120
ದೇವಾಲಯಕ್ಕೆ ಹೋಗುವಾಗ ಹಾಡುವ ಗೀತೆ.
ನಾನು ಆಪತ್ತಿನಲ್ಲಿದ್ದಾಗ
ಯೆಹೋವನಿಗೆ ಮೊರೆಯಿಟ್ಟೆನು.
ಆತನು ನನಗೆ ಸದುತ್ತರವನ್ನು ದಯಪಾಲಿಸಿದನು.
ಯೆಹೋವನೇ, ಸುಳ್ಳಾಡುವವರಿಂದಲೂ
ವಂಚಕರಿಂದಲೂ ನನ್ನನ್ನು ರಕ್ಷಿಸು.
 
ಸುಳ್ಳುಗಾರರೇ, ನಿಮಗೆ ದೇವರಿಂದ ಬರುವ ದಂಡನೆಯನ್ನು ಬಲ್ಲಿರಾ?
ನಿಮಗೆ ಯಾವ ಶಿಕ್ಷೆಯನ್ನು ಒದಗಿಸಬೇಕು?
ಯುದ್ಧವೀರನ ತೀಕ್ಷ್ಣವಾದ ಬಾಣದಿಂದಲೂ ಉರಿಯುವ ಕೆಂಡಗಳಿಂದಲೂ ದೇವರು ನಿಮ್ಮನ್ನು ದಂಡಿಸುವನು.
 
ಸುಳ್ಳುಗಾರರಾದ ನಿಮ್ಮ ಸಮೀಪದಲ್ಲಿ ವಾಸಿಸುವುದು
ಮೇಷೆಕಿನಲ್ಲಿಯೂ ಕೇದಾರಿನ ಗುಡಾರಗಳಲ್ಲಿಯೂ* ವಾಸಿಸುವಂತಿರುವುದು.
ಶಾಂತಿದ್ವೇಷಕರೊಂದಿಗೆ ನಾನು ಬಹುಕಾಲ ವಾಸಿಸಿದ್ದೇನೆ.
ಶಾಂತಿ ನೆಲೆಸಿರಲಿ ಎಂದು ನಾನು ಹೇಳಿದರೂ ಅವರು ಯುದ್ಧವನ್ನೇ ಇಷ್ಟಪಡುತ್ತಾರೆ.
 
* 120:5 ಮೇಷೆಕಿನಲ್ಲಿಯೂ ಕೇದಾರಿನ ಗುಡಾರಗಳಲ್ಲಿಯೂ ಈ ಸ್ಥಳಗಳ ಜನರು ಪ್ರಖ್ಯಾತ ಹೋರಾಟಗಾರರು.