10
ಸಹೋದರರೇ, ಇಸ್ರಾಯೇಲ್ಯರು ರಕ್ಷಣೆ ಹೊಂದಬೇಕೆಂಬುದೇ ನನ್ನ ಮನೋಭಿಲಾಷೆಯೂ ಮತ್ತು ದೇವರಿಗೆ ನಾನು ಮಾಡುವ ವಿಜ್ಞಾಪನೆಯೂ ಆಗಿದೆ. *ಅ. ಕೃ. 21:20ದೇವರ ಬಗ್ಗೆ ಆಸಕ್ತಿಯುಳ್ಳವರಾಗಿದ್ದಾರೆಂದು ನಾನು ಅವರ ವಿಷಯದಲ್ಲಿ ಸಾಕ್ಷಿ ಕೊಡುತ್ತೇನೆ; ಆದರೂ ಅವರ ಆಸಕ್ತಿಯು ಜ್ಞಾನಾನುಸಾರವಾದುದಲ್ಲ. ರೋಮಾ. 1:17ಅವರು ದೇವರಿಂದ ದೊರಕುವ ನೀತಿಯನ್ನರಿಯದೆ ಸ್ವಂತ ನೀತಿಯನ್ನೇ; ಸ್ಥಾಪಿಸಬೇಕೆಂದು ಪ್ರಯತ್ನಿಸುತ್ತಾ ಇದ್ದುದ್ದರಿಂದ ದೇವರ ನೀತಿಗೆ ಅಧೀನರಾಗಲಿಲ್ಲ. ನಂಬುವವರೆಲ್ಲರಿಗೆ ನೀತಿಯನ್ನು ದೊರಕಿಸಿಕೊಡುವುದಕ್ಕಾಗಿ ಕ್ರಿಸ್ತನೇ ಧರ್ಮಶಾಸ್ತ್ರವನ್ನು ಕೊನೆಗೊಳಿಸಿದನು. ಧರ್ಮಶಾಸ್ತ್ರದ ನೀತಿಯನುಸಾರ, ಯಾಜ 18:5; ಯೆಹೆ. 20:11,13; ಮತ್ತಾ 19:17; ಲೂಕ 10:28; ಗಲಾ. 3:12“ಅದನ್ನು ಅನುಸರಿಸಿದವನು ಅದರಿಂದಲೇ ಜೀವಿಸುವನೆಂದು” ಮೋಶೆಯು ಬರೆಯುತ್ತಾನೆ. ಆದರೆ §ರೋಮಾ. 9:30ನಂಬಿಕೆಯಿಂದುಂಟಾಗುವ ನೀತಿಯು ಈ ರೀತಿಯಾಗಿ ಹೇಳುತ್ತದೆ. *ಧರ್ಮೋ 30:12-14“ ‘ಕ್ರಿಸ್ತನನ್ನು ಭೂಮಿಗಿಳಿಸಿಕೊಂಡು ಬರುವುದಕ್ಕಾಗಿ ಮೇಲಣ ಲೋಕಕ್ಕೆ ಏರಿಹೋದವರಾರು?’ ಎಂದಾಗಲಿ ‘ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿಕೊಂಡು ಬರುವುದಕ್ಕಾಗಿ ಯಾರು ಪಾತಾಳಲೋಕಕ್ಕೆ ಇಳಿದುಹೋದರು? ಎಂದಾಗಲಿ ನಿನ್ನ ಮನಸ್ಸಿನಲ್ಲಿ ಅಂದುಕೊಳ್ಳಬಾರದು.’ ” ಆದರೆ ಅದು ಏನನ್ನು ಹೇಳುತ್ತದೆ. “ದೇವರ ವಾಕ್ಯವು ನಿನ್ನ ಸಮೀಪದಲ್ಲಿಯೇ ಇದೆ; ಅದು ನಿನ್ನ ಬಾಯಲ್ಲಿಯೂ, ನಿನ್ನ ಹೃದಯದಲ್ಲಿಯೂ ಇದೆ.” ಆ ವಾಕ್ಯವು ನಾವು ಸಾರುವ ನಂಬಿಕೆಯ ವಿಷಯವಾದ ವಾಕ್ಯವೇ. ಅದೇನೆಂದರೆ ನೀನು ಯೇಸುವನ್ನೇ ಕರ್ತನೆಂದು ಮತ್ತಾ 10:32; ಲೂಕ 12:8ಬಾಯಿಂದ ಅರಿಕೆಮಾಡಿಕೊಂಡು ಅ. ಕೃ. 2:24; 1 ಪೇತ್ರ 1:21ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನೆಂದು ಹೃದಯದಿಂದ ನಂಬಿದರೆ ನಿನಗೆ ರಕ್ಷಣೆಯಾಗುವುದು ಎಂಬುದೇ. 10 ಹೃದಯದಿಂದ ನಂಬುವುದರ ಮೂಲಕ ನೀತಿಯು ದೊರಕುತ್ತದೆ. ಬಾಯಿಂದ ಅರಿಕೆಮಾಡುವುದರ ಮೂಲಕ ರಕ್ಷಣೆಯಾಗುತ್ತದೆ. 11 §ಯೆಶಾ 28:16; ರೋಮಾ. 9:33“ಆತನ ಮೇಲೆ ನಂಬಿಕೆಯಿಡುವ ಒಬ್ಬನಾದರೂ ಆಶಾಭಂಗಪಡುವುದಿಲ್ಲವೆಂದು” ಧರ್ಮಶಾಸ್ತ್ರವು ಹೇಳುತ್ತದೆ. 12 ಈ ವಿಷಯದಲ್ಲಿ *ರೋಮಾ. 3:22,29ಯೆಹೂದ್ಯರಿಗೂ ಅಥವಾ ಗ್ರೀಕನಿಗೂ ಹೆಚ್ಚು ಕಡಿಮೆ ಏನೂ ಇಲ್ಲ. ಅ. ಕೃ. 10:36ಎಲ್ಲರಿಗೂ ಒಬ್ಬನೇ ಕರ್ತನು; ಆತನು ತನ್ನ ನಾಮವನ್ನು ಹೇಳಿಕೊಳ್ಳುವವರಿಗೆ ಹೇರಳವಾಗಿ ಕೊಡುವುದಕ್ಕೆ ಶಕ್ತನಾಗಿದ್ದಾನೆ. 13 ಆದ್ದರಿಂದಯೋವೇ. 2:32; ಅ. ಕೃ. 2:21 ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರಿಗೂ ರಕ್ಷಣೆಯಾಗುವುದೆಂದು ಬರೆದಿದೆ.
