97
ಸಾರ್ವಭೌಮನಾದ ಯೆಹೋವನನ್ನು ಸ್ತುತಿಸುವುದು
ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ;
ಭೂಲೋಕವು ಸಂತೋಷಿಸಲಿ;
ಸಮುದ್ರದ ತೀರಪ್ರದೇಶಗಳೆಲ್ಲಾ ಹರ್ಷಿಸಲಿ.
ಮೋಡಗಳೂ, ಕಾರ್ಗತ್ತಲೆಯೂ ಆತನ ಸುತ್ತಲೂ ಇರುತ್ತವೆ;
ಯೆಹೋವನು ನೀತಿ ಮತ್ತು ನ್ಯಾಯಗಳಿಂದ ಆಳುತ್ತಾನೆ*.
ಬೆಂಕಿಯು ಆತನ ಮುಂದೆ ಹೋಗಿ,
ಸುತ್ತಲೂ ಆವರಿಸಿ ಆತನ ವೈರಿಗಳನ್ನು ದಹಿಸಿಬಿಡುತ್ತದೆ.
ಆತನ ಮಿಂಚುಗಳು ಲೋಕವನ್ನು ಬೆಳಗಿಸಿದವು;
ಭೂಮಿಯು ಅದನ್ನು ಕಂಡು ನಡುಗಿತು.
ಸಾರ್ವಭೌಮನಾದ ಯೆಹೋವನ ಎದುರಿನಲ್ಲಿ
ಪರ್ವತಗಳು ಮೇಣದಂತೆ ಕರಗಿಹೋದವು.
ಗಗನಮಂಡಲವು ಆತನ ನೀತಿಯನ್ನು ಪ್ರಸಿದ್ಧಪಡಿಸಿತು;
ಎಲ್ಲಾ ಜನರು ಆತನ ಮಹಿಮೆಯನ್ನು ಕಂಡರು.
ವಿಗ್ರಹಗಳಲ್ಲಿ ಹಿಗ್ಗುವವರೂ,
ಮೂರ್ತಿಪೂಜಕರೆಲ್ಲರೂ ನಾಚಿಕೆಗೆ ಒಳಪಡುವರು;
ದೇವರುಗಳೆಂದು ಕರೆಯಲ್ಪಡುವವರೇ, ನೀವೆಲ್ಲರೂ ಆತನಿಗೆ ಅಡ್ಡಬೀಳಿರಿ.
ಯೆಹೋವನೇ, ನೀನು ನ್ಯಾಯಸ್ಥಾಪಿಸಿದ ವಾರ್ತೆಯನ್ನು ಕೇಳಿ
ಚೀಯೋನ್ ಪಟ್ಟಣವು ಹರ್ಷಿಸಿತು;
ಯೆಹೂದ ಪ್ರಾಂತ್ಯದ ಊರುಗಳು ಸಂತೋಷಿಸಿದವು.
ಯೆಹೋವನೇ, ನೀನು ಭೂಲೋಕದ ಸರ್ವಾಧಿಕಾರಿ;
ಎಲ್ಲಾ ದೇವರುಗಳಲ್ಲಿ ಮಹೋನ್ನತನು ನೀನೇ.
10  ಕೆಟ್ಟತನವನ್ನು ಹಗೆಮಾಡುವವರನ್ನು, ಯೆಹೋವನನ್ನು ಪ್ರೀತಿಸುತ್ತಾನೆ.
ಆತನು ತನ್ನ ಭಕ್ತರ ಪ್ರಾಣಗಳನ್ನು ಕಾಯುವವನಾಗಿ,
ದುಷ್ಟರ ಕೈಯೊಳಗಿಂದ ಅವರನ್ನು ಬಿಡಿಸುವನು.
11 ನೀತಿವಂತರಿಗೋಸ್ಕರ ಬೆಳಕು ಪ್ರಕಾಶಿಸುವುದು§,
ಯಥಾರ್ಥಹೃದಯವುಳ್ಳವರಿಗೆ ಸಂತೋಷವೂ ಕೊಡಲ್ಪಟ್ಟಿವೆ.
12 ನೀತಿವಂತರೇ, ಯೆಹೋವನಲ್ಲಿ ಆನಂದಿಸಿರಿ;
ಆತನ ಪರಿಶುದ್ಧನಾಮವನ್ನು ಕೊಂಡಾಡಿರಿ.*
* 97:2 97:2 ಯೆಹೋವನು ನೀತಿ ಮತ್ತು ನ್ಯಾಯಗಳಿಂದ ಆಳುತ್ತಾನೆ ಮೂಲತಃ ನೀತಿ ಮತ್ತು ನ್ಯಾಯಗಳು ಆತನ ಸಿಂಹಾಸನದ ಅಸ್ತಿವಾರ. 97:7 97:7 ಅಥವಾ ದೇವರುಗಳೆಂದು ಕರೆಯಲ್ಪಡುವವರೇ, ನೀವೆಲ್ಲರೂ ಆತನಿಗೆ ಅಡ್ಡಬೀಳುತ್ತಾರೆ. 97:10 97:10 ಅಥವಾ ಯೆಹೋವನನ್ನು ಪ್ರೀತಿಸುವವರೇ, ಕೆಟ್ಟತನವನ್ನು ಹಗೆಮಾಡಿರಿ. § 97:11 97:11 ಪ್ರಕಾಶಿಸುವುದು ಅಥವಾ ಬಿತ್ತಲ್ಪಟ್ಟಿದೆ. * 97:12 97:12 ಆತನ ಪರಿಶುದ್ಧನಾಮವನ್ನು ಕೊಂಡಾಡಿರಿ. ಅಥವಾ ಆತನ ಪರಿಶುದ್ಧ ಸ್ಮರಣೆಗಾಗಿ ಕೊಂಡಾಡಿರಿ.