗಿದ್ದೀರಿ. 15 ಹಾಗಾದರೇನು? ನಾವು ಧರ್ಮಶಾಸ್ತ್ರಾಧೀನರಲ್ಲ, ಕೃಪೆಗೆ ಅಧೀನರಾಗಿದ್ದೇವೆಂದು *ರೋಮಾ. 6:1ಪಾಪವನ್ನು ಮಾಡಬಹುದೋ? ಎಂದಿಗೂ ಮಾಡಬಾರದು. 16 ನೀವು ಯಾವನಿಗೆ ದಾಸರಂತೆ ವಿಧೇಯರಾಗುತ್ತೇವೆಂದು ನಿಮ್ಮನ್ನು ನೀವು ಒಪ್ಪಿಸಿ ಕೊಡುತ್ತೀರೋ ರೋಮಾ. 6:20ಆ ಯಜಮಾನನಿಗೆ ದಾಸರಾಗಿಯೇ ಇರುವಿರೆಂಬುದು ನಿಮಗೆ ಗೊತ್ತಿಲ್ಲವೋ? ಪಾಪಕ್ಕೆ ದಾಸರಾದರೆ ಮರಣವೇ ಫಲ; ನಂಬಿಕೆಯೆಂಬ ವಿಧೇಯತ್ವಕ್ಕೆ ದಾಸರಾದರೆ ನೀತಿಯೇ ಫಲ 17 ಆದರೆ ನೀವು ಮೊದಲು ಪಾಪಕ್ಕೆ ದಾಸರಾಗಿದ್ದರೂ ನಿಮಗೆ ಕಲಿಸಿಕೊಟ್ಟ ಬೋಧನೆಗೆ ನೀವು ಮನಃಪೂರ್ವಕವಾಗಿ ಅಧೀನರಾದ್ದರಿಂದಲೂ, 18 ರೋಮಾ. 6:22; 8:2ಪಾಪದಿಂದ ಬಿಡುಗಡೆಯನ್ನು ಹೊಂದಿ §ರೋಮಾ. 6:22ನೀತಿಗೆ ದಾಸರಾದ್ದರಿಂದಲೂ ದೇವರಿಗೆ ಸ್ತೋತ್ರವಾಗಲಿ. 19 ನಿಮ್ಮ ಶರೀರ ಭಾವದ ಬಲಹೀನತೆಯ ದೆಸೆಯಿಂದ ನಾನು *ರೋಮಾ. 3:5ಲೋಕದ ರೀತಿಯಾಗಿ ಮಾತನಾಡುತ್ತೇನೆ. ರೋಮಾ. 6:13 ದುಷ್ಟತನವನ್ನು ಮಾಡುವುದಕ್ಕಾಗಿ ನಿಮ್ಮ ಅಂಗಗಳನ್ನು ಬಂಡುತನಕ್ಕೂ, ದುಷ್ಟತನಕ್ಕೂ ದಾಸರನ್ನಾಗಿ ಒಪ್ಪಿಸಿ ಕೊಟ್ಟಿದ್ದಂತೆಯೇ ಈಗ ಪರಿಶುದ್ಧರಾಗುವುದಕ್ಕಾಗಿ ನಿಮ್ಮ ಅಂಗಗಳನ್ನು ನೀತಿಗೆ ದಾಸರನ್ನಾಗಿ ಒಪ್ಪಿಸಿಕೊಡಿರಿ. 20 ನೀವು ಪಾಪಕ್ಕೆ ದಾಸರಾಗಿದ್ದಾಗ ನೀತಿಗೆ ಒಳಗಾಗಿರಲಿಲ್ಲ. 21 ಆದರೆ ನೀವು ಮೊದಲು ಮಾಡಿದ್ದ ಕೃತ್ಯಗಳಿಂದ ರೋಮಾ. 7:5ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯಾಗುತ್ತಿದೆ. §ರೋಮಾ. 1:32; 8:6, 13; ಜ್ಞಾ. 14:12; ಗಲಾ. 6:8ಕೊನೆಗೆ ಅವುಗಳಿಂದ ಬರುವುದು ಮರಣವಲ್ಲವೇ? 22 ಈಗಲಾದರೋ ನೀವು *ರೋಮಾ. 6:18ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ 1 ಕೊರಿ 7:22; 1 ಪೇತ್ರ 2:16ದಾಸರಾದ್ದರಿಂದ ನಿಮಗೆ ಶುದ್ಧೀಕರಣವೆಂಬ ಫಲವು ದೊರಕಿರುವುದಲ್ಲದೆ ಅಂತ್ಯದಲ್ಲಿ ನಿತ್ಯ ಜೀವವನ್ನು ಹೊಂದುವಿರಿ. 23 ಯಾಕೆಂದರೆ ರೋಮಾ. 5:12; 2:8ಪಾಪವು ಕೊಡುವ ಸಂಬಳ ಮರಣ; ದೇವರ ಕೃಪಾವರವು ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿರುವ ನಿತ್ಯಜೀವವೇ ಆಗಿದೆ.

*6:2 ರೋಮಾ. 3:8; 6:11; 7:4,6; ಗಲಾ. 2:19; ಕೊಲೊ 2:20; 3:3; 1 ಪೇತ್ರ 2:24

6:3 ಗಲಾ. 3:27

6:4 ಕೊಲೊ 2:12

§6:4 ರೋಮಾ. 6:9; 8:11; ಅ. ಕೃ. 2:24

*6:4 2 ಕೊರಿ 5:17; ಗಲಾ. 15; ಎಫೆ 4:23,24; ಕೊಲೊ 3:10

6:5 ಫಿಲಿ. 3:10,11

6:6 ಎಫೆ 4:22; ಕೊಲೊ 3:9

§6:6 ಗಲಾ. 2:20; 5:24; 6:14

*6:7 ರೋಮಾ. 6:18

6:8 2 ತಿಮೊ. 2:11; 2 ಕೊರಿ 4:10; 13:4

6:9 ಅ. ಕೃ. 13:34; ಪ್ರಕ 1:18

§6:10 ಇಬ್ರಿ. 7:27

*6:11 ರೋಮಾ. 6:2

6:13 ರೋಮಾ. 12:1

6:14 ರೋಮಾ. 8:2; 12

§6:14 ನೇಮಗಳಿಗೆ

*6:15 ರೋಮಾ. 6:1

6:16 ರೋಮಾ. 6:20

6:18 ರೋಮಾ. 6:22; 8:2

§6:18 ರೋಮಾ. 6:22

*6:19 ರೋಮಾ. 3:5

6:19 ರೋಮಾ. 6:13

6:21 ರೋಮಾ. 7:5

§6:21 ರೋಮಾ. 1:32; 8:6, 13; ಜ್ಞಾ. 14:12; ಗಲಾ. 6:8

*6:22 ರೋಮಾ. 6:18

6:22 1 ಕೊರಿ 7:22; 1 ಪೇತ್ರ 2:16

6:23 ರೋಮಾ. 5:12; 2:8