ಇಸ್ರಾಯೇಲ್ಯರ ಅಪನಂಬಿಕೆಗೆ ಅವರಿಗೆ ಜ್ಞಾನವಿಲ್ಲವೆಂಬುದು ಕಾರಣವಲ್ಲ
14 ಆದರೆ ಅವರು ನಂಬದೆ ಇರುವುದರಿಂದ ಆತನ ನಾಮವನ್ನು ಹೇಳಿಕೊಳ್ಳುವುದಾದರೂ ಹೇಗೆ? ಮತ್ತು ಆತನ ಸುದ್ದಿಯನ್ನು ಕೇಳದಿರುವಲ್ಲಿ ಆತನನ್ನು ನಂಬುವುದಾದರೂ ಹೇಗೆ? ಪ್ರಚಾರಪಡಿಸುವವನಿಲ್ಲದೆ ಕೇಳುವುದಾದರೂ ಹೇಗೆ? ಸುವಾರ್ತೆಸಾರುವವರನ್ನು ಕಳುಹಿಸದೆ ಸಾರುವುದು ಹೇಗೆ? 15 ಇದಕ್ಕೆ ಸರಿಯಾಗಿ §ಯೆಶಾ 52:7; ನಹೂ. 1:15“ಶುಭದ ಸುವಾರ್ತೆಯನ್ನು ಸಾರುವವರ ಪಾದಗಳು ಎಷ್ಟೋ ಮನೋಹರವಾಗಿವೆ” ಎಂದು ಬರೆದಿದೆ. 16 *ಇಬ್ರಿ. 4:2ಆದರೂ ಆ ಶುಭವರ್ತಮಾನಕ್ಕೆ ಎಲ್ಲರೂ ಕಿವಿಗೊಡಲಿಲ್ಲ. ಈ ವಿಷಯದಲ್ಲಿ ಯೆಶಾಯನು, ಯೆಶಾ 53:1; ಯೋಹಾ 12:38“ಕರ್ತನೇ, ನಾವು ಸಾರಿದ ಸುವಾರ್ತೆಯನ್ನು ಯಾರು ನಂಬಿದರು?” ಎಂದು ನುಡಿಯುತ್ತಾನೆ. 17 ಆದಕಾರಣ ಸಾರಿದ ಸುವಾರ್ತೆಯನ್ನು ಕೇಳುವುದರಿಂದ ನಂಬಿಕೆಯು ಹುಟ್ಟುತ್ತದೆ, ಕೇಳಿಸಿಕೊಳ್ಳುವುದು ಕ್ರಿಸ್ತನ ವಾಕ್ಯವಾಗಿದೆ. 18 ಆದರೂ “ಅವರಿಗೆ ಕೇಳಿಸಲಿಲ್ಲವೇನೋ?” ಎಂದು ಹೇಳುತ್ತೇನೆ. ಹೌದು ನಿಶ್ಚಯವಾಗಿ ಕೇಳಿಸಿಕೊಂಡಿದ್ದರು. ಕೀರ್ತ 19:4“ಸಾರುವವರ ಧ್ವನಿಯು ಭೂಮಿಯಲ್ಲೆಲ್ಲಾ ಪ್ರಸರಿಸಿತು, ಅವರ ನುಡಿಗಳು ಲೋಕದ ಕಟ್ಟಕಡೆಯವರೆಗೂ ವ್ಯಾಪಿಸಿದವು.” 19 ಆದರೆ “ಇಸ್ರಾಯೇಲ್ಯರು ಆ ವಾರ್ತೆಯನ್ನು ತಿಳಿದುಕೊಳ್ಳಲಿಲ್ಲವೇನು” ಎಂದು ಹೇಳುತ್ತೇನೆ. ಈ ವಿಷಯದಲ್ಲಿ, §ಧರ್ಮೋ 32:21“ಜನಾಂಗವಲ್ಲದವರ ಮೂಲಕ ನಿಮ್ಮಲ್ಲಿ ಅಸೂಯೆ ಹುಟ್ಟುವಂತೆ ಪ್ರೆರೇಪಿಸುತ್ತೇನೆ; ವಿವೇಕವಿಲ್ಲದ ಜನರ ಮೂಲಕ ನಿಮ್ಮನ್ನು ರೊಚ್ಚಿಗೆಬ್ಬಿಸುವೆನು” ಎಂದು ಮೊದಲು ಮೋಶೆಯು ಹೇಳುತ್ತಾನೆ. 20 ಇದಲ್ಲದೆ ಯೆಶಾಯನು ಧೈರ್ಯವಾಗಿ ಮಾತನಾಡಿ, *ಯೆಶಾ 65:1“ನನ್ನನ್ನು ಹುಡುಕದವರಿಗೂ ನಾನು ಸಿಕ್ಕಿದೆನು, ನನ್ನನ್ನು ಕೇಳದವರಿಗೆ ನಾನು ಪ್ರತ್ಯಕ್ಷನಾದೆನು,” ಎಂದು ಹೇಳುತ್ತಾನೆ. 21 ಆದರೆ ಅವನು ಇಸ್ರಾಯೇಲ್ಯರನ್ನು ಕುರಿತು, ಯೆಶಾ 65:2“ನನ್ನ ಮಾತಿಗೆ ಅವಿಧೇಯರಾಗಿ ಎದುರುಮಾತನಾಡುವ ಜನರನ್ನು ನಾನು ದಿನವೆಲ್ಲಾ ಎಡೆಬಿಡದೆ ಕೈ ಚಾಚಿ ಕರೆದೆನೆಂದು” ಆತನು ಹೇಳುತ್ತಾನೆ.

*10:2 ಅ. ಕೃ. 21:20

10:3 ರೋಮಾ. 1:17

10:5 ಯಾಜ 18:5; ಯೆಹೆ. 20:11,13; ಮತ್ತಾ 19:17; ಲೂಕ 10:28; ಗಲಾ. 3:12

§10:6 ರೋಮಾ. 9:30

*10:6 ಧರ್ಮೋ 30:12-14

10:9 ಮತ್ತಾ 10:32; ಲೂಕ 12:8

10:9 ಅ. ಕೃ. 2:24; 1 ಪೇತ್ರ 1:21

§10:11 ಯೆಶಾ 28:16; ರೋಮಾ. 9:33

*10:12 ರೋಮಾ. 3:22,29

10:12 ಅ. ಕೃ. 10:36

10:13 ಯೋವೇ. 2:32; ಅ. ಕೃ. 2:21

§10:15 ಯೆಶಾ 52:7; ನಹೂ. 1:15

*10:16 ಇಬ್ರಿ. 4:2

10:16 ಯೆಶಾ 53:1; ಯೋಹಾ 12:38

10:18 ಕೀರ್ತ 19:4

§10:19 ಧರ್ಮೋ 32:21

*10:20 ಯೆಶಾ 65:1

10:21 ಯೆಶಾ 65:2